AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಮಾಹಿತಿ ಪಡೆಯಲು ಎಐ ಬಳಕೆ ಹೆಚ್ಚಳ: ಪ್ರತಿ 4ರಲ್ಲಿ ಒಬ್ಬರು ಎಐ ಮೇಲೆ ಅವಲಂಬನೆ

ಇಂದಿನ ಯುಗದಲ್ಲಿ, ಎಐ ಬಳಕೆ ವೇಗವಾಗಿ ಹೆಚ್ಚುತ್ತಿದೆ. ಇತ್ತೀಚಿನ ಅಧ್ಯಯನವೊಂದು 4ರಲ್ಲಿ ಒಬ್ಬರು ಆರೋಗ್ಯ ಸಂಬಂಧಿತ ಮಾಹಿತಿಯನ್ನು ಪಡೆಯಲು ಎಐ ಬಳಸುತ್ತಿದ್ದಾರೆ ಎಂದು ಹೇಳಿದೆ. ವಿಶೇಷವಾಗಿ ಯುವಜನತೆ ಆರೋಗ್ಯ ವಿಷಯದಲ್ಲಿ ಎಐ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಹಾಗಾದರೆ ಆರೋಗ್ಯ ಸಲಹೆಗೆ ಕೇವಲ ಎಐ ಅವಲಂಬಿಸುವುದು ಸರಿಯೇ? ಎಐ ನೀಡುವ ಮಾಹಿತಿಯನ್ನು ಕೇವಲ ಸಾಮಾನ್ಯ ಮಾರ್ಗದರ್ಶನಕ್ಕಾಗಿ ಮಾತ್ರ ಬಳಸಬೇಕೇ, ಬೇಡವೇ ಎಂಬುದನ್ನು ತಿಳಿದುಕೊಳ್ಳಿ.

ಆರೋಗ್ಯ ಮಾಹಿತಿ ಪಡೆಯಲು ಎಐ ಬಳಕೆ ಹೆಚ್ಚಳ: ಪ್ರತಿ 4ರಲ್ಲಿ ಒಬ್ಬರು ಎಐ ಮೇಲೆ ಅವಲಂಬನೆ
Ai Health Advice TrendImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 09, 2026 | 9:33 PM

Share

ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ ಜನರು ಆರೋಗ್ಯ ಸಂಬಂಧಿತ ಮಾಹಿತಿಗಾಗಿ ಕೂಡ ಎಐ ಸಾಧನಗಳನ್ನು ಹೆಚ್ಚು ಬಳಸುತ್ತಿರುವುದು ಹೊಸ ಅಧ್ಯಯನದಿಂದ ಬೆಳಕಿಗೆ ಬಂದಿದೆ. ಹೌದು, ಹೆಮಟಾಲಜಿ ಅಡ್ವೈಸರ್ (Hematology Advisor) ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಆರೋಗ್ಯದ ಬಗ್ಗೆ ಮಾಹಿತಿಗಾಗಿ ಎಐ ಆಧಾರಿತ ಟೂಲ್ಸ್ ಬಳಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಯುವಜನತೆ ಆರೋಗ್ಯ ವಿಷಯದಲ್ಲಿ ಎಐ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ.

ಅನಾರೋಗ್ಯದ ಲಕ್ಷಣಗಳು, ಆಹಾರ ಪದ್ಧತಿ, ಔಷಧಿಗಳ ಮಾಹಿತಿ, ತೂಕ ಇಳಿಕೆ ಸಲಹೆಗಳು ಮತ್ತು ಮಾನಸಿಕ ಆರೋಗ್ಯದ ಕುರಿತ ಪ್ರಶ್ನೆಗಳಿಗೆ ಜನರು ಎಐ ನೆರವು ಪಡೆಯುತ್ತಿದ್ದಾರೆ. ತಕ್ಷಣ ಉತ್ತರ ಸಿಗುವುದು ಮತ್ತು ಸುಲಭ ಭಾಷೆಯಲ್ಲಿ ಮಾಹಿತಿ ಲಭ್ಯವಾಗುವುದು ಇದರ ಜನಪ್ರಿಯತೆಗೆ ಪ್ರಮುಖ ಕಾರಣವಾಗಿದೆ. ಆದರೆ ವೈದ್ಯಕೀಯ ತಜ್ಞರು ಕೇವಲ ಎಐ ಮಾಹಿತಿಯನ್ನು ಸಂಪೂರ್ಣವಾಗಿ ನಂಬಬಾರದು ಎಂದು ಎಚ್ಚರಿಸಿದ್ದಾರೆ. ಎಐ ಸಾಮಾನ್ಯ ಮಾಹಿತಿ ನೀಡಬಹುದಾದರೂ, ಪ್ರತಿಯೊಬ್ಬರ ಆರೋಗ್ಯ ಪರಿಸ್ಥಿತಿ ವಿಭಿನ್ನವಾಗಿರುತ್ತದೆ. ಕೆಲವೊಮ್ಮೆ ಎಐ ತಪ್ಪು ಅಥವಾ ಅಪೂರ್ಣ ಮಾಹಿತಿ ನೀಡುವ ಸಾಧ್ಯತೆ ಇದೆ. ಜೊತೆಗೆ ಸ್ವಯಂ ಔಷಧಿ ಸೇವನೆಯ ಅಪಾಯವೂ ಹೆಚ್ಚಬಹುದು.

ಆರೋಗ್ಯ ಸಲಹೆಗೆ ಕೇವಲ ಎಐ ಅವಲಂಬಿಸುವುದು ಸರಿಯೇ?

ತಜ್ಞರ ಪ್ರಕಾರ, ಜ್ವರ, ಉಸಿರಾಟದ ತೊಂದರೆ, ತೀವ್ರ ನೋವು ಅಥವಾ ದೀರ್ಘಕಾಲದ ಕಾಯಿಲೆಗಳಂತಹ ಗಂಭೀರ ಸಮಸ್ಯೆಗಳಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಎಐ ನೀಡುವ ಮಾಹಿತಿಯನ್ನು ಕೇವಲ ಸಾಮಾನ್ಯ ಮಾರ್ಗದರ್ಶನವಾಗಿ ಮಾತ್ರ ಪರಿಗಣಿಸಬೇಕು. ಇದಲ್ಲದೆ, ಆರೋಗ್ಯ ಮಾಹಿತಿ ಪಡೆಯುವಾಗ ವಿಶ್ವಾಸಾರ್ಹ ಮೂಲಗಳನ್ನು ಮಾತ್ರ ಬಳಸುವುದು ಮುಖ್ಯ. ಯಾವುದೇ ಔಷಧಿ ಅಥವಾ ಸಪ್ಲಿಮೆಂಟ್ ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು ಎಂದು ತಜ್ಞರು ಸೂಚಿಸಿದ್ದಾರೆ. ತಂತ್ರಜ್ಞಾನ ಆರೋಗ್ಯ ಜಾಗೃತಿ ಹೆಚ್ಚಿಸಲು ಸಹಾಯಕವಾದರೂ, ವೈದ್ಯಕೀಯ ಪರಿಣಿತರಿಗೆ ಪರ್ಯಾಯವಲ್ಲ ಎಂಬ ಅರಿವು ಜನರಲ್ಲಿ ಮೂಡುವುದು ಅಗತ್ಯವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ