AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತಾ ಸೇವನೆ ಮಾಡುವ ಅಭ್ಯಾಸ ನಿಮಗಿದ್ಯಾ? ಪ್ರತಿದಿನ ಎಷ್ಟು ತಿನ್ನುವುದು ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಜಾಗರೂಕರಾಗಿರುವುದು ಬಹಳ ಮುಖ್ಯ. ಅದರಲ್ಲಿಯೂ ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು ಸೇವಿಸಿ, ಇದು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಋತುವಿನಲ್ಲಿ, ಕಡಲೆಕಾಯಿ ಮತ್ತು ಬಾದಾಮಿಯಂತೆಯೇ ಪಿಸ್ತಾಗಳ ಸೇವನೆ ಕೂಡ ಬಹಳ ಪ್ರಯೋಜನಕಾರಿ. ಆದರೆ ಅನೇಕರಿಗೆ ಪಿಸ್ತಾ ಇಷ್ಟವಾಗುವುದಿಲ್ಲ. ಅದರಲ್ಲಿಯೂ ಪಿಸ್ತಾ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂದು ಕೆಲವರು ಭಾವಿಸುತ್ತಾರೆ. ಅದಕ್ಕಾಗಿಯೇ ಪಿಸ್ತಾ ಸೇವನೆಯನ್ನು ಕಡಿಮೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ದಿನಕ್ಕೆ ಎಷ್ಟು ಪಿಸ್ತಾ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬೇಕು, ಇದು ಯಾರಿಗೆ ಒಳ್ಳೆಯದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪಿಸ್ತಾ ಸೇವನೆ ಮಾಡುವ ಅಭ್ಯಾಸ ನಿಮಗಿದ್ಯಾ? ಪ್ರತಿದಿನ ಎಷ್ಟು ತಿನ್ನುವುದು ಒಳ್ಳೆಯದು
ಪಿಸ್ತಾ
ಪ್ರೀತಿ ಭಟ್​, ಗುಣವಂತೆ
|

Updated on: Nov 17, 2025 | 3:05 PM

Share

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮಗೂ ತಿಳಿದಿರಬಹುದು ಈ ಸಮಯದಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಂಡುಬರುವುದರಿಂದ ಆದಷ್ಟು ಜಾಗೃತೆ ವಹಿಸಬೇಕಾಗುತ್ತದೆ. ಅದರಲ್ಲಿಯೂ ಆಹಾರದ ಬಗ್ಗೆ ಗಮನ ಹರಿಸುವುದು ಅನಿವಾರ್ಯ. ಅದಕ್ಕಾಗಿಯೇ ಆರೋಗ್ಯ ತಜ್ಞರು ಚಳಿಗಾಲದಲ್ಲಿ ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು ಸೇವಿಸಿ ಎಂದು ಹೇಳುತ್ತಾರೆ. ಏಕೆಂದರೆ ಈ ಅಭ್ಯಾಸ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಅದರಲ್ಲಿಯೂ ಈ ಋತುವಿನಲ್ಲಿ, ಕಡಲೆಕಾಯಿ, ಹೆಸರು ಬೇಳೆ ಮತ್ತು ಬಾದಾಮಿ (Almonds) ಅಂತೆಯೇ ಪಿಸ್ತಾಗಳ ಸೇವನೆ ಕೂಡ ಬಹಳ ಪ್ರಯೋಜನಕಾರಿ. ಇವು ಕೂಡ ಆರೋಗ್ಯಕ್ಕೆ ಒಳ್ಳೆಯದು. ಆದರೆ ಅನೇಕರಿಗೆ ಪಿಸ್ತಾ (Pistachios) ಇಷ್ಟವಾಗುವುದಿಲ್ಲ. ಅದರಲ್ಲಿಯೂ ಪಿಸ್ತಾ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂದು ಕೆಲವರು ಭಾವಿಸುತ್ತಾರೆ. ಅದಕ್ಕಾಗಿಯೇ ಪಿಸ್ತಾ ಸೇವನೆಯನ್ನು ಕಡಿಮೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ದಿನಕ್ಕೆ ಎಷ್ಟು ಪಿಸ್ತಾ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬೇಕು, ಇದು ಯಾರಿಗೆ ಒಳ್ಳೆಯದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪಿಸ್ತಾಗಳ ಸೇವನೆಯಿಂದ ಸಿಗುವ ಪ್ರಯೋಜನಗಳು:

ಡ್ರೈ ಫ್ರೂಟ್ಸ್ ಗಳ ಸಾಲಿಗೆ ಸೇರಿದ ಪಿಸ್ತಾ ಕೇವಲ ಪೌಷ್ಟಿಕಾಂಶಗಳನ್ನು ಒಳಗೊಂಡಿರುವುದು ಮಾತ್ರವಲ್ಲದೆ ಅತಿಯಾದ ನಾರಿನ ಅಂಶ ಮತ್ತು ಪ್ರೋಟಿನ್ ಅಂಶಗಳಿಂದಲೂ ಸಮೃದ್ಧವಾಗಿರುತ್ತದೆ. ಇದರ ಸೇವನೆ ಹಸಿವನ್ನು ಕಡಿಮೆ ಮಾಡಿ ಬೇರೆ ಆಹಾರಗಳನ್ನು ಮಿತ ಪ್ರಮಾಣದಲ್ಲಿ ಸೇವಿಸುವಂತೆ ಮಾಡುತ್ತವೆ. ಜೊತೆಗೆ ಒಂದೇ ರೀತಿಯ ಆರೋಗ್ಯಕರ ತೂಕ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಪಿಸ್ತಾದಲ್ಲಿ ಮೋನೋ ಅನ್ ಸ್ಯಾಚುರೇಟೆಡ್ ಫ್ಯಾಟಿ ಆಸಿಡ್ ಅಂಶಗಳು ಹೆಚ್ಚಾಗಿ ಕಂಡುಬರುತ್ತದೆ. ಇದು ದೇಹದ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡಿ ದೇಹದ ಉರಿಯೂತದ ಸಮಸ್ಯೆಯನ್ನು ನಿವಾರಣೆ ಮಾಡಲು ಸಹಾಯ ಮಾಡುತ್ತದೆ.

ಪಿಸ್ತಾ ಅತಿಯಾದ ಸೇವನೆಯಿಂದ ಉಂಟಾಗುವ ತೊಂದರೆಗಳು?

ಸಾಮಾನ್ಯವಾಗಿ ನಿಯಮಿತವಾಗಿ ಪಿಸ್ತಾ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಆರೋಗ್ಯ ತಜ್ಞರು ಅವುಗಳನ್ನು ಅತಿಯಾಗಿ ತಿನ್ನಬಾರದು ಎಂದು ಎಚ್ಚರಿಸುತ್ತಾರೆ. ಏಕೆಂದರೆ ಹೆಚ್ಚು ಪಿಸ್ತಾ ಸೇವಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಅದಕ್ಕಾಗಿಯೇ ಪ್ರತಿದಿನ ಬೆಳಿಗ್ಗೆ ಐದರಿಂದ ಏಳು ಪಿಸ್ತಾ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಆದರೆ, ಏಳಕ್ಕಿಂತ ಹೆಚ್ಚು ಪಿಸ್ತಾ ತಿನ್ನುವುದು ಆರೋಗ್ಯಕ್ಕೆ ಅಷ್ಟು ಒಳ್ಳೆಯದಲ್ಲ. ದಿನಕ್ಕೆ ಏಳು ಪಿಸ್ತಾಗಳಿಗಿಂತ ಹೆಚ್ಚು ತಿನ್ನುವುದು ಆರೋಗ್ಯಕ್ಕೆ ಹಾನಿಕಾರಕ. ವಿಶೇಷವಾಗಿ ನಾನಾ ರೀತಿಯ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಪಿಸ್ತಾ ತಿನ್ನುವುದನ್ನು ತಪ್ಪಿಸಬೇಕು.

ಇದನ್ನೂ ಓದಿ: ಯಾವ ಡ್ರೈ ಫ್ರೂಟ್ಸ್ ಯಾವೆಲ್ಲಾ ಆರೋಗ್ಯ ಸಮಸ್ಯೆಗೆ ಪರಿಹಾರ? ಇಲ್ಲಿದೆ ನೋಡಿ

ಯಾವ ಸಮಯದಲ್ಲಿ ಸೇವನೆ ಮಾಡುವುದು ಒಳ್ಳೆಯದು?

ಸಾಮಾನ್ಯವಾಗಿ ಪಿಸ್ತಾ ಬಾಯಿಯ ರುಚಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಹಾಗಾಗಿ ಕೆಲವೊಮ್ಮೆ ಇದರ ಸೇವನೆ ಮಿತಿ ಮೀರುತ್ತದೆ. ಆದರೆ ಇದನ್ನು ಯಾವಾಗಲೂ ಮಿತವಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ ಬೆಳಗ್ಗಿನ ಸಮಯದಲ್ಲಿ ಪಿಸ್ತಾ ತಿನ್ನುವುದು ವಿಶೇಷವಾಗಿ ಒಳ್ಳೆಯದು. ಮಧ್ಯಾಹ್ನ ಅಥವಾ ಸಂಜೆ ತಿನ್ನುವುದಕ್ಕಿಂತ ಬೆಳಿಗ್ಗೆ ಅವುಗಳನ್ನು ತಿನ್ನುವುದರಿಂದ ಪ್ರಯೋಜನ ಹೆಚ್ಚು ಸಿಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ