ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ

ಪುಟಾಣಿ ಮಕ್ಕಳ ಅಪೌಷ್ಠಿಕತೆ ವರದಿ ನೀಡುವ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೇ ಶಾಕಿಂಗ್​ ರಿಪೋರ್ಟ್​ ಕೊಟ್ಟಿದೆ. ಕೊರೊನಾ ಹೋಯ್ತು ಎಂದು ಎಲ್ಲರೂ ನಿಟ್ಟುಸಿರು ಬಿಟ್ಟಿರುವ ಮಧ್ಯೆ ಕಣ್ಣಿಗೆ ಕಾಣದ ಹೆಮ್ಮಾರಿಯ ಆಟ ನಿಜಕ್ಕೂ ಭಯಬೀಳುವಂತಿದೆ.

ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on:Jul 03, 2023 | 9:52 AM

ಬೆಂಗಳೂರು: ಮಹಾಮಾರಿ ಕೊರೊನಾ (Corona) ಇಡೀ ವಿಶ್ವವನ್ನೇ ಹಿಂಡಿಹಿಪ್ಪೆ ಮಾಡಿತ್ತು. ಸಿಕ್ಕ ಸಿಕ್ಕವರನ್ನೇ ಬಲಿ ಪಡೆದಿತ್ತು. ಈಗ ಕೊರೊನಾ ಹೋಯ್ತು ಎಂದು ಎಲ್ಲರೂ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಕಣ್ಣಿಗೆ ಕಾಣದ ಹೆಮ್ಮಾರಿಯ ಆಟ ನಿಜಕ್ಕೂ ಭಯಬೀಳುವಂತಿದೆ. ಲಕ್ಷ ಲಕ್ಷ ಶಾಲಾ ಮಕ್ಕಳೇ(School Students) ಅಪೌಷ್ಠಿಕತೆಯಿಂದ(Malnutrition) ಬಳಲುವಂತಾಗಿದೆ. ಹೌದು.. ರಾಜ್ಯದಲ್ಲಿ ಕೊರೊನಾ ತಗ್ಗಿದ್ರೂ ಅದರ ಪರಿಣಾಮ ನಿಜಕ್ಕೂ ಎಂಥವರೂ ಬೆಚ್ಚಿಬೀಳಿಸುವಂತಿದೆ. ರಾಜ್ಯದಲ್ಲಿ ಬರೊಬ್ಬರಿ 2 ಲಕ್ಷಕ್ಕೂ ಅಧಿಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಪುಟಾಣಿ ಮಕ್ಕಳ ಬದುಕಿನಲ್ಲಿ ಹೆಮ್ಮಾರಿ ಕೊರೊನಾ ಕತ್ತಲನ್ನೇ ಸೃಷ್ಟಿಸಿದೆ. ಅಪೌಷ್ಠಿಕತೆಯ ಬಗ್ಗೆ ಯಾರೋ ವರದಿ ಮಾಡಿದ್ದು ಅಲ್ಲ. ಪುಟಾಣಿ ಮಕ್ಕಳ ಅಪೌಷ್ಠಿಕತೆ ವರದಿ ನೀಡುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೇ ಶಾಕಿಂಗ್​ ರಿಪೋರ್ಟ್​ ಕೊಟ್ಟಿದೆ.

ಇದನ್ನೂ ಓದಿ: ನೆರೆ ರಾಜ್ಯ ಕೇರಳದಲ್ಲಿ ಆತಂಕ ಸೃಷ್ಟಿಸಿದ ಜ್ವರ: ಕರ್ನಾಟಕದ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್

5 ವರ್ಷಕ್ಕಿಂತ ಕೆಳಗಿನ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದು ಪೋಷಕರಲ್ಲಿ ಭೀತಿ ಹುಟ್ಟಿಸಿದೆ. ಮಕ್ಕಳ್ಳಲ್ಲಿ ಹೆಚ್ಚಿದ ಅಪೌಷ್ಠಿಕತೆ ಪರಿಣಾಮ ಮಕ್ಕಳಲ್ಲಿ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ರಾಜ್ಯದಲ್ಲಿ 8,711 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಕಂಡು ಬಂದ್ರೆ, 2,23,221 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅಷ್ಟೇ ಅಲ್ಲದೇ, ಅಪೌಷ್ಠಿಕತೆಯ ಕಾರಣಕ್ಕೆ ಮಕ್ಕಳಲ್ಲಿ ಕಡಿಮೆ ತೂಕ, ರಕ್ತಹೀನತೆ ಸಮಸ್ಯೆಗಳು ಮಕ್ಕಳಲ್ಲಿ ಕಂಡು ಬರುತ್ತಿವೆ. ಸಾಕಷ್ಟು ಮಕ್ಕಳ ಸಾವಿಗೂ ಕಾರಣವಾಗುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ.

ಒಟ್ಟಾರೆಯಾಗಿ ಕೊರೊನಾ ಎಫೆಕ್ಟ್​ನಿಂದ ಲಕ್ಷಾಂತರ ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ಸೃಷ್ಟಿಯಾಗಿರುವುದು ಆತಂಕ ಹುಟ್ಟಿಸಿದೆ. ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:49 am, Mon, 3 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್