AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಸಮಯ ಎಸಿಯಲ್ಲಿ ಇರುವವರಿಗೆ ಉಸಿರಾಟ ಮತ್ತು ಚರ್ಮದ ಸಮಸ್ಯೆ ಕಂಡುಬರುವುದಕ್ಕೆ ಕಾರಣ ಏನ್ ಗೊತ್ತಾ?

ಬೇಸಿಗೆಯಲ್ಲಿ ಅನೇಕರು ಹೆಚ್ಚು ಸಮಯ ಎಸಿಯಲ್ಲಿ ಇರಲು ಬಯಸುತ್ತಾರೆ, ಆದರೆ ನಿರಂತರವಾಗಿ ಎಸಿಯಲ್ಲಿ ಇರುವುದರಿಂದ ಉಸಿರಾಟ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಬಹುದು. ತಜ್ಞರ ಪ್ರಕಾರ, ಎಸಿಯಿಂದ ಬರುವ ಗಾಳಿ ಮೂಗು, ಗಂಟಲು ಮತ್ತು ಉಸಿರಾಟದ ಮಾರ್ಗಗಳಲ್ಲಿ ಒಣತನ ಉಂಟುಮಾಡಬಹುದು. ಹಾಗಾದರೆ ಈ ರೀತಿಯ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕು, ಹೇಗೆ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೆಚ್ಚು ಸಮಯ ಎಸಿಯಲ್ಲಿ ಇರುವವರಿಗೆ ಉಸಿರಾಟ ಮತ್ತು ಚರ್ಮದ ಸಮಸ್ಯೆ ಕಂಡುಬರುವುದಕ್ಕೆ ಕಾರಣ ಏನ್ ಗೊತ್ತಾ?
Ac And HealthImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 08, 2026 | 10:56 PM

Share

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಹೆಚ್ಚು ಸಮಯ ಏರ್ ಕಂಡೀಷನರ್ (AC) ಬಳಕೆಗೆ ಒಲವು ತೋರುತ್ತಿದ್ದಾರೆ. ಮನೆ, ಕಚೇರಿ ಮತ್ತು ವಾಹನಗಳಲ್ಲಿ ನಿರಂತರವಾಗಿ ಎಸಿಯಲ್ಲಿ ಇರುವ ಅಭ್ಯಾಸ ಈಗ ಸಾಮಾನ್ಯವಾಗಿದೆ. ಆದರೆ ವೈದ್ಯರ ಪ್ರಕಾರ, ದೀರ್ಘ ಸಮಯ ಎಸಿಯಲ್ಲಿ ಇರುವವರಲ್ಲಿ ಉಸಿರಾಟ ಹಾಗೂ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಹೆಚ್ಚುತ್ತಿದೆ. ತಜ್ಞರ ಪ್ರಕಾರ, ಎಸಿಯಿಂದ ಬರುವ ಗಾಳಿ ಮೂಗು, ಗಂಟಲು ಮತ್ತು ಉಸಿರಾಟದ ಮಾರ್ಗಗಳಲ್ಲಿ ಒಣತನ ಉಂಟುಮಾಡಬಹುದು. ಇದರಿಂದ ಕೆಲವರಿಗೆ ಕೆಮ್ಮು, ಸೀನಾಟ, ಉಸಿರಾಟದ ತೊಂದರೆ ಮತ್ತು ಎದೆ ಬಿಗಿತದಂತಹ ಸಮಸ್ಯೆಗಳು ಕಾಣಿಸಬಹುದು. ವಿಶೇಷವಾಗಿ ಅಸ್ತಮಾ, ಅಲರ್ಜಿ ಅಥವಾ ಸೈನಸ್ ಸಮಸ್ಯೆ ಹೊಂದಿರುವವರಲ್ಲಿ ಈ ತೊಂದರೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಹಾಗಾದರೆ ಈ ರೀತಿಯ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕು, ಹೇಗೆ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವೈದ್ಯರು ಹೇಳುವಂತೆ, ಎಸಿಯನ್ನು ನಿಯಮಿತವಾಗಿ ಸ್ವಚ್ಛಗೊಳಿಸದಿದ್ದರೆ ಅದರೊಳಗೆ ಧೂಳು, ಬ್ಯಾಕ್ಟೀರಿಯಾ ಮತ್ತು ಫಂಗಸ್ ಬೆಳೆಯುವ ಸಾಧ್ಯತೆ ಇರುತ್ತದೆ. ಈ ಕಣಗಳು ಗಾಳಿಯ ಮೂಲಕ ದೇಹಕ್ಕೆ ಸೇರಿ ಉಸಿರಾಟದ ಸಮಸ್ಯೆಗಳನ್ನು ಹೆಚ್ಚಿಸಬಹುದು. ಆದ್ದರಿಂದ ಎಸಿ ಫಿಲ್ಟರ್‌ಗಳನ್ನು ಸಮಯಕ್ಕೆ ಸರಿಯಾಗಿ ಕ್ಲೀನ್ ಮಾಡುವುದು ಅತ್ಯಗತ್ಯ.

ಚರ್ಮದ ಮೇಲೂ ಪರಿಣಾಮ ಬೀರಬಹುದು ಎಚ್ಚರ!

ನಿರಂತರ ಎಸಿ ಗಾಳಿಯಲ್ಲಿ ಇರುವುದರಿಂದ ಚರ್ಮದ ಸಹಜ ತೇವಾಂಶ ಕಡಿಮೆಯಾಗಬಹುದು. ಇದರಿಂದ ಚರ್ಮ ಒಣಗುವುದು, ಖಜ್ಜಳಿ, ಉರಿ ಹಾಗೂ ತುಟಿಗಳು ಒಡೆಯುವಂತಹ ಸಮಸ್ಯೆಗಳು ಕಂಡುಬರುತ್ತವೆ. ಸಂವೇದನಾಶೀಲ ಚರ್ಮ ಹೊಂದಿರುವವರಲ್ಲಿ ಈ ಸಮಸ್ಯೆಗಳು ಹೆಚ್ಚು ಗಂಭೀರವಾಗಬಹುದು. ಕೆಲವರಿಗೆ ಮುಖದ ಕಾಂತಿ ಕಡಿಮೆಯಾಗುವುದು ಮತ್ತು ಚರ್ಮ ಬಿರುಕು ಬಿಟ್ಟಂತೆ ಕಾಣಿಸುವುದೂ ಸಂಭವಿಸುತ್ತದೆ.

ಇದನ್ನೂ ಓದಿ: ನಿಮ್ಮ ಮಕ್ಕಳು ಕೂಡ ಎಸಿ ಕೊಠಡಿಯಲ್ಲಿ ಮಲಗುತ್ತಾರಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ತಜ್ಞರು ಸಲಹೆ ನೀಡುವಂತೆ, ಎಸಿಯಲ್ಲಿ ಇರುವವರು ಸಾಕಷ್ಟು ನೀರು ಕುಡಿಯಬೇಕು ಮತ್ತು ಚರ್ಮಕ್ಕೆ ಮಾಯಿಶ್ಚರೈಸರ್ ಬಳಸಬೇಕು. ಎಸಿಯ ತಾಪಮಾನವನ್ನು ಅತಿಯಾಗಿ ಕಡಿಮೆ ಮಾಡದೇ, ಮಧ್ಯೆ ಮಧ್ಯೆ ತಾಜಾ ಗಾಳಿಯಲ್ಲೂ ಸಮಯ ಕಳೆಯುವುದು ಉತ್ತಮ. ಜೊತೆಗೆ ಕೊಠಡಿಯಲ್ಲಿ ಗಾಳಿಯ ಹರಿವು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಉಸಿರಾಟ ಅಥವಾ ಚರ್ಮದ ಸಮಸ್ಯೆಗಳು ನಿರಂತರವಾಗಿ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್