ದೇವಸ್ಥಾನದ ಜಮೀನು ವಿವಾದಕ್ಕೆ ತಂದೆ-ಮಗ ಬಲಿ

ಕಲಘಟಗಿ ಪಿಎಲ್​ಡಿ ಬ್ಯಾಂಕ್​ ಸದಸ್ಯ ವೀರಭದ್ರಪ್ಪ ಸತ್ತೂರ ಹಾಗೂ ಆತನ ಮಗ ರವಿ ಹತ್ಯೆಗೆ ಜಮೀನು ವಿವಾದವೇ ಕಾರಣ ಎಂದು ಧಾರವಾಡ ಎಸ್​ಪಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಡರಾತ್ರಿ ಘಟನೆ ನಡೆದಿದ್ದು ಸ್ಥಳದಲ್ಲಿಯೇ ವೀರಭದ್ರಪ್ಪ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಪುತ್ರ ರವಿಕುಮಾರ್ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಘಟನೆಯಲ್ಲಿ ಇನ್ನೂ ಹಲವು ಮಂದಿಗೆ ಗಾಯಗಳಾಗಿದ್ದು, ಐವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್​ಪಿ ವರ್ತಿಕಾ ಕಟಿಯಾರ್ ಮಾಹಿತಿ ನೀಡಿದರು.

ಜಮ್ಮಿಹಾಳ ಗ್ರಾಮದ ಬಸವಣ್ಣ ದೇವಸ್ಥಾನದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ. ಗ್ರಾಮದ 17 ಜನರ ತಂಡ ತಂದೆ-ಮಗನನ್ನು ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ಜನರನ್ನು ಬಂಧಿಸಿದ್ದೇವೆ. ಅಲ್ಲದೆ ಜಮ್ಮಿಹಾಳ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ ಎಂದು ಎಸ್​ಪಿ ವರ್ತಿಕಾ ಕಟಿಯಾರ್ ಹೇಳಿದ್ದಾರೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!