AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ದಿನ ಒಂದು ಕಪ್ ದಾಳಿಂಬೆ ಹಣ್ಣನ್ನು ತಿನ್ನುವ ಚಾಲೆಂಜ್: ಸಂಶೋಧನೆಯಿಂದ ಆಶ್ಚರ್ಯಕಾರಿ ಮಾಹಿತಿ ಬಹಿರಂಗ

ದಾಳಿಂಬೆ ಹಣ್ಣನ್ನು 21 ದಿನಗಳ ವರೆಗೆ ಪ್ರತಿದಿನ ಒಂದು ಕಪ್ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೌದು, ಇದು ಸಂಶೋಧನೆಗಳಿಂದಲೂ ಬಹಿರಂಗಗೊಂಡಿದೆ. ಇದರಲ್ಲಿರುವ ಪಾಲಿಫಿನಾಲ್‌ಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಹೃದಯ ಸಂಬಂಧಿ ಒತ್ತಡವನ್ನು ತಡೆಯಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದರಿಂದ ಇನ್ನು ಸಾಕಷ್ಟು ಪ್ರಯೋಜನಗಳಿವೆ. ಹಾಗಾದರೆ ಈ ರೀತಿ 21 ದಿನಗಳ ಚಾಲೆಂಜ್ ನಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕೆ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

21 ದಿನ ಒಂದು ಕಪ್ ದಾಳಿಂಬೆ ಹಣ್ಣನ್ನು ತಿನ್ನುವ ಚಾಲೆಂಜ್: ಸಂಶೋಧನೆಯಿಂದ ಆಶ್ಚರ್ಯಕಾರಿ ಮಾಹಿತಿ ಬಹಿರಂಗ
21 ದಿನ ದಾಳಿಂಬೆ ಹಣ್ಣನ್ನು ತಿನ್ನುವ ಚಾಲೆಂಜ್
ಪ್ರೀತಿ ಭಟ್​, ಗುಣವಂತೆ
|

Updated on: Nov 25, 2025 | 3:38 PM

Share

ದಾಳಿಂಬೆ (Pomegranate) ಬೀಜಗಳು ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದು ತಿಳಿದ ವಿಚಾರ. ಇದರಲ್ಲಿರುವ ಪಾಲಿಫಿನಾಲ್‌ಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಹೃದಯ ಸಂಬಂಧಿ ಒತ್ತಡವನ್ನು ತಡೆಯಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಇವು ಚರ್ಮವನ್ನು ಯುವಿ ಕಿರಣಗಳು ಮತ್ತು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತವೆ. ಚರ್ಮವು ಕಾಂತಿಯುತವಾಗಿರಲು ಸಹಾಯ ಮಾಡುತ್ತದೆ. ಇದಕ್ಕೆ ಪೂರಕವಾಗಿ ಪ್ರತಿದಿನ ಒಂದು ಕಪ್ ದಾಳಿಂಬೆ ಹಣ್ಣನ್ನು 21 ದಿನಗಳ ಕಾಲ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಎಂದು ಸಂಶೋಧನೆ ಹೇಳುತ್ತದೆ. ಹಾಗಾದರೆ ಈ ರೀತಿ 21 ದಿನಗಳ ಚಾಲೆಂಜ್ (21 Day Challenge) ನಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕೆ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ದಾಳಿಂಬೆ ಬೀಜಗಳನ್ನು ಅಗಿದು ತಿನ್ನುವುದು ಪ್ರಯೋಜನಕಾರಿ:

ದಾಳಿಂಬೆ ಬೀಜಗಳನ್ನು ನಿರಂತರವಾಗಿ 21 ದಿನಗಳ ಕಾಲ ಸೇವನೆ ಮಾಡಿದರೆ ತ್ವರಿತ ಶಕ್ತಿ ಸಿಗುತ್ತದೆ ಮತ್ತು ಮನಸ್ಥಿತಿ ಸುಧಾರಿಸುತ್ತವೆ, ಮಾತ್ರವಲ್ಲ ಒತ್ತಡವೂ ಕಡಿಮೆಯಾಗುತ್ತದೆ. ಈ ಹಣ್ಣಿನ ಬೀಜಗಳು ಹಾರ್ಮೋನುಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುವ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇವು ಮೆದುಳಿನ ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತವೆ, ಹಾನಿಯನ್ನು ತಡೆಯುತ್ತವೆ, ಸ್ಮರಣ ಶಕ್ತಿಯನ್ನು ಸುಧಾರಿಸಿ ಮೆದುಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಿದೆ. ಅಷ್ಟೇ ಅಲ್ಲ ಈ ಹಣ್ಣಿನಲ್ಲಿರುವ ಬೀಜಗಳನ್ನು ಅಗಿಯುವುದರಿಂದ ಹಲ್ಲು ಮತ್ತು ಒಸಡುಗಳು ಆರೋಗ್ಯಕರವಾಗಿರುತ್ತವೆ. ಹಲ್ಲುಗಳನ್ನು ಬಿಳಿಯಾಗಿಸುತ್ತದೆ. ಬಾಯಿಯ ದುರ್ವಾಸನೆ ನಿವಾರಿಸುತ್ತದೆ.

ಇದನ್ನೂ ಓದಿ: ಯಾವುದೇ ರೀತಿಯ ಔಷಧಗಳ ಸೇವನೆ ಮಾಡದೆಯೇ ರಕ್ತಹೀನತೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ

ವೀರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ:

ದಾಳಿಂಬೆ ಬೀಜಗಳಲ್ಲಿರುವ ನಾರಿನಾಂಶ ಕರುಳಿನ ಸ್ನಾಯುಗಳನ್ನು ಸುಧಾರಿಸುತ್ತದೆ. ಮಾತ್ರವಲ್ಲ, ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಹೆಚ್ಚಿನ ಕೊಲೆಸ್ಟ್ರಾಲ್ ನಿಂದ ಬಳಲುತ್ತಿರುವವರು ದಾಳಿಂಬೆ ಬೀಜಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಒಳ್ಳೆಯದು. ಅವುಗಳಲ್ಲಿರುವ ಪೋಷಕಾಂಶಗಳು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತವೆ. ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ದಾಳಿಂಬೆ ಹಣ್ಣುಗಳು ಬಹಳ ಸಹಾಯಕವಾಗಿವೆ. ಅಷ್ಟೇ ಅಲ್ಲ, ವೀರ್ಯದ ಗುಣಮಟ್ಟವೂ ಸುಧಾರಿಸುತ್ತದೆ. ದಾಳಿಂಬೆಯಲ್ಲಿ ಕಬ್ಬಿಣಾಂಶ ಅಧಿಕವಾಗಿರುವುದರಿಂದ ಇದರ ಸೇವನೆ ಬಹಳ ಪ್ರಯೋಜನಕಾರಿಯಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ