ಹೃದಯ ಆರೋಗ್ಯವಾಗಿರಬೇಕು ಅಂದ್ರೆ ಮೊದಲು ಈ ಆಹಾರಗಳ ಸೇವನೆ ಮಾಡಬೇಕು
ಇತ್ತೀಚಿಗೆ ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್‌ನಂತಹ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಹೃದಯದ ಆರೋಗ್ಯದ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಹಾಗಾಗಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನಾವು ಸೇವನೆ ಮಾಡುವ ಆಹಾರ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹಾಗಾದರೆ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು, ಇದರಿಂದ ಸಿಗುವ ಪ್ರಯೋಜನಗಳೇನು ಸೇರಿದಂತೆ ಮತ್ತಷ್ಟು ಮಾಹಿತಿಯನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇಂದಿನ ಆಧುನಿಕ ಜೀವನಶೈಲಿಯಲ್ಲಿ, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ಇತ್ತೀಚಿಗೆ ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್‌ನಂತಹ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಹೃದಯದ (Heart) ಆರೋಗ್ಯದ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಹಾಗಾಗಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನಾವು ಸೇವನೆ ಮಾಡುವ ಆಹಾರ (Super foods) ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಸರಿಯಾದ ಪೋಷಕಾಂಶಗಳನ್ನು ಹೊಂದಿರುವ ಆಹಾರವನ್ನು ಸೇವಿಸುವ ಮೂಲಕ, ಹೃದಯವನ್ನು ಸದೃಢವಾಗಿಟ್ಟುಕೊಳ್ಳಬಹುದು. ಹಾಗಾದರೆ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ವಾಲ್ನಟ್ಸ್: ಇದು ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಮತ್ತು ಅಪಧಮನಿಗಳ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.
ಆವಕಾಡೊ: ಇವು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿದ್ದು ಅವುಗಳಲ್ಲಿರುವ ಪೊಟ್ಯಾಸಿಯಮ್ ಮತ್ತು ಫೋಲೇಟ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ.
ಸಾಲ್ಮನ್ ಮೀನು: ಈ ಮೀನು ಒಮೆಗಾ-3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದ್ದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ ಉರಿಯೂತವನ್ನು ಕೂಡ ಕಡಿಮೆ ಮಾಡಲು ಸಹಕಾರಿಯಾಗಿದೆ.
ಬೆರ್ರಿ ಹಣ್ಣುಗಳು: ಸ್ಟ್ರಾಬೆರಿ ಮತ್ತು ಬೆರ್ರಿ ಹಣ್ಣುಗಳು ಫ್ಲೇವನಾಯ್ಡ್‌ಗಳಂತಹ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ರಕ್ತನಾಳಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಹೃದಯಾಘಾತವನ್ನು ತಡೆಯಲು ಒಬ್ಬ ವ್ಯಕ್ತಿ ಪ್ರತಿನಿತ್ಯ ಎಷ್ಟು ಹೊತ್ತು ನಡೆಯಬೇಕು ತಿಳಿದುಕೊಳ್ಳಿ
ಸೊಪ್ಪುಗಳು: ಪಾಲಕ್ ಮುಂತಾದ ಸೊಪ್ಪುಗಳು ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಿಂದ ಹೇರಳವಾಗಿದ್ದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ವಿಶೇಷವಾಗಿ, ಸೊಪ್ಪುಗಳು ನೈಟ್ರೇಟ್‌ಗಳನ್ನು ಹೊಂದಿದ್ದು ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
ಬೀಟ್ರೂಟ್: ಈ ತರಕಾರಿ ನೈಸರ್ಗಿಕ ನೈಟ್ರೇಟ್ ಮತ್ತು ಪೊಟ್ಯಾಸಿಯಮ್ ನಿಂದ ಸಮೃದ್ಧವಾಗಿದ್ದು ರಕ್ತನಾಳಗಳನ್ನು ಹಿಗ್ಗಿಸುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
ಬಾಳೆಹಣ್ಣು: ಇದರಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದ್ದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದು ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಸೋಡಿಯಂನ ಪರಿಣಾಮಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಟೊಮೆಟೊ: ಇದರಲ್ಲಿರುವ ಪೋಷಕಾಂಶಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಹೃದಯ ಕೋಶಗಳನ್ನು ಹಾನಿಯಿಂದ ರಕ್ಷಿಸಲು ಪ್ರಯೋಜನಕಾರಿ. ಈ ಆಹಾರಗಳನ್ನು ಸೇವಿಸುವುದು ಮಾತ್ರವಲ್ಲದೆ, ಉಪ್ಪು, ಸಕ್ಕರೆ ಮತ್ತು ಸಂಸ್ಕರಿಸಿದ ಆಹಾರಗಳನ್ನು ಕಡಿಮೆ ಮಾಡುವುದರಿಂದ ನಿಮ್ಮ ಹೃದಯದ ಆರೋಗ್ಯವನ್ನು ಮತ್ತಷ್ಟು ಸುಧಾರಿಸಬಹುದು.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
