ರಮೇಶ್ ಅರವಿಂದ್, ಅನುಶ್ರೀ ಸೇರಿ ‘ಮಹಾನಟಿ’ ತಂಡದ ವಿರುದ್ಧ ದಾಖಲಾಯ್ತು ದೂರು; ಕಾರಣವೇನು?

ರಿಯಾಲಿಟಿ ಶೋನಲ್ಲಿ ಬಳಕೆ ಆದ ಸಾಲುಗಳಿಗೆ ವಿರೋಧ ವ್ಯಕ್ತವಾಗಿದೆ. ಶ್ರಮಿಕ ವರ್ಗದ ಬಗ್ಗೆ ರಿಯಾಲಿಟಿ ಶೋಗಳಲ್ಲಿ ಈ ರೀತಿಯ ಕುಹಕ ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ತಕ್ಷಣಕ್ಕೆ ವಾಹಿನಿಯವರು ಕ್ಷಮೆ ಕೇಳಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿದೆ. ಇದಕ್ಕೆ ವಾಹಿನಿ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತದೆ ನೋಡಬೇಕಿದೆ.

ರಮೇಶ್ ಅರವಿಂದ್, ಅನುಶ್ರೀ ಸೇರಿ ‘ಮಹಾನಟಿ’ ತಂಡದ ವಿರುದ್ಧ ದಾಖಲಾಯ್ತು ದೂರು; ಕಾರಣವೇನು?
ಅನುಶ್ರೀ, ಪ್ರೇಮಾ, ರಮೇಶ್
Follow us
ರಾಜೇಶ್ ದುಗ್ಗುಮನೆ
|

Updated on: Apr 29, 2024 | 1:15 PM

‘ಮಹಾನಟಿ’ (Mahanati) ರಿಯಾಲಿಟಿ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಈ ಶೋನಲ್ಲಿ ರಮೇಶ್​ ಅರವಿಂದ್, ಪ್ರೇಮಾ ಮೊದಲಾದವರು ಜಡ್ಜ್ ಸ್ಥಾನದಲ್ಲಿದ್ದರೆ, ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ಈಗ ಇವರ ವಿರುದ್ಧ ಕೇಸ್ ದಾಖಲಾಗಿದೆ. ಈ ಶೋನಲ್ಲಿ ಬಳಕೆ ಆದ ಸಾಲಿನ ಕುರಿತು ಕೆಲವರು ಅಪಸ್ವರ ತೆಗೆದಿದ್ದಾರೆ. ಅಸಲಿಗೆ ನಡೆದಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಮಹಾನಟಿ’ ರಿಯಾಲಿಟಿ ಶೋ ಶನಿವಾರ ಹಾಗೂ ಭಾನುವಾರ ರಾತ್ರಿ 7:30ಕ್ಕೆ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಈ ಶೋನಲ್ಲಿ ಸ್ಪರ್ಧಿಯೊಬ್ಬರು ಆ್ಯಕ್ಟಿಂಗ್ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆ ಹುಟ್ಟುಹಾಕಿದೆ. ‘ಮೆಕ್ಯಾನಿಕ್​ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್​ ಕೆಲಸ ಮಾಡುವವರ  ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.

ದೂರು ಕೊಟ್ಟವರು ಯಾರು?

ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ. ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದರಲ್ಲಿ  ಆ್ಯಂಕರ್ ಅನುಶ್ರೀ, ಜಡ್ಜ್​ಗಳಾದ ರಮೇಶ್ ಅರವಿಂದ್, ನಟಿ ಪ್ರೇಮಾ ಹೆಸರು ಕೂಡ ಇದೆ.

ವಾದ ಏನು?

ರಿಯಾಲಿಟಿ ಶೋನಲ್ಲಿ ಬಳಕೆ ಆದ ಸಾಲುಗಳಿಗೆ ವಿರೋಧ ವ್ಯಕ್ತವಾಗಿದೆ. ಶ್ರಮಿಕ ವರ್ಗದ ಬಗ್ಗೆ ರಿಯಾಲಿಟಿ ಶೋಗಳಲ್ಲಿ ಈ ರೀತಿಯ ಕುಹಕ ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ತಕ್ಷಣಕ್ಕೆ ವಾಹಿನಿಯವರು ಕ್ಷಮೆ ಕೇಳಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ನಟಿ ಸೌಂದರ್ಯಾ ಇನ್ನಿಲ್ಲ ಅನ್ನೋದು ನಂಬಲಾಗದೇ ರಮೇಶ್ ಅರವಿಂದ್ ಏನು ಮಾಡಿದ್ರು ಗೊತ್ತಾ?

ಶೋ ಬಗ್ಗೆ

ಜೀ ಕನ್ನಡದಲ್ಲಿ ಹಲವು ರೀತಿಯ ರಿಯಾಲಿಟಿ ಶೋಗಳು ಪ್ರಸಾರ ಕಂಡಿದ್ದು, ಈಗ ‘ಮಹಾನಟಿ’ ಶೋ ಪ್ರಸಾರ ಕಾಣುತ್ತಿದೆ. ಈ ಕಾರ್ಯಕ್ರಮದ ಮೂಲಕ ನಟನಾ ಪ್ರತಿಭೆಯನ್ನು ಜಗತ್ತಿಗೆ ತೋರಿಸುವ ಕೆಲಸ ಆಗುತ್ತಿದೆ. ನಟ, ನಿರ್ದೇಶಕ ರಮೇಶ್‌ ಅರವಿಂದ್‌, ನಿರ್ದೇಶಕ ತರುಣ್‌ ಸುಧೀರ್‌, ಹಿರಿಯ ನಟಿ ಪ್ರೇಮಾ, ಮತ್ತು ನಟಿ ನಿಶ್ವಿಕಾ ನಾಯ್ಡು ಈ ರಿಯಾಲಿಟಿ ಶೋನ ಜಡ್ಜ್‌ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅನುಶ್ರೀ ಆ್ಯಂಕರಿಂಗ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ