AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆ. 2ಕ್ಕೆ ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್

ಜೀ ಕನ್ನಡ ವಾಹಿನಿಯು ತಾಯಂದಿರಿಗಾಗಿ ವಿಶೇಷವಾಗಿ ಹಮ್ಮಿಕೊಂಡಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ರಿಯಾಲಿಟಿ ಶೋನ ಮೊದಲ ಹಂತದ ಆಡಿಷನ್ ಆಗಸ್ಟ್ 2 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ನೃತ್ಯದ ಪ್ರತಿಭೆ ಹೊಂದಿರುವ ಅಮ್ಮಂದಿರಿಗೆ ತಮ್ಮ ಕೌಶಲವನ್ನು ಜಗತ್ತಿಗೆ ಪ್ರದರ್ಶಿಸಲು ವಾಹಿನಿಯು ಈ ಮೂಲಕ ಸುವರ್ಣ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

ಬೆಂಗಳೂರಿನಲ್ಲಿ ಆ. 2ಕ್ಕೆ ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್
ಸೂಪರ್ ಮಾಮ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 01, 2026 | 7:53 AM

Share

ಜೀ ಕನ್ನಡ ವಾಹಿನಿಯಲ್ಲಿ ಹಲವು ರಿಯಾಲಿಟಿ ಶೋಗಳು ಬಂದು ಹೋಗಿವೆ. ಎಲ್ಲಾ ರಿಯಾಲಿಟಿ ಶೋಗಳು ಭಿನ್ನವಾಗಿವೆ. ಬಹುತೇಕ ರಿಯಾಲಿಟಿ ಶೋಗಳಲ್ಲಿ ಯುವ ಜನತೆಗೆ ಅವಕಾಶ ಸಿಗುತ್ತದೆ. ಈಗ ಪ್ರಮುಖ ರಿಯಾಲಿಟಿ ಶೋಗಳಲ್ಲೊಂದಾದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಇದೀಗ ತಾಯಂದಿರಿಗಾಗಿ ವಿಶೇಷ ಸರಣಿಯನ್ನು ಆರಂಭಿಸುತ್ತಿದ್ದು, ಇದರ ಮೊದಲ ಹಂತದ ಆಡಿಷನ್ ಆಗಸ್ಟ್ 2ರ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದೆ. ಆಸಕ್ತಿ ಇರುವವರು ಇದರಲ್ಲಿ ಭಾಗವಹಿಸಬಹುದು.

ನೃತ್ಯದಲ್ಲಿ ಆಸಕ್ತಿ ಹೊಂದಿರುವ ಹಾಗೂ ಉತ್ತಮವಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಈ ಶೋ ಮೂಲಕ ವೇದಿಕೆ ಕಲ್ಪಿಸಲಾಗುತ್ತಿದೆ. ಗೃಹಿಣಿಯರು ಹಾಗೂ ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಅರ್ಹ ತಾಯಂದಿರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ನಿತ್ಯ ಮಾಡುವ ಕಾಯಕವನ್ನೇ ಮಾಡುವ ಬದಲು ತಮ್ಮ ಪ್ರತಿಭೆಯನ್ನು ಜಗತ್ತಿಗೆ ತೋರಿಸಲು ಇದು ಒಳ್ಳೆಯ ಅವಕಾಶ. ಬೆಂಗಳೂರು ಸೇರಿದಂತೆ ಉಳಿದ ಆಡಿಷನ್ ವಿವರ ಸೋಶಿಯಲ್ ಮೀಡಿಯಾ ಪೋಸ್ಟ್​ನಲ್ಲಿದೆ.

View this post on Instagram

A post shared by Zee Kannada (@zeekannada)

ಆಡಿಷನ್ ನಡೆಯುವ ಸ್ಥಳ ಮತ್ತು ಸಮಯ:

ಆಗಸ್ಟ್ 2ರ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಉತ್ತರಹಳ್ಳಿ ಹೋಬಳಿ, ಚಿಕ್ಕಲಸಂದ್ರದ ಹನುಮಗಿರಿ ಲೇಔಟ್‌ನಲ್ಲಿರುವ ಮಧು ಆರ್ಟ್ಸ್ ಸ್ಟುಡಿಯೋದಲ್ಲಿ (ಅಬ್ಬಯ್ಯ ನಾಯ್ಡು ಸ್ಟುಡಿಯೋ) ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: ಅಮ್ಮಂದಿರಿಗೆ ಸುವರ್ಣಾವಕಾಶ; ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್   ಸೂಪರ್ ಮಾಮ್

ಭಾಗವಹಿಸುವವರಿಗೆ ಸೂಚನೆಗಳು:

ಆಡಿಷನ್‌ನಲ್ಲಿ ಪಾಲ್ಗೊಳ್ಳಲು ಬಯಸುವ ಸ್ಪರ್ಧಿಗಳು ತಮ್ಮ ಇತ್ತೀಚಿನ ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ವಿಳಾಸದ ಪುರಾವೆಯ ಜೆರಾಕ್ಸ್ ಪ್ರತಿಗಳನ್ನು ತರುವುದು ಕಡ್ಡಾಯವಾಗಿದೆ. ಈ ಆಡಿಷನ್ ಸಂಪೂರ್ಣ ಉಚಿತವಾಗಿದ್ದು, ಭಾಗವಹಿಸಲು ಜೀ ಕನ್ನಡ ವಾಹಿನಿಯು ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್