ಟೆಂಪೋ-ಕಾರು ನಡುವೆ ಅಪಘಾತ: ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣ

ಧಾರವಾಡ: ತಾಲೂಕಿನ ಯರಿಕೊಪ್ಪ ಬಳಿ ಟೆಂಪೋ ಮತ್ತು ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ(40), ಈರಮ್ಮ(62), ಶಿವರಾಜು(2)  ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿ ಕಿಮ್ಸ್​ನಲ್ಲಿ ಚಿಕಿತ್ಸೆ ಫಲಿಸದೆ ರುದ್ರಪ್ಪ(66) ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು, ಕೊಪ್ಪಳ ಜಿಲ್ಲೆ ಗಂಗಾವತಿ ಮೂಲದವರು ಎಂದು ತಿಳಿದು ಬಂದಿದೆ.  ಅಪಘಾತದಲ್ಲಿ ಮತ್ತೊಂದು ಮಗು ಮತ್ತು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಎಸ್​ಪಿ ವರ್ತಿಕಾ ಕಟಿಯಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!