ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಲಾರಿ, ಅಲ್ಲೇ ಇದ್ದ ಪಾರ್ಲರ್ ನುಗ್ಗಿದ ಪರಿಣಾಮದಿಂದಾಗಿ 4 ಜನ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಈ ಭೀಕರ ಘಟನೆಯಲ್ಲಿ ಸ್ಥಳಿಯ ವಕೀಲ ಯಮುನಾಚಾರಿ, ವೆಂಕಟೇಶ, ಬೆಂಗಳೂರು ಮೂಲದ ಕಲಾಜಿಯಮ್, ನಿತೀಶಗೌಡ ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಒಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಉಳಿದ ಮೂರು ಜನ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಗಂಭೀರವಾಗಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕಂಟೇನರ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.