ಆಸ್ತಿ ವಿಚಾರಕ್ಕೆ ಕೊಡಲಿ, ಕೋಲುಗಳಿಂದ 2 ಕುಟುಂಬಗಳ ಮಧ್ಯೆ ಮಾರಾಮಾರಿ! ಐವರಿಗೆ ಗಾಯ

ಯಾದಗಿರಿ: ಆಸ್ತಿ ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಿನ್ನೆ ನಡೆದಿದೆ. ಎರಡು ಕುಟುಂಬಗಳ ಸದಸ್ಯರು ಆಸ್ತಿ ವಿಚಾರವಾಗಿ ಕೈಯಲ್ಲಿ ಕೊಡಲಿ, ಕೋಲು ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಈ ಪೈಕಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ನಾಲ್ಕು ಮಂದಿಗೆ ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಈ ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಜಗಳ ನಡೀತಾನೆ ಇತ್ತು. ನಿನ್ನೆ ಜಗಳ ವಿಕೋಪಕ್ಕೆ ಹೋಗಿ ಹೊಡೆದಾಡಿಕೊಂಡಿದ್ದಾರೆ. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts :

Category:

error: Content is protected !!

This website uses cookies to ensure you get the best experience on our website. Learn more