ವರುಣಾರ್ಭಟ: ಹಳ್ಳದಲ್ಲಿ ಮುಳುಗಿದ ಟ್ರ್ಯಾಕ್ಟರ್, ಮೇಲೆತ್ತಲು ಹರಸಾಹಸ

ಕೊಪ್ಪಳ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಒಂದಲ್ಲ ಒಂದು ಅವಾಂತರಗಳನ್ನು ಜನರು ಅನುಭವಿಸುವಂತಾಗಿದೆ. ನಿನ್ನೆ ರಾತ್ರಿ ಕೊಪ್ಪಳ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಟ್ರ್ಯಾಕ್ಟರ್ ಕೊಚ್ಚಿಹೋದ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನ ನೆಲೋಗಿಪುರ ಗ್ರಾಮದ ರೈತ ಟ್ರ್ಯಾಕ್ಟರ್ ಓಡಿಸಿಕೊಂಡು ಹೋಗುವಾಗ ಬೈರಾಪುರ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಟ್ರ್ಯಾಕ್ಟರ್ ಕೊಚ್ಚಿಕೊಂಡು ಹೋಗಿದೆ. ಪ್ರಾಣದ ಹಂಗು ತೊರೆದು ಜೆಸಿಬಿ ಮೂಲಕ ರೈತರು ಹಳ್ಳದಿಂದ ಟ್ರ್ಯಾಕ್ಟರ್ ಮೇಲೆತ್ತಿದ್ದಾರೆ.

Related Tags:

Related Posts :

Category:

error: Content is protected !!