AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂರು ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ; ಇದು ಥೈರಾಯ್ಡ್ ಸಮಸ್ಯೆ ಬರುವ ಮುನ್ಸೂಚನೆಯಾಗಿರಬಹುದು

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಅದರ ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಅರ್ಥಮಾಡಿಕೊಂಡು ಅದನ್ನು ಗುರುತಿಸುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಥೈರಾಯ್ಡ್ ಕಂಡು ಬರುವ ಮೊದಲು ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ? ಯಾವಾಗ ವೈದ್ಯರ ಸಲಹೆ ಪಡೆಯಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ ಮೂರು ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ; ಇದು ಥೈರಾಯ್ಡ್ ಸಮಸ್ಯೆ ಬರುವ ಮುನ್ಸೂಚನೆಯಾಗಿರಬಹುದು
Symptoms Of Thyroid Problems In Females
ಪ್ರೀತಿ ಭಟ್​, ಗುಣವಂತೆ
|

Updated on: Jan 11, 2026 | 5:15 PM

Share

ಇತ್ತೀಚಿನ ದಿನಗಳಲ್ಲಿ, ಮಹಿಳೆಯರಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿವೆ. ಜಾಗತಿಕವಾಗಿ, ಪುರುಷರಿಗಿಂತ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತವೆ. ನಿಮಗೆ ತಿಳಿದಿರಬಹುದು, ಥೈರಾಯ್ಡ್ ಹಾರ್ಮೋನುಗಳನ್ನು ಉತ್ಪಾದಿಸುವ ಕುತ್ತಿಗೆಯಲ್ಲಿರುವ ಒಂದು ಸಣ್ಣ ಗ್ರಂಥಿ. ಇದು ದೇಹದ ಚಯಾಪಚಯ, ಶಕ್ತಿ ಮತ್ತು ಹಾರ್ಮೋನ್ ಸಮತೋಲನಕ್ಕೆ ಅತ್ಯಗತ್ಯ. ಆದರೆ ನಾವು ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಬದಲಾವಣೆ, ಕಳಪೆ ಆಹಾರ ಪದ್ಧತಿ ಮತ್ತು ಮಾನಸಿಕ ಒತ್ತಡ ಥೈರಾಯ್ಡ್ ಸಮಸ್ಯೆಗಳಿಗೆ ಪ್ರಮುಖ ಕಾರಣಗಳೆಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲ, ಸಮಯಕ್ಕೆ ಸರಿಯಾಗಿ ಪತ್ತೆಯಾಗದಿದ್ದರೆ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಅದರ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ಮತ್ತು ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡುವುದು ಬಹಳ ಮುಖ್ಯ. ಹಾಗಾದರೆ ಈ ಆರೋಗ್ಯ ಸಮಸ್ಯೆಯ ಆರಂಭಿಕ ಲಕ್ಷಣ ಹೇಗಿರುತ್ತದೆ, ಯಾವಾಗ ವೈದ್ಯರ ಸಲಹೆ ಪಡೆಯಬೇಕು ಎಂಬುದನ್ನು ತಿಳಿದುಕೊಳ್ಳಿ.

ಥೈರಾಯ್ಡ್‌ನ 3 ಆರಂಭಿಕ ಲಕ್ಷಣಗಳು:

ಹಠಾತ್ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು: ತೂಕದಲ್ಲಿ ಕಂಡುಬರುವ ಅಸಹಜ ಬದಲಾವಣೆಗಳು ಥೈರಾಯ್ಡ್‌ ಬರುವ ಮುನ್ಸೂಚನೆಯಾಗಿರಬಹುದು. ಆದರೆ ಸಾಮಾನ್ಯವಾಗಿ ಈ ರೋಗಲಕ್ಷಣವನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗುತ್ತದೆ, ಆದರೆ ಸಮಯಕ್ಕೆ ಸರಿಯಾಗಿ ಈ ಲಕ್ಷಣವನ್ನು ಗುರುತಿಸುವುದು ಬಹಳ ಮುಖ್ಯವಾಗುತ್ತದೆ.

ಆಯಾಸ ಮತ್ತು ದೌರ್ಬಲ್ಯ: ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ನಿರಂತರವಾಗಿ ದಣಿದ ಭಾವನೆ ದೇಹದ ಶಕ್ತಿ ಕಡಿಮೆ ಆದಂತೆ ಅನಿಸುವುದು ಥೈರಾಯ್ಡ್‌ನ ಆರಂಭಿಕ ಲಕ್ಷಣಗಳಾಗಿವೆ. ಇದು ದೈನಂದಿನ ದಿನಚರಿ ಮತ್ತು ಕೆಲಸದ ಮೇಲೆ ಪರಿಣಾಮ ಬೀರುತ್ತದೆ.

ಕೂದಲು ಮತ್ತು ಚರ್ಮದಲ್ಲಿನ ಬದಲಾವಣೆಗಳು: ಕೂದಲು ಉದುರುವುದು, ಸುಕ್ಕುಗಳು ಅಥವಾ ಒಣ ಚರ್ಮವು ಥೈರಾಯ್ಡ್‌ನ ಆರಂಭಿಕ ಲಕ್ಷಣಗಳಾಗಿರಬಹುದು. ಕೆಲವರಲ್ಲಿ ಚರ್ಮದ ಬಣ್ಣ ಮಾಸುವುದು ಮತ್ತು ಉಗುರುಗಳು ಪದೇ ಪದೇ ಕಟ್ಟಾಗುವುದು ಸಹ ಕಂಡುಬರಬಹುದು.

ಈ ಮೂರು ಲಕ್ಷಣಗಳನ್ನು ಹಗುರವಾಗಿ ಪರಿಗಣಿಸಬೇಡಿ. ಸಮಯಕ್ಕೆ ಸರಿಯಾಗಿ ಗುರುತಿಸಿ ವೈದ್ಯರನ್ನು ಸಂಪರ್ಕಿಸುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು ಮತ್ತು ಥೈರಾಯ್ಡ್ ಚಿಕಿತ್ಸೆಯನ್ನು ಸುಲಭಗೊಳಿಸಬಹುದು.

ಇದನ್ನೂ ಓದಿ: ತಡರಾತ್ರಿ ಊಟ ಮಾಡುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

ಥೈರಾಯ್ಡ್ ಸಮಸ್ಯೆಗೆ ಅಪಾಯಕಾರಿಯಾಗುವ ಅಂಶಗಳು:

ಮಹಿಳೆಯರಲ್ಲಿ ಥೈರಾಯ್ಡ್ ಕಾಯಿಲೆ ಬರಲು ಹಲವಾರು ಅಪಾಯಕಾರಿ ಅಂಶಗಳಿವೆ. ಕುಟುಂಬದ ಇತಿಹಾಸದಲ್ಲಿ ಥೈರಾಯ್ಡ್ ಸಮಸ್ಯೆಗಳು ಮತ್ತು ಅಯೋಡಿನ್ ಕೊರತೆ ಇರುವುದು ಸಾಮಾನ್ಯ ಕಾರಣಗಳಾಗಿವೆ. ಅದರಲ್ಲಿಯೂ ಗರ್ಭಾವಸ್ಥೆಯಲ್ಲಿ ಅಥವಾ ಋತುಬಂಧದ ಸಮಯದಲ್ಲಿ ಹಾರ್ಮೋನುಗಳ ಬದಲಾವಣೆಗಳು ಥೈರಾಯ್ಡ್ ಸಮಸ್ಯೆಗಳ ಸಾಧ್ಯತೆಯನ್ನು ಹೆಚ್ಚಿಸಬಹುದು. ಮಾನಸಿಕ ಒತ್ತಡ, ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಹಲವಾರು ಬದಲಾವಣೆಗಳು ಸಹ ಪರಿಣಾಮ ಬೀರುತ್ತವೆ. ಪುರುಷರಿಗಿಂತ ಮಹಿಳೆಯರಲ್ಲಿ ಥೈರಾಯ್ಡ್ ಹೆಚ್ಚಾಗಿ ಕಂಡುಬರುತ್ತದೆ, ಹಾಗಾಗಿ ಅವರು ವಿಶೇಷ ಕಾಳಜಿ ವಹಿಸಬೇಕಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ