Health Tips: ಪದೇ ಪದೇ ಬರುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ಸೂಪರ್ ಫುಡ್ ಸೇವನೆ ಮಾಡಿ

ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವುದು ಹಳೆಯ ಇಂಗ್ಲಿಷ್ ನಾಣ್ನುಡಿ. ಆದರೆ ಬರುಬರುತ್ತಾ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ಕಡಿಮೆ ಆಗುತ್ತಿದ್ದಾರೆ. ಅದು ಏನೇ ಇರಲಿ, ಸೇಬುವಿನ ರೀತಿ ಅನೇಕ ಆಹಾರಗಳು ನಮ್ಮ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಇದನ್ನು ನಾವು ಸೂಪರ್ ಫುಡ್ ಗಳೆಂದು ಕರೆಯಬಹುದು. ಇವುಗಳ ನಿಯಮಿತವಾದ ಸೇವನೆ ನಮ್ಮ ಪ್ರಮುಖ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಕಾರಿಯಾಗಿದೆ. ಹಾಗಾದರೆ ನಮ್ಮ ದೇಹವನ್ನು ಚೆನ್ನಾಗಿಟ್ಟುಕೊಳ್ಳಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು ತಿಳಿದುಕೊಳ್ಳಿ.

Health Tips: ಪದೇ ಪದೇ ಬರುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ಸೂಪರ್ ಫುಡ್ ಸೇವನೆ ಮಾಡಿ
Health Problem
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Jan 25, 2025 | 8:51 PM

ಮೊದಲೆಲ್ಲಾ ಸೇಬು ತಿಂದರೆ ಆರೋಗ್ಯ ಚೆನ್ನಾಗಿರುತ್ತೆ ಎಂದು ಹೇಳಲಾಗುತ್ತಿತ್ತು. ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವುದು ಹಳೆಯ ಇಂಗ್ಲಿಷ್ ನಾಣ್ನುಡಿ. ಆದರೆ ಬರುಬರುತ್ತಾ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ಕಡಿಮೆ ಆಗುತ್ತಿದ್ದಾರೆ. ಅದು ಏನೇ ಇರಲಿ, ಸೇಬುವಿನ ರೀತಿ ಅನೇಕ ಆಹಾರಗಳು ನಮ್ಮ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಇದನ್ನು ನಾವು ಸೂಪರ್ ಫುಡ್ ಗಳೆಂದು ಕರೆಯಬಹುದು. ಇವುಗಳ ನಿಯಮಿತವಾದ ಸೇವನೆ ನಮ್ಮ ಪ್ರಮುಖ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಕಾರಿಯಾಗಿದೆ. ಹಾಗಾದರೆ ನಮ್ಮ ದೇಹವನ್ನು ಚೆನ್ನಾಗಿಟ್ಟುಕೊಳ್ಳಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು ತಿಳಿದುಕೊಳ್ಳಿ.

ಅವಕಾಡೊ:

ಮಾರುಕಟ್ಟೆಯಲ್ಲಿ ಬೆಣ್ಣೆ ಹಣ್ಣು ಅಥವಾ ಅವಕಾಡೊ ಸ್ವಲ್ಪ ದುಬಾರಿ ಆದರೂ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣುಗಳ ಸೇವನೆ ನಿಮ್ಮನ್ನು ಅನಾರೋಗ್ಯದಿಂದ ದೂರವಿಡುತ್ತದೆ ಎಂದು ಪರಿಗಣಿಸಲಾಗಿದೆ. ಯಾಕೆಂದರೆ ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳಿವೆ. ಅದಲ್ಲದೆ ಈ ಹಣ್ಣಿನ ಸೇವನೆಯು ಆರೋಗ್ಯವನ್ನು ವೃದ್ಧಿಸಿ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೊತೆಗೆ ಯಕೃತ್ ನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಅಲ್ಲದೆ ಅವಕಾಡೊದಲ್ಲಿ ಖನಿಜಾಂಶಗಳಾಗಿರುವಂತಹ ಸತು, ಪೋಸ್ಪರಸ್, ತಾಮ್ರ, ಕ್ಯಾಲ್ಸಿಯಂ ಮತ್ತು ಸೆಲೆನಿಯಂ ಇದೆ. ಹೀಗಾಗಿ ಇದು ಅಸ್ಥಿರಂಧ್ರತೆ ಸಮಸ್ಯೆಯನ್ನು ಕಡಿಮೆ ಮಾಡಿ ಮೂಳೆಯ ಖನಿಜ ಸಾಂದ್ರತೆಯನ್ನು ಹೆಚ್ಚಿಸುತ್ತದೆ.

ಕ್ಯಾರೆಟ್:

ಇದು ನಮ್ಮ ದೇಹಕ್ಕೆ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುವಂತಹ ತರಕಾರಿಯಾಗಿದೆ. ಕ್ಯಾರೆಟ್ ನಲ್ಲಿ ನಮ್ಮ ದೇಹಕ್ಕೆ ಅಗತ್ಯ ಎನಿಸುವ ಅದ್ಭುತ ಆರೋಗ್ಯ ಲಕ್ಷಣಗಳು ಸಿಗುತ್ತವೆ. ಅಪಾರ ಪ್ರಮಾಣದ ವಿಟಮಿನ್, ಖನಿಜಾಂಶಗಳು ಇದರಲ್ಲಿವೆ. ಇದು ಫ್ರೀ ರಾಡಿಕಲ್ ಗಳಿಂದ ಉಂಟಾಗುವ ಆಕ್ಸಿಡೇಟಿವ್ ಒತ್ತಡವನ್ನು ತಡೆಯುತ್ತದೆ ಮತ್ತು ನಮ್ಮ ದೇಹವನ್ನು ಕ್ಯಾನ್ಸರ್ ಕಾರಕ ಜೀವಕೋಶಗಳಿಂದ ರಕ್ಷಣೆ ಮಾಡುತ್ತದೆ. ವಿಶೇಷವಾಗಿ ಸ್ತನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್ ಮತ್ತು ಕರುಳಿನ ಕ್ಯಾನ್ಸರ್ ಸಮಸ್ಯೆಯನ್ನು ಇದು ಹೋಗಲಾಡಿಸುತ್ತದೆ. ಜೊತೆಗೆ ಕ್ಯಾರೆಟ್ ಪ್ರಮುಖವಾಗಿ ವಸಡುಗಳು ಮತ್ತು ಹಲ್ಲುಗಳ ಆರೋಗ್ಯವನ್ನು ಕೂಡ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹುಳುಕು ಹಲ್ಲು ಉಂಟಾಗದಂತೆ ಹಲ್ಲುಗಳನ್ನು ರಕ್ಷಣೆ ಮಾಡುತ್ತದೆ.

ತೆಂಗಿನಕಾಯಿ:

ದಕ್ಷಿಣ ಭಾರತದ ಬಹುತೇಕ ಆಹಾರದಲ್ಲಿ ತೆಂಗಿನಕಾಯಿ ನಿತ್ಯ ಬಳಕೆಯಾಗುತ್ತದೆ. ತೆಂಗಿನ ತಿರುಳಲ್ಲಿ ಗರಿಷ್ಠ ಪೌಷ್ಠಿಕತೆ, ನಾರಿನಲ್ಲಿ ಶ್ರೀಮಂತಿಕೆ ಇವೆ. ಜೀವಸತ್ವಗಳಾದ ಸಿ, ಇ, ಬಿ, ಬಿ3, ಬಿ5, ಹಾಗೂ ಬಿ6, ಖನಿಜಗಳಾದ ಕಬ್ಬಿಣ, ಸೆಲೇನಿಯಂ, ಸೋಡಿಯಂ, ಕ್ಯಾಲ್ಸಿಯಂ, ಮ್ಯಾಗ್ನೇಶಿಯಂ ಹಾಗೂ ರಂಜಕಗಳು ತೆಂಗಿನಲ್ಲಿ ತುಂಬಿವೆ. ಅದಲ್ಲದೆ ಇದು ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಗುಣಗಳನ್ನು ಸಹ ಹೊಂದಿದೆ. ರಾತ್ರಿ ತೆಂಗಿನ ಕಾಯಿ ಸೇವನೆಯಿಂದ ಮಲಬದ್ಧತೆಯನ್ನು ತಡೆಯಬಹುದು. ಜೊತೆಗೆ ಮಲಗುವ ಮುನ್ನ ಹಸಿ ತೆಂಗಿನಕಾಯಿ ತಿನ್ನುವುದರಿಂದ ಹೃದಯದ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಇದರಲ್ಲಿರುವ ಕೊಬ್ಬು ದೇಹದಲ್ಲಿನ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.

ದಾಳಿಂಬೆ:

ಕೆಂಪು, ರಸಭರಿತವಾದ ದಾಳಿಂಬೆ, ಭೂಮಿಯ ಮೇಲಿನ ಆರೋಗ್ಯಕರ ಹಣ್ಣುಗಳಲ್ಲಿ ಒಂದಾಗಿದೆ. ಇದನ್ನು ಕೆಲವರು ದೇವರ ಹಣ್ಣು ಎಂದು ಕರೆಯುತ್ತಾರೆ. ಸಾಮಾನ್ಯ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು ಲೈಂಗಿಕ ಕ್ರಿಯೆಗೆ ತಾಕತ್ತು ನೀಡು ವವರೆಗೂ ಇದರ ಪಾತ್ರವನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ದಾಳಿಂಬೆ ಹಣ್ಣಿನಲ್ಲಿ ಆಂಟಿ ಬ್ಯಾಕ್ಟೀರಿಯಲ್ ಮತ್ತು ಆಂಟಿ ಫಂಗಲ್ ಗುಣಲಕ್ಷಣಗಳು ಹೇರಳವಾಗಿ ಕಂಡುಬರುತ್ತವೆ. ನಿಯಮಿತವಾಗಿ ಈ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ವರ್ಷದ ಯಾವುದೇ ಸಮಯದಲ್ಲಿ ಎದುರಾಗುವ ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಜೊತೆಗೆ ದಾಳಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ನಮ್ಮ ಬುದ್ಧಿ ಶಕ್ತಿ ಹೆಚ್ಚಾಗುವುದರ ಜೊತೆಗೆ ಕಣ್ಣಿನ ದೃಷ್ಟಿ ಕೂಡ ವೃದ್ಧಿಸುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲು ಕ್ಲಿಕ್ ಮಾಡಿ

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್