AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಆರೋಗ್ಯವಾಗಿರಲು ನಿಮ್ಮ ಆಹಾರಕ್ರಮದಲ್ಲಿ ಈ ಬದಲಾವಣೆಗಳನ್ನು ಮಾಡಿ ನೋಡಿ!

ಚಳಿಗಾಲದಲ್ಲಿ ಆರೋಗ್ಯವಾಗಿರುವುದು ಬಹಳ ಮುಖ್ಯ. ಇಲ್ಲದಿದ್ದರೆ, ರೋಗಗಳು ಒಂದಾದ ಮೇಲೆ ಒಂದರಂತೆ ದಾಳಿ ಮಾಡುತ್ತವೆ. ನೀವು ಕೂಡ ಚಳಿಗಾಲದಲ್ಲಿ ಆರೋಗ್ಯವಾಗಿರಬೇಕು ಎಂದು ಬಯಸುವುದಾದರೆ, ನಿಮ್ಮ ನಿಯಮಿತ ಅಭ್ಯಾಸಗಳಲ್ಲಿ ಅದರಲ್ಲಿಯೂ ಆಹಾರ ಪದ್ದತಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇದು ನಿಮ್ಮನ್ನು ಅನಾರೋಗ್ಯದಿಂದ ರಕ್ಷಿಸುವುದಕ್ಕೆ ಸಹಾಯ ಮಾಡುತ್ತದೆ. ಹಾಗಾದರೆ ಚಳಿಗಾಲದಲ್ಲಿ ನಮ್ಮ ಆಹಾರಕ್ರಮ ಹೇಗಿರಬೇಕು? ಯಾವ ರೀತಿಯ ಆಹಾರಗಳ ಸೇವನೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಆರೋಗ್ಯವಾಗಿರಲು ನಿಮ್ಮ ಆಹಾರಕ್ರಮದಲ್ಲಿ ಈ ಬದಲಾವಣೆಗಳನ್ನು ಮಾಡಿ ನೋಡಿ!
Seasonal Diet Changes
ಪ್ರೀತಿ ಭಟ್​, ಗುಣವಂತೆ
|

Updated on: Nov 21, 2025 | 5:38 PM

Share

ಚಳಿಗಾಲದಲ್ಲಿ (Winter) ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಏಕೆಂದರೆ ಈ ಸಮಯದಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿ, ವಿವಿಧ ರೀತಿಯ ರೋಗಗಳು ಕಾಡುವ ಭಯವಿರುತ್ತದೆ. ಅದಕ್ಕಾಗಿಯೇ ಪ್ರತಿಯೊಬ್ಬರೂ ಕೂಡ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತ ಅಭ್ಯಾಸಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇದು ನಿಮ್ಮನ್ನು ಅನಾರೋಗ್ಯದಿಂದ ರಕ್ಷಿಸುವುದು ಮಾತ್ರವಲ್ಲ ದೇಹವನ್ನು ಯಾವಾಗಲೂ ಆರೋಗ್ಯವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ನಮ್ಮ ಆಹಾರ ಪದ್ಧತಿ ಸರಿಯಾಗಿದ್ದಲ್ಲಿ ಆರೋಗ್ಯ ಚೆನ್ನಾಗಿಯೇ ಇರುತ್ತದೆ. ಹಾಗಾಗಿ ನಾವು ಸೇವನೆ ಮಾಡುವ ಆಹಾರಗಳಲ್ಲಿ ಕೆಲವು ಪದಾರ್ಥಗಳನ್ನು ತಪ್ಪದೆ ಸೇವನೆ ಮಾಡಬೇಕು. ಏಕೆಂದರೆ ಅವುಗಳಲ್ಲಿರುವ ಔಷಧೀಯ ಗುಣಗಳು ನಮ್ಮ ದೇಹವನ್ನು ರೋಗಗಳಿಂದ ರಕ್ಷಣೆ ಮಾಡುತ್ತದೆ. ಹಾಗಾದರೆ ಚಳಿಗಾಲದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು, ಇದು ನಮ್ಮ ಆರೋಗ್ಯಕ್ಕೆ ಹೇಗೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

  • ಚಳಿಗಾಲದಲ್ಲಿ, ಪ್ರತಿನಿತ್ಯ ಬೆಳಿಗ್ಗೆ ಆಮ್ಲಾ ರಸವನ್ನು ಸೇವಿಸುವ ಮೂಲಕ ದಿನವನ್ನು ಪ್ರಾರಂಭಿಸಬೇಕು. ಏಕೆಂದರೆ ಈ ಆಮ್ಲಾ ರಸದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು ಇದನ್ನು ತಪ್ಪದೆ ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ರೋಗಗಳು ಬರುವುದಿಲ್ಲ.
  • ಪ್ರತಿನಿತ್ಯ ಬೆಚ್ಚಗಿನ ನೀರಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಆದ್ದರಿಂದ, ಚಳಿಗಾಲದಲ್ಲಿ ಪ್ರತಿದಿನ ಬೆಳಿಗ್ಗೆ ಬೆಚ್ಚಗಿನ ನೀರಿಗೆ ಒಂದು ಚಮಚ ತುಪ್ಪ ಬೆರೆಸಿ ಕುಡಿಯಿರಿ ಇದು ತೂಕ ಕಡಿಮೆ ಮಾಡಿಕೊಳ್ಳುವುದಕ್ಕೂ ಸಹ ಸಹಾಯ ಮಾಡುತ್ತದೆ.
  • ಚಳಿಗಾಲದ ದಿನಗಳಲ್ಲಿ ಪ್ರತಿದಿನ ರಾತ್ರಿ ಮಲಗುವ ಮುನ್ನ, 5 ಬಾದಾಮಿಗಳನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ, ಉಪಾಹಾರ ಸೇವನೆ ಮಾಡುವುದಕ್ಕಿಂತ ಸ್ವಲ್ಪ ಮೊದಲು, ಈ ನೀರಿನಲ್ಲಿ ನೆನೆಸಿಟ್ಟ ಬಾದಾಮಿಯನ್ನು ಸೇವಿಸಿ. ಇದು ಆರೋಗ್ಯವಾಗಿರಲು ಬಹಳ ಸಹಾಯ ಮಾಡುತ್ತದೆ. ಇದನ್ನು ಚಳಿಗಾಲದಲ್ಲಿ ಮಾತ್ರವಲ್ಲ ಪ್ರತಿನಿತ್ಯವೂ ಮಾಡಬಹುದು.
  • ಸಾಮಾನ್ಯವಾಗಿ ಚಳಿಗಾಲದಲ್ಲಿ ನೆನೆಸಿಟ್ಟ ಒಣದ್ರಾಕ್ಷಿಗಳ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ನೀರಿನಲ್ಲಿ ನೆನೆಸಿ ದಿನವಿಡೀ ಸಮಯ ಸಿಕ್ಕಾಗಲೆಲ್ಲಾ ತಿನ್ನುವ ಅಭ್ಯಾಸ ಬಹಳ ಒಳ್ಳೆಯದು. ಇದು ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಒಣದ್ರಾಕ್ಷಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸುವುದಕ್ಕೂ ಕೂಡ ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!