ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು

ಉಷ್ಣಾಂಶ ದಿನೇ ದಿನೇ ಏರುತ್ತಿರುವ ಹಿನ್ನೆಲೆ, ಹೀಟ್ ಸ್ಟ್ರೋಕ್ ಅಪಾಯ ಹೆಚ್ಚುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವವರು ಈ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ. ಇದನ್ನು ಸರಿಯಾಗಿ ತಿಳಿದುಕೊಂಡು ಈ ರೀತಿಯಾದಾಗ ತಕ್ಷಣ ಮುನ್ನೆಚ್ಚರಿಕೆ ವಹಿಸಿ ಆರೋಗ್ಯ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಹಾಗಾದರೆ ಈ ಲಕ್ಷಣಗಳು ಯಾವವು, ಈ ಸಮಸ್ಯೆ ತಡೆಗಟ್ಟುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು
Heat Stroke Warning Signs

Updated on: Apr 22, 2026 | 9:03 PM

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ. ಇದನ್ನು ಸರಿಯಾಗಿ ತಿಳಿದುಕೊಂಡು ಈ ರೀತಿಯಾದಾಗ ತಕ್ಷಣ ಮುನ್ನೆಚ್ಚರಿಕೆ ವಹಿಸಿ ಆರೋಗ್ಯ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಹಾಗಾದರೆ ಈ ಲಕ್ಷಣಗಳು ಯಾವವು, ಈ ಸಮಸ್ಯೆ ತಡೆಗಟ್ಟುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೀಟ್ ಸ್ಟ್ರೋಕ್ ಕಂಡುಬರುವ ಮುನ್ನ ಕಾಸಿಕೊಳ್ಳುವ ಲಕ್ಷಣಗಳು:

ವೈದ್ಯಕೀಯ ಮಾಹಿತಿಯ ಪ್ರಕಾರ, ಹೀಟ್ ಸ್ಟ್ರೋಕ್ ಮೊದಲು ದೇಹವು ಕೆಲವು ಸ್ಪಷ್ಟ ಸೂಚನೆಗಳನ್ನು ನೀಡುತ್ತದೆ. ಮೊದಲನೆಯದಾಗಿ, ತೀವ್ರ ತಲೆನೋವು ಮತ್ತು ತಲೆ ಸುತ್ತುವಿಕೆ ಕಾಣಿಸಿಕೊಳ್ಳುತ್ತದೆ. ಇದು ದೇಹದ ತಾಪಮಾನ ಹೆಚ್ಚುತ್ತಿರುವ ಸೂಚನೆ ಆಗಿರಬಹುದು. ಎರಡನೇ ಲಕ್ಷಣ, ಅತಿಯಾದ ದುರ್ಬಲತೆ ಮತ್ತು ಆಯಾಸ ಕಾಣಿಸುತ್ತದೆ. ವ್ಯಕ್ತಿಗೆ ಸಣ್ಣ ಕೆಲಸ ಮಾಡುವುದು ಕೂಡ ಕಷ್ಟವಾಗುತ್ತದೆ ಮತ್ತು ದೇಹದಲ್ಲಿ ಶಕ್ತಿ ಕಡಿಮೆಯಾಗಿರುವಂತೆ ಅನಿಸುತ್ತದೆ. ಮೂರನೇ ಲಕ್ಷಣವೆಂದರೆ ಹೆಚ್ಚು ಬೆವರು ಬರುವುದು ಅಥವಾ ಕೆಲವೊಮ್ಮೆ ಏಕಾಏಕಿ ಬೆವರು ಬರುವುದು ನಿಲ್ಲುವುದು. ಇದು ದೇಹವು ತನ್ನ ತಾಪಮಾನವನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂಬ ಸೂಚನೆಯಾಗಿದೆ. ಜೊತೆಗೆ ಅಶಾಂತಿ, ಬಾಯಾರಿಕೆ, ಗಮನ ಕೊಡಲು ಸಾಧ್ಯವಾಗದಿರುವುದು ಹಾಗೂ ಸ್ವಲ್ಪ ಜ್ವರದ ಅನುಭವವೂ ಆಗಬಹುದು.

ಇದನ್ನೂ ಓದಿ: ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಳ: ತಡೆಗಟ್ಟಲು ಇಲ್ಲಿದೆ ಸಿಂಪಲ್ ಟಿಪ್ಸ್

ಹೇಗೆ ತಡೆಯಬೇಕು?

ಹೀಟ್ ಸ್ಟ್ರೋಕ್ ನಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನದ ತೀವ್ರ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸುವುದು ಅತ್ಯಂತ ಮುಖ್ಯ. ಹೊರಗೆ ಹೋಗುವಾಗ ತಲೆಗೆ ಮುಚ್ಚಿಕೊಳ್ಳುವುದು ಮತ್ತು ಹಗುರ, ಸಡಿಲ, ಹತ್ತಿ ಬಟ್ಟೆಗಳನ್ನು ಧರಿಸುವುದು ಒಳಿತು. ದಿನಪೂರ್ತಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ದೇಹ ಹೈಡ್ರೇಟೆಡ್ ಆಗಿರುತ್ತದೆ. ಎಳನೀರು ನೀರು, ಮಜ್ಜಿಗೆ ಮತ್ತು ನಿಂಬೆ ನೀರು ದೇಹವನ್ನು ತಂಪಾಗಿಡಲು ಸಹಕಾರಿ. ಹೊರಗಡೆ ಕೆಲಸ ಮಾಡುವವರು ಸ್ವಲ್ಪ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುವುದು ಅಗತ್ಯ. ಬೇಸಿಗೆಯಲ್ಲಿ ಪೋಷಕಾಂಶಯುಕ್ತ ಆಹಾರ ಸೇವನೆ ಮುಖ್ಯ. ಹೆಚ್ಚು ಎಣ್ಣೆ ಮತ್ತು ಮಸಾಲೆಯುಕ್ತ ಆಹಾರ ತಪ್ಪಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us