Heart-Health: ಹೃದ್ರೋಗದ ಅಪಾಯ ಕಡಿಮೆ ಮಾಡಲು ಈ 6 ತರಕಾರಿಗಳನ್ನು ಸೇವನೆ ಮಾಡಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Jan 16, 2025 | 3:31 PM

ಈಗ ಚಳಿಗಾಲವಾದ್ದರಿಂದ ಹಲವಾರು ರೀತಿಯ ಆರೋಗ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಅದಕ್ಕೆಲ್ಲಾ ಪರಿಹಾರವೆಂದರೆ ನಾವು ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಮಾಡಬೇಕು ಅದರಲ್ಲಿಯೂ ಹಸಿರು ತರಕಾರಿಗಳ ಸೇವನೆ ನಮ್ಮ ಹೃದಯದ ಆರೋಗ್ಯವನ್ನು ಚೆನ್ನಾಗಿಡುವುದರ ಜೊತೆಗೆ ಹೃದ್ರೋಗದ ಅಪಾಯವೂ ಕಡಿಮೆ ಮಾಡುತ್ತದೆ. ಹಾಗಾದರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

Heart-Health: ಹೃದ್ರೋಗದ ಅಪಾಯ ಕಡಿಮೆ ಮಾಡಲು ಈ 6 ತರಕಾರಿಗಳನ್ನು ಸೇವನೆ ಮಾಡಿ
ಸಾಂದರ್ಭಿಕ ಚಿತ್ರ
Follow us on

ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿರಲು ನಾನಾ ರೀತಿಯ ಕಸರತ್ತುಗಳು ನಡೆಯುತ್ತಲೇ ಇರುತ್ತದೆ. ಅದರಲ್ಲಿಯೂ ಹೃದ್ರೋಗದ ಅಪಾಯ ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳುವುದು ಸುಲಭದ ಮಾತಲ್ಲ. ಏಕೆಂದರೆ ನಾವು ಆರೋಗ್ಯವಾಗಿರಲು ನಮ್ಮ ಆಹಾರ ಪದ್ಧತಿ ಸರಿಯಾಗಿ ಇರಬೇಕು. ಅದಲ್ಲದೆ ಈಗ ಚಳಿಗಾಲವಾದ್ದರಿಂದ ಹಲವಾರು ರೀತಿಯ ಆರೋಗ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಅದಕ್ಕೆಲ್ಲಾ ಪರಿಹಾರವೆಂದರೆ ನಾವು ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಮಾಡಬೇಕು ಅದರಲ್ಲಿಯೂ ಹಸಿರು ತರಕಾರಿಗಳ ಸೇವನೆ ನಮ್ಮ ಹೃದಯದ ಆರೋಗ್ಯವನ್ನು ಚೆನ್ನಾಗಿಡುವುದರ ಜೊತೆಗೆ ಹೃದ್ರೋಗದ ಅಪಾಯವೂ ಕಡಿಮೆ ಮಾಡುತ್ತದೆ. ಹಾಗಾದರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಪಾಲಕ್ ಮತ್ತು ಬಸಳೆ

ಈ ಸೊಪ್ಪಿನಲ್ಲಿ ಪೋಷಕಾಂಶಗಳು ಸಮೃದ್ಧವಾಗಿದ್ದು ಇದನ್ನು ಚಳಿಗಾಲದಲ್ಲಿ ತಪ್ಪದೆ ತಿನ್ನಬೇಕು ಎಂದು ತಜ್ಞರು ಹೇಳುತ್ತಾರೆ. ಅದಲ್ಲದೆ ಇವುಗಳಲ್ಲಿ ಹಲವಾರು ಬಗೆಯ ವಿಟಮಿನ್ ಗಳು ಹಾಗೂ ಖನಿಜಾಂಶಗಳಿದ್ದು, ಇವುಗಳು ದೇಹದ ಕ್ರಿಯೆಯು ಸರಿಯಾಗಿ ನಡೆಯಲು ಸಹಕಾರಿಯಾಗುತ್ತದೆ. ಈ ಸೊಪ್ಪುಗಳಲ್ಲಿ ಕಬ್ಬಿಣಾಂಶವಿದ್ದು ಬಳಲಿಕೆ ಕಡಿಮೆ ಮಾಡುತ್ತದೆ. ಎಲ್ಲಕಿಂತ ಮುಖ್ಯವಾಗಿ ಇದು ನಿಮ್ಮ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಪಾಲಕ, ಬಸಳೆ ಇತ್ಯಾದಿ ಹಸಿರೆಲೆ ತರಕಾರಿಗಳನ್ನು ಸೇವನೆ ಮಾಡಿ. ಇವುಗಳಿಂದ ತಯಾರಾಗುವ ಜ್ಯೂಸ್ ಗಳು ಕೂಡ ದೇಹಕ್ಕೆ ಒಳ್ಳೆಯದು.

ಆವಕಾಡೊ

ಈ ಹಣ್ಣು ಅತ್ಯಧಿಕ ಪೋಷಕಾಂಶಗಳನ್ನು ಹೊಂದಿದ್ದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ. ಅದಕ್ಕಾಗಿಯೇ ಈ ಹಣ್ಣು ಅಮೃತಕ್ಕೆ ಸಮ ಎನ್ನಲಾಗುತ್ತದೆ. ದೈನಂದಿನ ಆಹಾರದಲ್ಲಿ ಒಂದು ಆವಕಾಡೊವನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ, ಹೃದಯದ ಆರೋಗ್ಯವನ್ನು ಹೆಚ್ಚಿಸಿಕೊಳ್ಳುವುದರಿಂದ ಹಿಡಿದು ಚರ್ಮಕ್ಕೆ ಕಾಂತಿ ನೀಡುವ ವರೆಗೆ ವ್ಯಾಪಕವಾದ ಪ್ರಯೋಜನಗಳನ್ನು ನೀಡುತ್ತದೆ.

ಇದನ್ನೂ ಓದಿ: ಪೆಟಿಕೋಟ್, ಧೋತಿ ಜಾರಬಹುದು ಎಂದು ಬಿಗಿಯಾಗಿ ಗಂಟು ಹಾಕುತ್ತಿದ್ದರೆ ಇಂದೇ ಈ ಅಭ್ಯಾಸ ಬಿಟ್ಟುಬಿಡಿ

ಬ್ರೊಕೋಲಿ

ಇದು ಕರಗುವ ಫೈಬರ್‌ನಿಂದ ತುಂಬಿದ್ದು, ದೇಹದಿಂದ ಕೊಲೆಸ್ಟ್ರಾಲ್ ಅನ್ನು ಹೊರಹಾಕುತ್ತದೆ. ಜೊತೆಗೆ ಇದರಲ್ಲಿ ಉರಿಯೂತದ ಗುಣಲಕ್ಷಣಗಳು, ಉತ್ಕರ್ಷಣ ನಿರೋಧಕಗಳಿದ್ದು ಇದು ಹೃದಯದ ಆರೋಗ್ಯವನ್ನು ಕಾಪಾಡಿಕೊಂಡು ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಬೀನ್ಸ್

ಹಸಿರು ಬೀನ್ಸ್ ನಲ್ಲಿ ಕರಗುವ ನಾರಿನಂಶ ಉತ್ತಮವಾಗಿದ್ದು ಇದು ಎಲ್ಡಿ ಎಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಇದರಲ್ಲಿರುವ ಫೈಬರ್, ಪೊಟ್ಯಾಸಿಯಮ್ ಮತ್ತು ಫೋಲೇಟ್ ಹೃದಯದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ. ಫೈಬರ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಫೋಲೇಟ್ ಹೋಮೋಸಿಸ್ಟೈನ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇವೆಲ್ಲವೂ ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

ಹಾಗಲಕಾಯಿ

ಇದರಲ್ಲಿ ಕ್ಯಾಲೋರಿ ಬಹಳ ಕಡಿಮೆ ಇದ್ದು, ಫೈಬರ್ ಸಮೃದ್ಧವಾಗಿದೆ. ಜೊತೆಗೆ ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದಲ್ಲದೆ ಇದು ಜೀವಸತ್ವಗಳು, ಉತ್ಕರ್ಷಣ ನಿರೋಧಕಗಳು ಮತ್ತು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ತರಕಾರಿಯಾಗಿದೆ.

ಸೌತೆಕಾಯಿ

ಇದು ಹೈಡ್ರೇಟಿಂಗ್ ಆಗಿದ್ದು ಇದರಲ್ಲಿರುವ ವಿಟಮಿನ್ ಎ ಕಣ್ಣುಗಳಿಗೆ ಪ್ರಯೋಜನಕಾರಿಯಾಗಿದೆ. ಜೊತೆಗೆ ಈ ತರಕಾರಿ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ಸೌತೆಕಾಯಿಯಲ್ಲಿರುವ ವಿಟಮಿನ್- ಕೆ ರಕ್ತ ಹೆಪ್ಪುಗಟ್ಟುವಿಕೆಗೆ ಸಹಾಯ ಮಾಡುತ್ತದೆ ಮತ್ತು ಮೂಳೆಗಳನ್ನು ಬಲವಾಗಿ ಮತ್ತು ಆರೋಗ್ಯಕರವಾಗಿರಿಸುತ್ತದೆ.

(ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದರೂ ವೈದ್ಯರು ಅಥವಾ ತಜ್ಞರನ್ನು ಸಂಪರ್ಕಿಸಿ.)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ