ಪ್ರತಿನಿತ್ಯ ಜೋಳದ ರೊಟ್ಟಿ ತಿಂದರೆ ದೇಹದಲ್ಲಾಗುವ ಬದಲಾವಣೆಗಳೇನು ಗೊತ್ತಾ?

ಪ್ರತಿನಿತ್ಯ ಜೋಳದ ರೊಟ್ಟಿ ತಿನ್ನುವುದರಿಂದ ತೂಕ ಹೆಚ್ಚಾಗುವುದನ್ನು ತಡೆಯುತ್ತದೆ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಜೋಳದಲ್ಲಿರುವ ನಾರಿನಂಶವು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಮಧುಮೇಹ ಇರುವವರಲ್ಲಿ ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ.

ಪ್ರತಿನಿತ್ಯ ಜೋಳದ ರೊಟ್ಟಿ ತಿಂದರೆ ದೇಹದಲ್ಲಾಗುವ ಬದಲಾವಣೆಗಳೇನು ಗೊತ್ತಾ?
Jowar roti
Follow us
ಅಕ್ಷತಾ ವರ್ಕಾಡಿ
|

Updated on: Aug 15, 2024 | 5:26 PM

ಸಿರಿಧಾನ್ಯದಲ್ಲಿ ಹಲವು ಆರೋಗ್ಯಕಾರಿ ಲಾಭಗಳು ಅಡಗಿವೆ. ಅದಕ್ಕಾಗಿಯೇ ಅನೇಕರು ಚಪಾತಿ ಬದಲು ಜೋಳದ ರೊಟ್ಟಿಯನ್ನು ತಿನ್ನುವ ಅಭ್ಯಾಸವನ್ನು ಮಾಡುತ್ತಿದ್ದಾರೆ. ಜೋಳದ ರೊಟ್ಟಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ.ಇದು ತಿನ್ನುವುದು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

ಪ್ರತಿನಿತ್ಯ ಜೋಳದ ರೊಟ್ಟಿ ತಿನ್ನುವುದರಿಂದ ತೂಕ ಹೆಚ್ಚಾಗುವುದನ್ನು ತಡೆಯುತ್ತದೆ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಜೋಳದಲ್ಲಿರುವ ನಾರಿನಂಶವು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದಲ್ಲದೇ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಪ್ರತಿದಿನ ಈ ಸೊಪ್ಪನ್ನು ಸೇವಿಸಿದರೆ ನಿಮಗೆ ಯಾವ ರೋಗವು ಬರುವುದಿಲ್ಲ

ಜೋಳದಲ್ಲಿರುವ ಮೆಗ್ನೀಸಿಯಮ್, ಕಬ್ಬಿಣ, ತಾಮ್ರ, ಕ್ಯಾಲ್ಸಿಯಂ ಮತ್ತು ಸತುವು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮಲಬದ್ಧತೆಯನ್ನು ಹೋಗಲಾಡಿಸುತ್ತದೆ. ಜೋಳದ ರೊಟ್ಟಿ ರಕ್ತಹೀನತೆಯ ಸಮಸ್ಯೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಮೇಲಾಗಿ ಜೋಳದ ರೊಟ್ಟಿ ತಿನ್ನುವುದರಿಂದ ಬಹಳ ನಿಧಾನವಾಗಿ ಜೀರ್ಣವಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಮಧುಮೇಹ ಇರುವವರಲ್ಲಿ ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ