ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇನ್ನೂ ಹತ್ತಿರ-ಹತ್ತಿರವಾದ ಜೋಡೆತ್ತುಗಳು

, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇನ್ನೂ ಹತ್ತಿರ-ಹತ್ತಿರವಾದ ಜೋಡೆತ್ತುಗಳು

ಧಾರವಾಡ:  ಉಪಚುನಾವಣೆಗೆ ಇನ್ನು ಮೂರೇ ದಿನ ಬಾಕಿ ಇದೆ. ಈ ಮಧ್ಯೆ ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಿನೇ ದಿನೆ ಜೆಡಿಎಸ್​ಗೆ ಹತ್ತಿರವಾಗುತ್ತಿರುವ ಡಿಕೆಶಿ ಇಂದು ಕುಮಾರಸ್ವಾಮಿಯನ್ನು ಭೇಟಿಯಾಗಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಜೋಡೆತ್ತುಗಳ ಮರು ಸಂಗಮ:
ಇತ್ತ, ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ಪ್ರಯಾಣಿಸುತ್ತಿದ್ದ ಹೆಚ್​ಡಿಕೆ ವಿಮಾನ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಮಾಡಲಾಗಿತ್ತು. ಅತ್ತ, ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ ನೋಟಿಸ್ ನೀಡಿದ ಕಾರಣ ಬೆಳಗಾವಿ ಪ್ರವಾಸ ಮೊಟುಕುಗೊಳಿಸಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ತೆರಳುತ್ತಿದ್ರು. ಹವಾಮಾನ ವೈಪರೀತ್ಯದಿಂದ ಡಿಕೆಶಿ ಪ್ರಯಾಣಿಸುತ್ತಿದ್ದ ವಿಮಾನವೂ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ. ಹೀಗಾಗಿ ಇದೇ ವೇಳೆ ಹೆಚ್​.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಪರಸ್ಪರ ಭೇಟಿಯಾಗಿ, ಗಹನವಾದ ಚರ್ಚೆಯಲ್ಲಿ ತೊಡಗಿದ್ದು ಗಮನಾರ್ಹವಾಗಿತ್ತು.
, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇನ್ನೂ ಹತ್ತಿರ-ಹತ್ತಿರವಾದ ಜೋಡೆತ್ತುಗಳು

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!