ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ -HD ಕುಮಾರಸ್ವಾಮಿ

ಬೆಂಗಳೂರು: JDS ಜತೆ ಮೈತ್ರಿಯಿಲ್ಲವೆಂದು ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮೈತ್ರಿ ಪ್ರಸ್ತಾಪ ಜೆಡಿಎಸ್‌ನಿಂದ ಮುಂದಿಟ್ಟಿರುವುದು ಯಾರು? 2018ರ ಫಲಿತಾಂಶ ಬಳಿಕ ಕಾಂಗ್ರೆಸ್‌ನವರೇ ದೇವೇಗೌಡರ ಮನೆ ಬಾಗಿಲಿಗೆ ಬಂದರು ಹೊರತಾಗಿ ನಾವು ಯಾರೂ ಕೂಡ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ HD ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಸರ್ಕಾರ ಅಲುಗಾಡಿಸುತ್ತಿರುವ, ಕಾಂಗ್ರೆಸ್ ಪಕ್ಷದ ವರ್ತನೆ ಮೈತ್ರಿಗೆ ಯೋಗ್ಯವಲ್ಲ ಎಂದು ಹೇಳಿದ್ದಾರೆ.

ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ. ಮೈತ್ರಿಧರ್ಮವನ್ನೂ ಧರ್ಮವೆಂದು ಕಾಂಗ್ರೆಸ್ ಒಪ್ಪುವುದಿಲ್ಲ. ಹೀಗಾಗಿ, ಕಾಂಗ್ರೆಸ್ ಜತೆ ಎಂದಿಗೂ ಮೈತ್ರಿ ಮಾಡಿಕೊಳ್ಳಲ್ಲ. ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಭಾವನೆ ಬೇಡ.ಹಾಗೆಯೇ ಜೆಡಿಎಸ್, ದೇವೇಗೌಡ ಹೆಸರನ್ನು ಬಳಸಿಕೊಂಡು ಆ ಪಕ್ಷದ ನಾಯಕರು ಲಾಭ ಮಾಡಿಕೊಳ್ಳುವುದೂ ಬೇಡ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ HDಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Related Tags:

Related Posts :

Category:

error: Content is protected !!