AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ 10,000 ಹೆಜ್ಜೆ ನಡೆಯುವವರು ಈ ವಿಷಯ ತಿಳಿದುಕೊಳ್ಳಲೇಬೇಕು!

ತೂಕ ಇಳಿಸಿಕೊಳ್ಳಲು ಮತ್ತು ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ವಾಕಿಂಗ್ ಮಾಡುವುದು ಒಳ್ಳೆಯದು. ಅದರಲ್ಲಿಯೂ ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸುವುದರಿಂದ ದೈಹಿಕ ಸದೃಢತೆ ಹೆಚ್ಚಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮಾತ್ರವಲ್ಲ ಈ ಅಭ್ಯಾಸ ಹೃದ್ರೋಗದ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ಹಾಗಾದರೆ ಈ ರೀತಿ ಮಾಡುವುದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳ ಬಗ್ಗೆ, ಅದರ ಜೊತೆಗೆ ಯಾಕೆ ಈ ಅಭ್ಯಾಸ ಆರೋಗ್ಯಕರ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದಿನಕ್ಕೆ 10,000 ಹೆಜ್ಜೆ ನಡೆಯುವವರು ಈ ವಿಷಯ ತಿಳಿದುಕೊಳ್ಳಲೇಬೇಕು!
ದಿನಕ್ಕೆ 10,000 ಹೆಜ್ಜೆ ನಡೆಯುವುದರಿಂದ ಸಿಗುವ ಪ್ರಯೋಜನ
ಪ್ರೀತಿ ಭಟ್​, ಗುಣವಂತೆ
|

Updated on: Nov 17, 2025 | 5:50 PM

Share

ಪ್ರತಿನಿತ್ಯ ತಪ್ಪದೆ ವಾಕಿಂಗ್ (Walking) ಮಾಡುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳುವುದು ಸುಲಭವಲ್ಲ. ಇದಕ್ಕಾಗಿ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಂಡಿರಬೇಕಾಗುತ್ತದೆ. ಆ ಸಾಲಿನಲ್ಲಿ ವಾಕಿಂಗ್ ಕೂಡ ಸೇರಿಕೊಳ್ಳುತ್ತದೆ. ಪ್ರತಿನಿತ್ಯ ನಡೆಯುವ ವ್ಯಕ್ತಿ ಅನಾರೋಗ್ಯದಿಂದ ದೂರವಿರುತ್ತಾನೆ. ಅದರಲ್ಲಿಯೂ ತೂಕ ಇಳಿಸಿಕೊಳ್ಳಲು ಮತ್ತು ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ದಿನಕ್ಕೆ 10,000 ಹೆಜ್ಜೆಗಳನ್ನು ನಡೆಯುವ ಗುರಿ ಇಟ್ಟುಕೊಳ್ಳುವುದು ಒಳ್ಳೆಯದು. ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸುವುದರಿಂದ ದೈಹಿಕ ಸದೃಢತೆ ಹೆಚ್ಚಾಗುತ್ತದೆ. ಹೃದ್ರೋಗದ ಅಪಾಯ ಕಡಿಮೆಯಾಗುತ್ತದೆ. ಅದಕ್ಕಾಗಿಯೇ ಇಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಹಾಗಾದರೆ ಈ ರೀತಿ ಮಾಡುವುದರಿಂದ ಸಿಗುವ ಪ್ರಯೋಜನಗಳೇನು, ಯಾಕೆ ಈ ಅಭ್ಯಾಸ ಆರೋಗ್ಯಕರ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ:

ದಿನಕ್ಕೆ 10,000 ಹೆಜ್ಜೆಗಳು ನಡೆಯುವುದು ಒಂದು ಉತ್ತಮ ಏರೋಬಿಕ್ ಚಟುವಟಿಕೆಯಾಗಿದೆ. ಚುರುಕಾದ ನಡಿಗೆಯು ನಿಮ್ಮ ಹೃದಯ ಬಡಿತವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಅದಕ್ಕಾಗಿಯೇ ನೀವು ಇದನ್ನು ನಿಯಮಿತವಾಗಿ ಮಾಡಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ:

ದಿನಕ್ಕೆ 10,000 ಹೆಜ್ಜೆಗಳು ನಡೆಯುವುದರಿಂದ ಚಯಾಪಚಯ ಕ್ರಿಯೆ ಹೆಚ್ಚಾಗುತ್ತದೆ. ಮಾತ್ರವಲ್ಲ ಇದೊಂದು ಉತ್ತಮ ವ್ಯಾಯಾಮವೂ ಹೌದು. ಮಾತ್ರವಲ್ಲ ತಜ್ಞರು ಹೇಳುವಂತೆ ಇದು ತೂಕ ಕಡಿಮೆ ಮಾಡಿಕೊಳ್ಳುವುದಕ್ಕೂ ಸಹಾಯ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ:

ಹಲವಾರು ಅಧ್ಯಯನಗಳು ದಿನಕ್ಕೆ 10,000 ಹೆಜ್ಜೆಗಳು ನಡೆಯುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಟೈಪ್- 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಹೃದಯಾಘಾತವನ್ನು ತಡೆಯಲು ಒಬ್ಬ ವ್ಯಕ್ತಿ ಪ್ರತಿನಿತ್ಯ ಎಷ್ಟು ಹೊತ್ತು ನಡೆಯಬೇಕು ತಿಳಿದುಕೊಳ್ಳಿ

ತೂಕ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ:

ಈ ರೀತಿ ನಡಿಗೆ ಮಾಡುವ ಅಭ್ಯಾಸವು ಕ್ಯಾಲೊರಿ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಆರೋಗ್ಯ ತಜ್ಞರು ಹೇಳುವಂತೆ ಈ ಅಭ್ಯಾಸವು ಹೆಚ್ಚು ಪರಿಣಾಮಕಾರಿ ತೂಕ ನಷ್ಟಕ್ಕೆ ಕಾರಣವಾಗುತ್ತದೆ.

ಸ್ನಾಯುವಿನ ಬಲವನ್ನು ಸುಧಾರಿಸುತ್ತದೆ:

ಪ್ರತಿನಿತ್ಯ ವೇಗವಾಗಿ ನಡಿಗೆ ಮಾಡುವ ಅಭ್ಯಾಸವು ಸ್ನಾಯುವಿನ ಬಲವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಅಧ್ಯಯನಗಳು ಕೂಡ ಅವು ನಿಮ್ಮ ಮೂಳೆಗಳು ಮತ್ತು ಕೀಲುಗಳ ಮೇಲೆ ಕಡಿಮೆ ಒತ್ತಡವನ್ನು ಉಂಟುಮಾಡುತ್ತದೆ ಮತ್ತು ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ ಎಂದಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು