AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart healthy diet: ಈ ಆಹಾರಗಳು ನಿಮ್ಮ ಆರೋಗ್ಯಕ್ಕೆ ಸಂಜೀವಿನಿ

ಭಾರತ ಮಾತ್ರವಲ್ಲ. ಪ್ರಪಂಚದಾದ್ಯಂತ ಜನರು ಹೃದಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಹೆಚ್ಚುತ್ತಿರುವುದಕ್ಕೆ ಚಿಂತಿತರಾಗಿದ್ದಾರೆ. ಹೃದಯಾಘಾತ ಅನಾರೋಗ್ಯಕರ ಜೀವನಶೈಲಿಯಿಂದ ಉಂಟಾಗುತ್ತದೆ. ಕಳೆದ ಕೆಲವು ದಶಕಗಳಲ್ಲಿ ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಸಾಕಷ್ಟು ಹದಗೆಟ್ಟಿದೆ. ಇದಲ್ಲದೆ, ದೈಹಿಕ ಚಟುವಟಿಕೆಯೂ ಕಡಿಮೆಯಾಗುತ್ತಿದೆ. ಜನರು ನೈಸರ್ಗಿಕ ಆಹಾರವನ್ನು ಸೇವನೆ ಮಾಡುವ ಬದಲು ಪ್ಯಾಕೇಟ್ ಗಳಲ್ಲಿ ಸಿದ್ದ ಮಾಡಿಟ್ಟ ಆಹಾರವನ್ನು ಹೆಚ್ಚು ಹೆಚ್ಚು ಸೇವನೆ ಮಾಡುತ್ತಿದ್ದಾರೆ, ಇವೆಲ್ಲವೂ ಹೃದಯ ಸಮಸ್ಯೆಗಳು ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತಿವೆ. ಅದಕ್ಕಾಗಿಯೇ, ಈ ಮಾರಣಾಂತಿಕ ಸಮಸ್ಯೆಗಳಿಂದ ಹೊರಬರಲು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದರ ಜೊತೆಗೆ ಆಹಾರ ಸೇವನೆಯಲ್ಲಿಯೂ ಕೆಲವು ಬದಲಾವಣೆ ಮಾಡಿಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ.

Heart healthy diet: ಈ ಆಹಾರಗಳು ನಿಮ್ಮ ಆರೋಗ್ಯಕ್ಕೆ ಸಂಜೀವಿನಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 09, 2024 | 5:17 PM

Share

ನಿಮಗೆ ತಿಳಿದಿರಬಹುದು ಹೃದ್ರೋಗಗಳು ದೇಹವನ್ನು ದುರ್ಬಲಗೊಳಿಸುತ್ತವೆ. ಅದರಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಭಾರತ ಮಾತ್ರವಲ್ಲ. ಪ್ರಪಂಚದಾದ್ಯಂತ ಜನರು ಹೃದಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಹೆಚ್ಚುತ್ತಿರುವುದಕ್ಕೆ ಚಿಂತಿತರಾಗಿದ್ದಾರೆ. ಹೃದಯಾಘಾತ ಅನಾರೋಗ್ಯಕರ ಜೀವನಶೈಲಿಯಿಂದ ಉಂಟಾಗುತ್ತದೆ. ಕಳೆದ ಕೆಲವು ದಶಕಗಳಲ್ಲಿ ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಸಾಕಷ್ಟು ಹದಗೆಟ್ಟಿದೆ. ಇದಲ್ಲದೆ, ದೈಹಿಕ ಚಟುವಟಿಕೆಯೂ ಕಡಿಮೆಯಾಗುತ್ತಿದೆ. ಜನರು ನೈಸರ್ಗಿಕ ಆಹಾರವನ್ನು ಸೇವನೆ ಮಾಡುವ ಬದಲು ಪ್ಯಾಕೇಟ್ ಗಳಲ್ಲಿ ಸಿದ್ದ ಮಾಡಿಟ್ಟ ಆಹಾರವನ್ನು ಹೆಚ್ಚು ಹೆಚ್ಚು ಸೇವನೆ ಮಾಡುತ್ತಿದ್ದಾರೆ, ಇವೆಲ್ಲವೂ ಹೃದಯ ಸಮಸ್ಯೆಗಳು ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತಿವೆ. ಅದಕ್ಕಾಗಿಯೇ, ಈ ಮಾರಣಾಂತಿಕ ಸಮಸ್ಯೆಗಳಿಂದ ಹೊರಬರಲು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದರ ಜೊತೆಗೆ ಆಹಾರ ಸೇವನೆಯಲ್ಲಿಯೂ ಕೆಲವು ಬದಲಾವಣೆ ಮಾಡಿಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ.

ಹೃದಯಾಘಾತ ತಪ್ಪಿಸಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ದಿನನಿತ್ಯ ಸೇವನೆ ಮಾಡುವ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆಹಾರ ತಜ್ಞರು ನೀಡಿರುವ ಸಲಹೆಯ ಅನುಸಾರ ಈ ಐದು ಸೂಪರ್ ಫುಡ್ ಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಂಡರೆ ಹೃದಯಾಘಾತದ ಅಪಾಯವನ್ನು ತಪ್ಪಿಸಬಹುದು ಎಂದು ತಜ್ಞರು ಹೇಳುತ್ತಾರೆ. ಪ್ರಸ್ತುತ ದಿನಗಳಲ್ಲಿ ಯುವಕರು ಮತ್ತು ವೃದ್ಧರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಈ ಪ್ರಮುಖ ಅಂಗವನ್ನು ನೋಡಿಕೊಳ್ಳುವುದು ನಿಮ್ಮ ಮೊದಲ ಆದ್ಯತೆಯಾಗಿರಬೇಕು. ಟ್ರಾನ್ಸ್ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಸಮೃದ್ಧವಾಗಿರುವ ಆಹಾರವು ಹೃದಯಾಘಾತಕ್ಕೆ ಕಾರಣವಾಗಬಹುದು. ಮತ್ತೊಂದೆಡೆ, ಕಡಿಮೆ ಸೋಡಿಯಂ, ಹೆಚ್ಚಿನ ಫೈಬರ್, ಒಮೆಗಾ -3 ಕೊಬ್ಬಿನಾಮ್ಲಗಳು, ಜೀವಸತ್ವಗಳು, ಉತ್ಕರ್ಷಣ ನಿರೋಧಕಗಳು, ಬೀಜಗಳಿಂದ ಸಮೃದ್ಧವಾಗಿರುವ ಆಹಾರವು ಉರಿಯೂತ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯಾಘಾತದ ಅಪಾಯವನ್ನು ಕ್ಷೀಣಿಸುವಂತೆ ಮಾಡುತ್ತದೆ. ನೀವು ಅವುಗಳನ್ನು ನಿಯಮಿತವಾಗಿ ಸೇವಿಸಿದರೆ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು.

ಹೃದಯದ ಆರೋಗ್ಯ ಕಾಪಾಡಲು ಇವುಗಳನ್ನು ಸೇವನೆ ಮಾಡಿ;

ಆವಕಾಡೊ: ಈ ಹಣ್ಣಿನಲ್ಲಿ ಮೊನೊಸ್ಯಾಚುರೇಟೆಡ್ ಕೊಬ್ಬು ಇರುತ್ತದೆ. ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಆ ಮೂಲಕ ಪ್ಲೇಕ್/ ಬ್ಲಾಕ್ ರಚನೆ ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುತ್ತದೆ. ಅದಲ್ಲದೆ ಇದು ಹೃದಯದ ಆರೋಗ್ಯ ಕಾಪಾಡುವುದರ ಜೊತೆಗೆ ಕ್ಯಾನ್ಸರ್, ಸಂಧಿವಾತ, ಖಿನ್ನತೆ/ ಉದ್ವೇಗ, ಉರಿಯೂತವನ್ನು ತಡೆಗಟ್ಟಲು ಸಹ ಸಹಾಯ ಮಾಡುತ್ತದೆ.

ಬೀಜಗಳು: ಚಿಯಾ ಬೀಜಗಳು, ಸೆಣಬಿನ ಬೀಜಗಳು, ಅಗಸೆ ಬೀಜಗಳು, ಕುಂಬಳಕಾಯಿ ಬೀಜಗಳು, ವಾಲ್ನಟ್ಗಳು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ಬೀಜಗಳಲ್ಲಿ ಫೈಬರ್, ಆಂಟಿ ಆಕ್ಸಿಡೆಂಟ್ಗಳು ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳು ಹೆಚ್ಚಾಗಿರುತ್ತವೆ. ಅವು ಹೃದಯವನ್ನು ರಕ್ಷಿಸುತ್ತವೆ.

ದಾಲ್ಚಿನ್ನಿ: ಮಸಾಲೆಯುಕ್ತ ದಾಲ್ಚಿನ್ನಿ ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಅದಕ್ಕಾಗಿಯೇ ಇದನ್ನು ಸೇವನೆ ಮಾಡುವುದು ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ದ್ರಾಕ್ಷಿ: ಇದು ಪೊಟ್ಯಾಸಿಯಮ್ ಭಂಡಾರವಾಗಿದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ದ್ರಾಕ್ಷಿಯ ಬೀಜಗಳಿಂದ ತಯಾರಿಸಿದ ಎಣ್ಣೆಯಲ್ಲಿ ಲಿನೋಲಿಕ್ ಆಮ್ಲವೂ ಇದೆ. ಇದು ಹೃದಯದ ಸಮಸ್ಯೆಗಳನ್ನು ತಡೆಯುತ್ತದೆ.

ವಾಲ್ನಟ್: ಒಮೆಗಾ -3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿರುವ ವಾಲ್ನಟ್ಗಳನ್ನು ಸೇವಿಸುವುದರಿಂದ, ಹೃದಯದ ಉರಿಯೂತವನ್ನು ಕಡಿಮೆ ಮಾಡುತ್ತದೆ. ಇದು ರಕ್ತದೊತ್ತಡವನ್ನು ಸಹ ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!