ಸರ್ದಾರ್ ಜಿ ಲಂಡನ್ ವಾಲೆ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ

ಬೆಂಗಳೂರು: ನಗರದ ಕೋರಮಂಗಲದ ವಿಪ್ರೋ ಸರ್ಕಲ್ ಬಳಿಯ ಸರ್ದಾರ್ ಜಿ ಲಂಡನ್ ವಾಲೆ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ಹೋಟೆಲ್‌ ಹೊತ್ತಿ ಉರಿದಿದೆ. ಸಿಲಿಂಡರ್ ಬ್ಲಾಸ್ಟ್ ಆಗಿ‌ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಘಟನಾಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು, ಸಿವಿಲ್ ಡಿಫೆನ್ಸ್‌ ಸಿಬ್ಬಂದಿ ದೌಡಾಯಿಸಿದ್ದಾರೆ. ಹೋಟೆಲ್​ನಲ್ಲಿದ್ದ ಸಿಬ್ಬಂದಿ, ಜನರನ್ನು ಹೊರ ಕಳಿಸಲಾಗಿದೆ. ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋರಮಂಗಲದ ಸುತ್ತಮುತ್ತ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Tags:

Related Posts :

Category: