ವೋಟರ್​ ID ಪಡೆದು ಹಣ ಹಂಚಿಕೆ ಆರೋಪ: ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ FIR ದಾಖಲು

  • KUSHAL V
  • Published On - 17:24 PM, 28 Oct 2020

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್ ಐಡಿ ಪಡೆದು ಹಣ ಹಂಚಿಕೆ ಮಾಡಿದ್ದ ಆರೋಪದ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ FIR ದಾಖಲಾಗಿದೆ. ವೋಟರ್ ಐಡಿ ಕಲೆಕ್ಟ್ ಮಾಡಿ ಮತದಾರರರಿಗೆ ಸಾವಿರಾರು ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆಂಬ ಆರೋಪದಡಿಯಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಕೊಟ್ಟಿಟ್ಟು. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.