‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ
ರಾಜಮೌಳಿ- ಅಲ್ಲು ಅರ್ಜುನ್
Follow us
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:49 PM

‘ಪುಷ್ಪ 2’ ಸಿನಿಮಾಗೆ ಈಗಾಗಲೇ ಬುಕಿಂಗ್ ಓಪನ್ ಆಗಿದೆ. ಡಿಸೆಂಬರ್ 5ರಂದು ರಿಲೀಸ್ ಆಗಲಿರೋ ಸಿನಿಮಾಗೆ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸ ‘ಪುಷ್ಪ 2’ ತಂಡದಿಂದ ಆಗುತ್ತಿದೆ. ಈ ಚಿತ್ರದ ಹಾಡುಗಳನ್ನು ಕೂಡ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಹೈದರಾಬಾದ್​ನಲ್ಲಿ ನಡೆದಿದೆ. ಈ ವೇಳೆ ರಾಜಮೌಳಿ ಅವರು ಈ ಈವೆಂಟ್​ನಲ್ಲಿ ಮುಖ್ಯ ಅತಿಥಿಯಾಗು ಬಂದಿದ್ದರು.

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ. ಉತ್ತರ ಭಾರತದ ಕಡೆ ಪ್ರಚಾರಕ್ಕೆ ತೆರಳೋ ಅವಶ್ಯಕತೆ ಇಲ್ಲ ಎಂದಿದ್ದಾರೆ ರಾಜಮೌಳಿ.

‘ಉತ್ತರ ಭಾರತಕ್ಕೆ ನೀವು ಹೋಗಬೇಕೆಂದಿಲ್ಲ. ಪುಷ್ಪ ಸೀಕ್ವೆಲ್​ಗೆ ಪ್ರಮೋಷನ್ ಅಗತ್ಯ ಇಲ್ಲ. ಈಗಾಗಲೇ ಸಿನಿಮಾಗೆ ದೊಡ್ಡ ಬೂಸ್ಟ್ ಸಿಕ್ಕಿದೆ. ಭಾರತಾದ್ಯಂತ ಪುಷ್ಪ 2 ಚಿತ್ರಕ್ಕೆ ಟಿಕೆಟ್ ಪಡೆದು ಜನರು ಸಿನಿಮಾ ನೋಡಲು ರೆಡಿ ಆಗಿದ್ದಾರೆ’ ಎಂದಿದ್ದಾರೆ ರಾಜಮೌಳಿ.

‘ನಾನು ಇತ್ತೀಚೆಗೆ ರಾಮೋಜಿ ಫಿಲ್ಮ್​ ಸಿಟಿಗೆ ಭೇಟಿ ನೀಡಿದ್ದೆ. ಈ ವೇಳೆ ಪುಷ್ಪ 2 ಚಿತ್ರದ ಶೂಟಿಂಗ್ ಅಲ್ಲಿ ನಡೆಯುತ್ತಿದೆ ಅನ್ನೋದು ಗೊತ್ತಾಯಿತು. ಈ ವೇಳೆ ನಾನು ಅಲ್ಲಿಗೆ ತೆರಳಿದೆ. ಆಗ ಸೆಟ್​ ನೋಡಿ ಹೌಹಾರಿದೆ. ಮೊದಲ ದೃಶ್ಯ ಇಂಪ್ರೆಸ್ ಮಾಡಿದರೆ ಇಡೀ ಸಿನಿಮಾ ಮುಂದಿನ ಹಂತಕ್ಕೆ ಹೋಗುತ್ತದೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರಕ್ಕೆ ಡಿಸೆಂಬರ್ 5ರ ಮಧ್ಯರಾತ್ರಿಯಿಂದಲೇ ಶೋ ಆರಂಭಗೊಳ್ಳುತ್ತಿದೆ. ಟಿಕೆಟ್ ಬೆಲೆ ಕೂಡ ಹೆಚ್ಚಿದೆ. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?
ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಎಟಿಎಂನಿಂದ ಹಣ ದೋಚಿದವ ಹೆಂಡತಿಗಾಗಿ ಎರಡು ಚಿನ್ನದ ಸರಗಳನ್ನು ಖರೀದಿಸಿದ
ಎಟಿಎಂನಿಂದ ಹಣ ದೋಚಿದವ ಹೆಂಡತಿಗಾಗಿ ಎರಡು ಚಿನ್ನದ ಸರಗಳನ್ನು ಖರೀದಿಸಿದ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು
ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು
ಉಗ್ರಂ ಮಂಜು-ಗೌತಮಿಯ ತಪ್ಪುಗಳ ಎತ್ತಿ ತೋರಿಸಿದ ಹನುಮಂತು
ಉಗ್ರಂ ಮಂಜು-ಗೌತಮಿಯ ತಪ್ಪುಗಳ ಎತ್ತಿ ತೋರಿಸಿದ ಹನುಮಂತು