ಭಾರಿ ಮಳೆಗೆ ಕೊಚ್ಚಿ ಹೋದ ಗುರ್ಲಕಟ್ಟಿ ಸೇತುವೆ!

ಗದಗ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿ ಹೋಗಿದೆ. ಈ ಸೇತುವೆ ನರಗುಂದ ಹಾಗೂ ಗುರ್ಲಕಟ್ಟಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಸದ್ಯ ಎರಡೂ ಗ್ರಾಮಗಳ ಜನ ಮತ್ತೊಂದು ಗ್ರಾಮಕ್ಕೆ ಹೋಗಲಾಗದೆ ಪರದಾಡುತ್ತಿದ್ದಾರೆ.

ಮಳೆಗೆ ನರಗುಂದ ತಾಲೂಕಿನ ಹಿರೇಹಳ್ಳ ಉಕ್ಕಿ ಹರಿಯುತ್ತಿದೆ. ಹಿರೇಹಳ್ಳದ ನೀರಿನ ರಭಸಕ್ಕೆ ಸೇತುವೆ ಕೊಚ್ಚಿಕೊಂಡು ಹೋಗಿದೆ. ಗುರ್ಲಕಟ್ಟಿ ಹಾಗೂ ಕಣಕೀಕೊಪ್ಪದಿಂದ ನರಗುಂದ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ. ನರಗುಂದ ತಾಲೂಕಿನಾದ್ಯಂತ 5ಕ್ಕೂ ಹೆಚ್ಚು ಮನೆಗಳು ಕುಸಿದಿವೆ.

Related Tags:

Related Posts :

Category:

error: Content is protected !!