AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಏಳು ಗಂಟೆಯ ನಂತರ ನೀವು ಕೂಡ ಈ ಆಹಾರಗಳ ಸೇವನೆ ಮಾಡುತ್ತಿದ್ದರೆ ಈ ಸ್ಟೋರಿ ಮಿಸ್ ಮಾಡ್ದೆ ಓದಿ

ಆರೋಗ್ಯ ಕಾಪಾಡಿಕೊಳ್ಳಲು ರಾತ್ರಿ ಊಟದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಏಳು ಗಂಟೆಯ ನಂತರ ಏನನ್ನಾದರೂ ತಿನ್ನುವುದು ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಅದಕ್ಕಾಗಿಯೇ ಏಳು ಗಂಟೆಯ ನಂತರ ಯಾವುದೇ ಕಾರಣಕ್ಕೂ ಕೆಲವು ಆಹಾರಗಳ ಸೇವನೆ ಮಾಡಬಾರದು ಅವು ಆರೋಗ್ಯವನ್ನು ಹಾಳು ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಆ ಆಹಾರಗಳು ಯಾವವು? ಯಾಕೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಾತ್ರಿ ಏಳು ಗಂಟೆಯ ನಂತರ ನೀವು ಕೂಡ ಈ ಆಹಾರಗಳ ಸೇವನೆ ಮಾಡುತ್ತಿದ್ದರೆ ಈ ಸ್ಟೋರಿ ಮಿಸ್ ಮಾಡ್ದೆ ಓದಿ
Foods To Avoid After 7 Pm
ಪ್ರೀತಿ ಭಟ್​, ಗುಣವಂತೆ
|

Updated on: Sep 12, 2025 | 3:15 PM

Share

ಆರೋಗ್ಯವೇ ಸಂಪತ್ತು. ಯಾರಿಗೆ ಆಗಲಿ ದುಡ್ಡಿಗಿಂತ ಆರೋಗ್ಯವೇ (Health) ಬಹಳ ಮುಖ್ಯವಾಗುತ್ತದೆ. ಯಾವುದೇ ರೀತಿಯ ಕಾಯಿಲೆಗಳಿಲ್ಲದ ವ್ಯಕ್ತಿ ಮಾತ್ರ ಯಾವಾಗಲೂ ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಅನೇಕ ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾತ್ರವಲ್ಲ ನಮ್ಮ ಆರೋಗ್ಯದ ವಿಷಯದಲ್ಲಿ, ಆಹಾರವು (Foods) ಬಹಳ ನಿರ್ಣಾಯಕ ಪಾತ್ರ ವಹಿಸುತ್ತದೆ. ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟವು ಆರೋಗ್ಯ ಕಾಪಾಡಿಕೊಳ್ಳಲು ಕಾರಣವಾಗಿರುತ್ತದೆ. ಅದಕ್ಕೂ ಮಿಗಿಲಾಗಿ ರಾತ್ರಿ ಮಾಡುವ ಊಟದ ಆಧಾರದ ಮೇಲೆ ಆರೋಗ್ಯ ನಿರ್ಧಾರವಾಗುತ್ತದೆ. ಆದರೆ ನಮ್ಮಲ್ಲಿ ಕೆಲವರು ರಾತ್ರಿ ಭೋಜನಕ್ಕೆ ಕುಳಿತಾಗ ಮನಸ್ಸಿಗೆ ಬಂದಿದ್ದೆಲ್ಲವನ್ನೂ ಯಾವುದೇ ಹಿಂಜರಿಕೆಯಿಲ್ಲದೆ ಹೊಟ್ಟೆಗಿಳಿಸುತ್ತಾರೆ. ಆದರೆ ವೈದ್ಯರು ರಾತ್ರಿ ಅಪ್ಪಿತಪ್ಪಿಯೂ ಕೆಲವು ಆಹಾರಗಳನ್ನು ಸೇವನೆ ಮಾಡಬಾರದು. ಅವು ಆರೋಗ್ಯವನ್ನು ಹಾಳು ಮಾಡುತ್ತದೆ ಎಂದಿದ್ದಾರೆ. ಹಾಗಾದರೆ ಆ ಆಹಾರಗಳು ಯಾವವು? ಯಾಕೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಂಜೆ 7 ಗಂಟೆಯ ನಂತರ ಊಟ ಮಾಡುವುದರಿಂದ ಜೀರ್ಣಕ್ರಿಯೆ ಸಮಸ್ಯೆಗಳು, ಹೊಟ್ಟೆಯ ಅಸ್ವಸ್ಥತೆ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳು ಉಂಟಾಗುತ್ತದೆ. ಆಯುರ್ವೇದದ ಪ್ರಕಾರ, ಬೇಗನೆ ಊಟ ಮಾಡಿ ಮಲಗುವುದರಿಂದ ನಿದ್ರೆ ಚೆನ್ನಾಗಿ ಬರುತ್ತದೆ ಮಾತ್ರವಲ್ಲ ಆರೋಗ್ಯವೂ ಚೆನ್ನಾಗಿರುತ್ತದೆ. ಸಂಜೆ 7 ಗಂಟೆಯ ನಂತರ ಹಸಿವಾದಲ್ಲಿ, ಕಿಚಡಿ ಅಥವಾ ಎರಡು ಖರ್ಜೂರ ಅಥವಾ ಒಂದು ಲೋಟ ಹಾಲು ಹೀಗೆ ಹೊಟ್ಟೆಗೆ ಭಾರವಾಗದಂತಹ ಆಹಾರವನ್ನು ಸೇವನೆ ಮಾಡಬೇಕು. ಆದರೆ ಯಾವುದೇ ಕಾರಣಕ್ಕೂ ಕೆಲವು ಆಹಾರಗಳನ್ನು ರಾತ್ರಿ ಸಮಯದಲ್ಲಿ ಸೇವನೆ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಇವು ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಮಟನ್ ಬಿರಿಯಾನಿ

ಅನೇಕರು ರಾತ್ರಿ ಸಮಯದಲ್ಲಿ ಬಿರಿಯಾನಿ ತಿನ್ನುವುದಕ್ಕೆ ಇಷ್ಟಪಡುತ್ತಾರೆ. ಅದರಲ್ಲಿಯೂ ಕೋಳಿ, ಮಟನ್, ಮೀನು ಮತ್ತು ಸೀಗಡಿಯಂತಹ ವಿವಿಧ ರೀತಿಯ ಬಿರಿಯಾನಿಗಳನ್ನು ಸೇವನೆ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರು ಸಂಜೆ ಏಳು ಗಂಟೆಯ ನಂತರ ಮಟನ್ ಬಿರಿಯಾನಿ ತಿನ್ನುವುದನ್ನು ತಪ್ಪಿಸಬೇಕು ಎಂದು ಹೇಳುತ್ತಾರೆ. ಏಕೆಂದರೆ ಇದರಲ್ಲಿರುವ ಹೆಚ್ಚಿನ ಪ್ರಮಾಣದ ಕ್ಯಾಲೋರಿ ಮತ್ತು ಕೊಬ್ಬಿನಾಂಶ ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಇದಲ್ಲದೆ, ಮಟನ್ ಬಿರಿಯಾನಿಯ ಒಂದು ಸಣ್ಣ ಭಾಗವು 500 – 700 ಕ್ಯಾಲೋರಿಗಳಿಗೆ ಸಮಾನವಾಗಿರುತ್ತದೆ. ಹಾಗಾಗಿ ಇಷ್ಟು ಪ್ರಮಾಣದ ಕ್ಯಾಲೋರಿಗಳನ್ನು ಸೇವನೆ ಮಾಡುವುದರಿಂದ ತೂಕ ಹೆಚ್ಚಾಗಬಹುದು.

ಇದನ್ನೂ ಓದಿ
Image
ತುಪ್ಪದಿಂದ ಪಾದ ಮಸಾಜ್ ಮಾಡುವ ಪದ್ಧತಿ ಎಷ್ಟು ಪ್ರಯೋಜನಕಾರಿ ನೋಡಿ!
Image
ಈ ಒಂದು ಹಣ್ಣಿನಲ್ಲಿ ಅದೆಷ್ಟು ಪ್ರಯೋಜನವಿದೆ ನೋಡಿ!
Image
ಆರೋಗ್ಯವಾಗಿರಲು ಏನು ಮಾಡಬೇಕು? ಸದ್ಗುರು ತಿಳಿಸಿರುವ ಈ ಟಿಪ್ಸ್ ಪಾಲನೆ ಮಾಡಿ
Image
ಯಾವ ಡ್ರೈ ಫ್ರೂಟ್ಸ್ ಯಾವೆಲ್ಲಾ ಆರೋಗ್ಯ ಸಮಸ್ಯಗೆ ಪರಿಹಾರ?

ಮಸಾಲೆಯುಕ್ತ ಆಹಾರಗಳು

ಭಾರತದಲ್ಲಿ ಮಸಾಲೆಯುಕ್ತ ಆಹಾರಗಳಿಗೆ ಕೊರತೆಯಿಲ್ಲ. ಅದರಲ್ಲಿಯೂ ಅನೇಕರು ಸ್ಪೈಸಿಯಾಗಿರುವ ಆಹಾರಗಳನ್ನೇ ಹೆಚ್ಚೆಚ್ಚು ಸೇವನೆ ಮಾಡುತ್ತಾರೆ. ಉದಾಹರಣೆಗೆ ಖಾರವಾದ ಚಿಕನ್ ಕರಿ, ಮಟನ್ ಕರಿ ಮತ್ತು ಕೊಲ್ಹಾಪುರಿ ಚಿಕನ್ ಇವುಗಳನ್ನೇ ಸೇವನೆ ಮಾಡುತ್ತಾರೆ. ಆದರೆ ಸಂಜೆ ಏಳು ಗಂಟೆಯ ನಂತರ ಈ ರೀತಿ ಮಸಾಲೆ ಅಧಿಕವಾಗಿರುವ ಆಹಾರಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಅದರಲ್ಲಿಯೂ ಹೊಟ್ಟೆ, ಹೃದಯದ ಭಾಗಗಳಲ್ಲಿ ಉರಿಯಂತಹ ಅನುಭವ ಉಂಟಾಗಬಹುದು. ಇದಲ್ಲದೆ, ಈ ಭಕ್ಷ್ಯಗಳನ್ನು ಎಣ್ಣೆ ಮತ್ತು ತುಪ್ಪದಿಂದ ತಯಾರಿಸುವುದರಿಂದ ಇದು ಹೃದಯ ಸಂಬಂಧಿತ ಸಮಸ್ಯೆಗಳಿಗೂ ಕಾರಣವಾಗಬಹುದು. ಹಾಗಾಗಿ ಇಂತಹ ಆಹಾರಗಳಿಂದ ದೂರವಿದ್ದಷ್ಟು ಒಳ್ಳೆಯದು.

ಸಿಹಿ ತಿನಿಸುಗಳು

ನಮ್ಮಲ್ಲಿ ಅನೇಕರು ಊಟದ ನಂತರ ಸಿಹಿತಿಂಡಿಗಳನ್ನು ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಆರೋಗ್ಯ ತಜ್ಞರು ಸಂಜೆ 7 ಗಂಟೆಯ ನಂತರ ಸಿಹಿ ತಿಂಡಿಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸುವುದು ಒಳ್ಳೆಯದು ಎನ್ನುತ್ತಾರೆ. ಏಕೆಂದರೆ ಇವುಗಳ ಸೇವನೆ ಮಾಡುವುದರಿಂದ ನಿದ್ರೆ ಸರಿಯಾಗಿ ಬರುವುದಿಲ್ಲ ಮಾತ್ರವಲ್ಲ ಒಮ್ಮೆ ತಿಂದ ಮೇಲೆ ಹೆಚ್ಚೆಚ್ಚು ತಿನ್ನುವ ಬಯಕೆ ಉಂಟಾಗುತ್ತದೆ. ಇನ್ನು ಊಟದ ನಂತರ ಸಿಹಿತಿಂಡಿಗಳನ್ನು ತಿನ್ನುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಕೂಡ ಕಷ್ಟಕರವಾಗುತ್ತದೆ. ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ನಿಮಗೆ ಆಗಾಗ ವಿಚಿತ್ರ ಕನಸುಗಳು ಬೀಳುತ್ತಾ? ರಾತ್ರಿ ಈ ಆಹಾರಗಳ ಸೇವನೆ ಮಾಡುವುದನ್ನು ಬಿಟ್ಟುಬಿಡಿ

ಬಜ್ಜಿ, ಪಕೋಡ

ಇದು ನಮ್ಮಲ್ಲಿ ಅನೇಕರು ಮಾಡುವ ತಪ್ಪು. ಸಂಜೆಯ ತಂಪಾದ ವಾತಾವರಣದಲ್ಲಿ ಬಜ್ಜಿ, ಪಕೋಡ ಮಾಡಿಕೊಂಡು ಅದರ ಜೊತೆ ಬಿಸಿ ಬಿಸಿ ಚಹಾ ಕುಡಿಯುವುದು ನಮ್ಮಲ್ಲಿ ಅನೇಕರಿಗೆ ಅಭ್ಯಾಸವಾಗಿಬಿಟ್ಟಿದೆ. ಆದರೆ ನೆನಪಿರಲಿ ಏಳು ಗಂಟೆಯ ನಂತರ ಪಕೋಡ ಅಥವಾ ಬಜ್ಜಿ ತಿನ್ನುವುದರಿಂದ ಹೊಟ್ಟೆಯಲ್ಲಿ ಅಸ್ವಸ್ಥತೆ ಉಂಟಾಗಬಹುದು. ಗ್ಯಾಸ್ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳು ಉದ್ಭವಿಸಬಹುದು. ಏಕೆಂದರೆ ಪಕೋಡ ಮತ್ತು ಬಜ್ಜಿಗಳನ್ನು ಹೆಚ್ಚಾಗಿ ಡೀಪ್-ಫ್ರೈ ಮಾಡಲಾಗುತ್ತದೆ. ಅವು ಹೆಚ್ಚಿನ ಆಮ್ಲೀಯ ಸ್ವಭಾವವನ್ನು ಹೊಂದಿರುತ್ತವೆ. ರಾತ್ರಿಯಲ್ಲಿ ಹೆಚ್ಚಿನ ಆಮ್ಲೀಯ ಆಹಾರವನ್ನು ಸೇವಿಸಿದಾಗ, ಅವು ಜೀರ್ಣವಾಗಲು ಸಮಯ ತೆಗೆದುಕೊಳ್ಳುತ್ತದೆ. ಪರಿಣಾಮವಾಗಿ, ಇದು ನಿಮ್ಮ ನಿದ್ರೆಗೆ ಅಡ್ಡಪಡಿಸಬಹುದು ಜೊತೆಗೆ ಅನಾರೋಗ್ಯಕ್ಕೂ ಕಾರಣವಾಗಬಹುದು.

ಕೆಫೀನ್ ಪಾನೀಯಗಳು

ಕೆಫೀನ್ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಸಂಜೆ 7 ಗಂಟೆಯ ನಂತರ ಚಹಾ, ಕಾಫಿ ಮತ್ತು ಗ್ರೀನ್ ಟೀ ನಂತಹ ಕೆಫೀನ್ ಭರಿತ ಪಾನೀಯಗಳನ್ನು ಕುಡಿಯುವುದರಿಂದ ನಿಮ್ಮ ನಿದ್ರೆಗೆ ತೊಂದರೆಯಾಗುತ್ತದೆ. ಇದಲ್ಲದೆ, ಇದು ನಿಮ್ಮ ಒಟ್ಟಾರೆ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಸಂಜೆ 6 ಗಂಟೆಯ ನಂತರ ಅಂತಹ ಪಾನೀಯಗಳ ಸೇವನೆ ಮಾಡುವುದನ್ನು ತಪ್ಪಿಸುವುದು ಬಹಳ ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ. ಹೆಚ್ಚುವರಿಯಾಗಿ, ಕೆಫೀನ್ ರಾತ್ರಿಯಲ್ಲಿ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ, ಇದು ಅಜೀರ್ಣ, ಉಬ್ಬುವುದು ಮತ್ತು ಹೊಟ್ಟೆ ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ