AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಕೇವಲ ಈ 4 ಕ್ರಮಗಳನ್ನು ಅನುಸರಿಸಿ ಸಾಕು!

ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕ್ಯಾನ್ಸರ್ ಅನ್ನು ತಡೆಗಟ್ಟಬಹುದು, ಆದರೆ ಅದಕ್ಕಾಗಿ ನೀವು ಹಲವಾರು ವಿಷಯಗಳ ಬಗ್ಗೆ ಗಮನ ಹರಿಸಬೇಕು. ಅದರಲ್ಲಿಯೂ ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳನ್ನು ಅನುಸರಿಸುವ ಮೂಲಕ ಇದರ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಯಾವ ರೀತಿಯ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಕೇವಲ ಈ 4 ಕ್ರಮಗಳನ್ನು ಅನುಸರಿಸಿ ಸಾಕು!
Lower Your Cancer Risk: 5 Science-Backed Daily HabitsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 17, 2026 | 8:41 PM

Share

ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಇದು ಗಂಭೀರ ಕಾಯಿಲೆಯಾದರೂ, ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳನ್ನು ಅನುಸರಿಸುವ ಮೂಲಕ ಇದರ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಡಾ. ರೋಹಿತ್ ಕಪೂರ್ ಅವರ ಪ್ರಕಾರ, ಜೀನ್ಸ್ ಸಂಬಂಧಿತ ಕೆಲವು ಪ್ರಕರಣಗಳನ್ನು ಹೊರತುಪಡಿಸಿದರೆ, ಹೆಚ್ಚಿನ ಕ್ಯಾನ್ಸರ್ ಪ್ರಕರಣಗಳು ನಮ್ಮ ದಿನನಿತ್ಯದ ಅಭ್ಯಾಸಗಳು ಮತ್ತು ಆಹಾರ ಪದ್ಧತಿಗಳೊಂದಿಗೆ ಸಂಬಂಧ ಹೊಂದಿವೆ. ಆದ್ದರಿಂದ ಜೀವನಶೈಲಿಯಲ್ಲಿ ಬದಲಾವಣೆ ತರುವುದು ಅತ್ಯಂತ ಮುಖ್ಯ ಎನ್ನುತ್ತಾರೆ. ಹಾಗಾದರೆ ಯಾವ ರೀತಿಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆರೋಗ್ಯಕರ ಆಹಾರ ಸೇವನೆ ಮಾಡಿ

ಹಸಿರು ತರಕಾರಿ, ಹಣ್ಣು ಮತ್ತು ಪೋಷಕಾಂಶಯುಕ್ತ ಆಹಾರಗಳನ್ನು ಸೇವಿಸುವುದು ಬಹಳ ಮುಖ್ಯ. ಕಿತ್ತಳೆ, ಮಾವಿನ ಹಣ್ಣುಗಳಂತಹ ಸಿಟ್ರಸ್ ಹಣ್ಣುಗಳು ಮತ್ತು ಡ್ರೈ ಫ್ರೂಟ್ಸ್‌ಗಳನ್ನು ಆಹಾರದಲ್ಲಿ ಸೇರಿಸುವುದು ಫ್ರೀ ರ್ಯಾಡಿಕಲ್‌ಗಳಿಂದ ರಕ್ಷಿಸುತ್ತದೆ. ಫಾಸ್ಟ್ ಫುಡ್ ಮತ್ತು ಹೆಚ್ಚು ಮಸಾಲೆ ಬಳಕೆಯನ್ನು ತಪ್ಪಿಸುವುದು ಉತ್ತಮ.

ತಂಬಾಕು ಮತ್ತು ಮದ್ಯಪಾನದಿಂದ ದೂರವಿರಿ

ತಂಬಾಕು ಮತ್ತು ಮದ್ಯಪಾನ ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಾಗಿವೆ. ಧೂಮಪಾನ ಮತ್ತು ತಂಬಾಕು ಸೇವನೆ ಬಾಯಿ, ಶ್ವಾಸಕೋಶ ಮತ್ತು ಗಂಟಲಿನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಮದ್ಯಪಾನ ಯಕೃತ್ತಿನ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಈ ಅಭ್ಯಾಸಗಳಿಂದ ದೂರವಿರುವುದು ಅತ್ಯಗತ್ಯ.

ಇದನ್ನೂ ಓದಿ: ಮೌತ್ ಕಾಂಡೋಮ್‌ ಎಂದರೇನು? ಇದು ಓರಲ್ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆಯೇ?

ತೂಕ ನಿಯಂತ್ರಣದಲ್ಲಿರಲಿ

ಅತಿಯಾದ ತೂಕ ಹಲವಾರು ಕ್ಯಾನ್ಸರ್‌ಗಳ ಅಪಾಯವನ್ನು ಹೆಚ್ಚಿಸುತ್ತದೆ. ದಿನಕ್ಕೆ ಕನಿಷ್ಠ 15– 20 ನಿಮಿಷ ವ್ಯಾಯಾಮ ಮಾಡುವ ಮೂಲಕ ತೂಕವನ್ನು ನಿಯಂತ್ರಿಸಬಹುದು.

ಕುಟುಂಬ ಇತಿಹಾಸ ಇದ್ದರೆ ಜಾಗೃತೆಯಲ್ಲಿರಿ

ಕುಟುಂಬದಲ್ಲಿ ಕ್ಯಾನ್ಸರ್ ಇತಿಹಾಸ ಇದ್ದರೆ ಹೆಚ್ಚಿನ ಎಚ್ಚರಿಕೆ ಅಗತ್ಯ. ವಿಶೇಷವಾಗಿ ಸ್ತನ ಕ್ಯಾನ್ಸರ್‌ನಂತಹ ಕಾಯಿಲೆಗಳು ತಲೆಮಾರಿನಿಂದ ತಲೆಮಾರಿಗೆ ಬರುವ ಸಾಧ್ಯತೆ ಇದೆ. ಆದ್ದರಿಂದ 20 ವರ್ಷದ ನಂತರ ನಿಯಮಿತ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!