ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಇಬ್ಬರು ಮಕ್ಕಳ ದಾರುಣ ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಚಳಗೇರಿ ಬಳಿ ನಡೆದಿದೆ.

ತನ್ನ ಇಬ್ಬರು ಮಕ್ಕಳ ಜೊತೆ ಜಮೀನಿನಲ್ಲಿ ಟ್ರ್ಯಾಕ್ಟರ್​ ಮೇಲೆ ನಿಂತು ಹನುಮಂತ ಎಂಬುವರು ಸೂರ್ಯಕಾಂತಿ ರಾಶಿ ಮಾಡ್ತಿದ್ರು. ಈ ವೇಳೆ ಟ್ರ್ಯಾಕ್ಟರ್​ನ ಮೇಲಿದ್ದವರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ 4 ವರ್ಷದ ಪ್ರಿಯಾಂಕಾ, 2 ವರ್ಷದ ಬೀರಪ್ಪ ಹಾಗು ತಂದೆ ಹನುಮಂತ ಬೀರಪ್ಪನವರ್​(30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇನ್ನು ಈ ಘಟನೆ ಸಂಬಂಧ ಕುಷ್ಟಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts :

Category:

error: Content is protected !!

This website uses cookies to ensure you get the best experience on our website. Learn more