ಅಪ್ರಾಪ್ತೆ ಮೇಲೆ ಟಿಕ್ಟಾಕ್ ಸ್ಟಾರ್ ಅತ್ಯಾಚಾರ; ಪೊಸ್ಕೊ ಕಾಯ್ದೆ ಅಡಿ ಬಂಧನ
ಭಾರ್ಗವ್ ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ-ತಾಯಿ ವಿಶಾಖಪಟ್ಟಣಂ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 16ರಂದು ದೂರು ದಾಖಲು ಮಾಡಿದ್ದರು.
ಟಿಕ್ ಟಾಕ್ ಸ್ಟಾರ್ ಹಾಗೂ ಫನ್ ಬಕೆಟ್ ಯೂಟ್ಯೂಬ್ ಚಾನೆಲ್ ಖ್ಯಾತಿಯ ಭಾರ್ಗವ್ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಪೊಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಓಹ್ ಮೈ ಗಾಡ್.. ಓಹ್ ಮೈ ಗಾಡ್ ಹೆಸರಿನ ಟಿಕ್ ಟಾಕ್ ವಿಡಿಯೋ ಒಂದನ್ನು ಭಾರ್ಗವ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಹಾಡನ್ನು ಅನೇಕ ಬ್ರ್ಯಾಂಡ್ಗಳು ತಮ್ಮ ಪ್ರಮೋಷನ್ಗೆ ಬಳಕೆ ಮಾಡಿಕೊಂಡಿದ್ದವು. ಈಗ ಭಾರ್ಗವ್ ವಿರುದ್ಧ ಬಾಲಕಿಯ ಕುಟುಂಬದವರು ಕೇಸ್ ದಾಖಲು ಮಾಡಿದ್ದಾರೆ.
ಭಾರ್ಗವ್ ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ-ತಾಯಿ ವಿಶಾಖಪಟ್ಟಣಂ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 16ರಂದು ದೂರು ದಾಖಲು ಮಾಡಿದ್ದರು. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಆಂಧ್ರಪ್ರದೇಶ ಪೊಲೀಸರು ಭಾರ್ಗವ್ ಅವರನ್ನು ಬಂಧಿಸಿದ್ದಾರೆ.
ಸಂತ್ರಸ್ತೆ ಎದುರು ಭಾರ್ಗವ್ ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆದರೆ, ಬಾಲಕಿ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ, ಆತ ಬ್ಲಾಕ್ಮೇಲ್ ಮಾಡಲು ಆರಂಭಿಸಿದ್ದ. ಇತ್ತೀಚೆಗೆ ಬಾಲಕಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಗರ್ಭಿಣಿ ಎನ್ನುವ ವಿಚಾರ ತಿಳಿದು ಬಂದಿದೆ. ನಂತರ ಪಾಲಕರು ಠಾಣೆ ಮೆಟ್ಟಿಲೇರಿದ್ದಾರೆ. ಈಗಾಗಲೆ ಭಾರ್ಗವ್ ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದ್ದು, ಮೇ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಶೃಂಗೇರಿ ಅಪ್ರಾಪ್ತೆ ಅತ್ಯಾಚಾರ ಪ್ರಕರಣ: ಅಂತಿಮ ಹಂತಕ್ಕೆ ಬಂದ ತನಿಖೆ