ಸಿದ್ದರಾಮಯ್ಯಗೆ ರಾಜ್ಯಪಾಲರ ‘ಗೆಟ್ ವೆಲ್ ಸೂನ್’ ಪತ್ರ

ಕೊರೊನಾ ಸೋಂಕು ತಗುಲಿಸಿಕೊಂಡು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇಗ ಗುಣಮುಖರಾಗಿರೆಂದು ಹಾರೈಸಿ ರಾಜ್ಯಪಾಲ ವಜುಭಾಯ್ ವಾಲಾ ಪತ್ರ ಬರೆದಿದ್ದಾರೆ.

ನಿಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ವಿಚಾರ ಗೊತ್ತಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೀವು ಆದಷ್ಟು ಬೇಗ ಗುಣಮುಖರಾಗಿ ಮನೆಗೆ ಹಿಂತಿರಗಿ ನಿಮ್ಮ ಎಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿರೆಂದು ಹಾರೈಸುತ್ತೇನೆ,” ಎಂದು ರಾಜ್ಯಪಾಲರು ಪತ್ರದಲ್ಲಿ ಬರೆದಿದ್ದಾರೆ.

ಕೊವಿಡ್-19 ಸೋಂಕಿನಿಂದ ಬಳಲುತ್ತಿರುವ ಸಿದ್ದರಾಮಯ್ಯನವರು ತಮ್ಮಂತೆಯೇ ಸೋಂಕಿಗೊಳಗಾಗಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೊಂದಿಗೆ ಬೆಂಗಳೂರಿನ ಒಂದು ಖಾಸಗಿ ಆಸ್ಪತ್ರೆಯಲ್ಲಿ ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Tags:

Related Posts :

Category: