AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯರಲ್ಲಿ ಅವಧಿ ಪೂರ್ವ ಹೆರಿಗೆಗೆ ವಾಯು ಮಾಲಿನ್ಯದ ಹೆಚ್ಚಳವೂ ಕಾರಣವಾಗುತ್ತದೆಯೇ?

ವಾಯು ಮಾಲಿನ್ಯವು ಗರ್ಭಾವಸ್ಥೆಯಲ್ಲಿ ಬೆಳೆಯುತ್ತಿರುವ ಮಗುವಿಗೆ ಅತ್ಯಂತ ಅಪಾಯಕಾರಿ. ಹೌದು, ಇದು ಮಗುವಿನ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಹೊಸ ಅಧ್ಯಯನದಲ್ಲಿ ಬಹಿರಂಗವಾಗಿದೆ. ಅಧ್ಯಯನದ ಪ್ರಕಾರ, ಗಾಳಿಯಲ್ಲಿರುವ ವಿಷವು ಪ್ರಪಂಚಕ್ಕೆ ಬರುವ ಮೊದಲೇ ಮಗುವಿನ ಆರೋಗ್ಯಕ್ಕೆ ಹೇಗೆ ಹಾನಿ ಮಾಡುತ್ತದೆ ಎಂಬುದರ ಬಗ್ಗೆ ವಿವರಿಸಿದೆ. ಹಾಗಾದರೆ ಇದು ಗರ್ಭದಲ್ಲಿರುವ ಮಗುವಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಈ ರೀತಿಯ ಅಪಾಯವನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗರ್ಭಿಣಿಯರಲ್ಲಿ ಅವಧಿ ಪೂರ್ವ ಹೆರಿಗೆಗೆ ವಾಯು ಮಾಲಿನ್ಯದ ಹೆಚ್ಚಳವೂ ಕಾರಣವಾಗುತ್ತದೆಯೇ?
Pollution Risks For Pregnant WomenImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 10, 2026 | 10:11 PM

Share

ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯವು ದೊಡ್ಡ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ವಿಶೇಷವಾಗಿ ಗರ್ಭಿಣಿಯರು (Pregnant Women) ಮತ್ತು ಗರ್ಭದಲ್ಲಿರುವ ಶಿಶುಗಳ ಆರೋಗ್ಯದ ಮೇಲೆ ಇದರ ದುಷ್ಪರಿಣಾಮ ಹೆಚ್ಚಾಗಿ ಕಂಡುಬರಬಹುದು ಎಂದು ಹೊಸ ಅಧ್ಯಯನಗಳು ಹೇಳಿವೆ. ಹೌದು, ದೆಹಲಿಯ ಏಮ್ಸ್ (AIIMS) ನಡೆಸಿದ ಅಧ್ಯಯನದಲ್ಲಿ ವಾಯು ಮಾಲಿನ್ಯದಲ್ಲಿರುವ ಸೂಕ್ಷ್ಮ ಕಣಗಳು ಗರ್ಭದಲ್ಲಿರುವ ಮಗುವಿನ ಬೆಳವಣಿಗೆಯ ಮೇಲೂ ಕೆಟ್ಟ ಪರಿಣಾಮ ಬೀರುತ್ತವೆ ಎಂಬುದು ಬೆಳಕಿಗೆ ಬಂದಿದೆ. ಹಾಗಾದರೆ ಇದು ಗರ್ಭದಲ್ಲಿರುವ ಮಗುವಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಈ ರೀತಿಯ ಅಪಾಯವನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅಧ್ಯಯನದಿಂದ ತಿಳಿದುಬಂದ ಮಾಹಿತಿ ಪ್ರಕಾರ, ಗಾಳಿಯಲ್ಲಿ ಇರುವ PM2.5 ಮತ್ತು PM10 ಮಾಲಿನ್ಯ ಕಣಗಳು ಗರ್ಭನಾಳ (Placenta) ಒಳಗೆ ಪ್ರವೇಶಿಸಿ ಉರಿಯೂತ ಉಂಟುಮಾಡಬಹುದು. ಗರ್ಭನಾಳವು ಮಗುವಿಗೆ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ಪೂರೈಸುವ ಪ್ರಮುಖ ಅಂಗವಾಗಿದೆ. ಇದರ ಕಾರ್ಯಕ್ಷಮತೆ ಕುಂದಿದರೆ ಮಗುವಿನ ಬೆಳವಣಿಗೆಯ ಮೇಲೂ ಪರಿಣಾಮ ಬೀಳುವ ಸಾಧ್ಯತೆ ಇದೆ.

ಗರ್ಭದಲ್ಲಿರುವ ಮಗುವಿಗೆ ಹೇಗೆ ಹಾನಿಯಾಗಬಹುದು?

ತಜ್ಞರ ಪ್ರಕಾರ, ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದ ಗರ್ಭಿಣಿಯರಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಬಹುದು. ಇದರಿಂದ ಮಗುವಿನ ಬೆಳವಣಿಗೆ ನಿಧಾನಗೊಳ್ಳುವುದು, ಕಡಿಮೆ ತೂಕದ ಶಿಶು ಜನಿಸುವುದು ಅಥವಾ ಅವಧಿಗೆ ಮುಂಚೆಯೇ ಹೆರಿಗೆ ಆಗುವ ಸಾಧ್ಯತೆ ಹೆಚ್ಚಾಗಬಹುದು. ಕೆಲವು ಸಂದರ್ಭಗಳಲ್ಲಿ ಮಗುವಿನ ಶ್ವಾಸಕೋಶ ಬೆಳವಣಿಗೆಯ ಮೇಲೂ ಪರಿಣಾಮ ಕಾಣಬಹುದು. ಇದರ ಜೊತೆಗೆ ಗರ್ಭಿಣಿಯರಲ್ಲಿ ರಕ್ತದೊತ್ತಡ ಹೆಚ್ಚಾಗುವುದು ಹಾಗೂ ಉಸಿರಾಟ ಸಮಸ್ಯೆಗಳೂ ಕಾಣಿಸಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಕೆಲ ಅಧ್ಯಯನಗಳು ದೀರ್ಘಕಾಲ ವಾಯು ಮಾಲಿನ್ಯಕ್ಕೆ ಒಳಗಾಗುವ ಗರ್ಭಿಣಿಯ ಮಕ್ಕಳಲ್ಲಿ ಕಲಿಕೆ ಮತ್ತು ಬುದ್ಧಿವಂತಿಕೆಯ ಬೆಳವಣಿಗೆಯ ಮೇಲೂ ಪರಿಣಾಮ ಕಾಣಬಹುದು ಎಂದು ಹೇಳಿವೆ.

ಇದನ್ನೂ ಓದಿ: ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ

ಅಪಾಯವನ್ನು ಕಡಿಮೆ ಮಾಡಲು ಏನು ಮಾಡಬೇಕು?

  • ಗರ್ಭಿಣಿಯರು ಸಾಧ್ಯವಾದಷ್ಟು ಮನೆಯೊಳಗೆ ಇರುವುದಕ್ಕೆ ಪ್ರಯತ್ನಿಸಬೇಕು
  • ಮನೆಯೊಳಗಿನ ಗಾಳಿಯನ್ನು ಶುದ್ಧವಾಗಿಡಲು ಒಳಾಂಗಣ ಸಸಿಗಳನ್ನು ಬೆಳೆಸಬಹುದು
  • ಧೂಮಪಾನ, ಅಗರಬತ್ತಿ ಮತ್ತು ಹೊಗೆ ಉಂಟುಮಾಡುವ ವಸ್ತುಗಳಿಂದ ದೂರವಿರಬೇಕು
  • ಅಡುಗೆ ಮಾಡುವಾಗ ಎಕ್ಸಾಸ್ಟ್ ಫ್ಯಾನ್ ಅಥವಾ ಚಿಮ್ನಿ ಬಳಸುವುದು ಉತ್ತಮ
  • ವೈದ್ಯರ ಸಲಹೆಯಂತೆ ಐರನ್ ಮತ್ತು ಫೋಲಿಕ್ ಆಸಿಡ್ ಮಾತ್ರೆಗಳನ್ನು ನಿಯಮಿತವಾಗಿ ಸೇವಿಸಬೇಕು
  • ಸಾಕಷ್ಟು ನೀರು ಕುಡಿಯುವುದು ಮತ್ತು ಪೌಷ್ಟಿಕ ಆಹಾರ ಸೇವಿಸುವುದು ಮುಖ್ಯ

ವಾಯು ಮಾಲಿನ್ಯವನ್ನು ಸಂಪೂರ್ಣ ತಪ್ಪಿಸಲು ಸಾಧ್ಯವಿಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದರಿಂದ ಗರ್ಭಿಣಿಯರು ಮತ್ತು ಮಗುವಿನ ಆರೋಗ್ಯವನ್ನು ಕೆಲವು ಮಟ್ಟಿಗೆ ರಕ್ಷಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More