Air Pollution: ಗರ್ಭದಲ್ಲಿರುವ ಭ್ರೂಣದ ಮೇಲೂ ವಾಯು ಮಾಲಿನ್ಯ ಅಪಾಯಕಾರಿ ಪರಿಣಾಮವನ್ನು ಬೀರುತ್ತದೆ!

ಹೆಚ್ಚುತ್ತಿರುವ ವಾಯು ಮಾಲಿನ್ಯವು ಗರ್ಭಿಣಿ ಮತ್ತು ಗರ್ಭದಲ್ಲಿರುವ ಭ್ರೂಣದ ಆರೋಗ್ಯದ ಮೇಲೂ ಸಾಕಷ್ಟು ಅಪಾಯಕಾರಿಯಾಗಿದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ದೆಹಲಿನ ಡಾ.ವಂದನಾ ಮಿಶ್ರಾ ಎಚ್ಚರಿಸುತ್ತಾರೆ.

Air Pollution: ಗರ್ಭದಲ್ಲಿರುವ ಭ್ರೂಣದ ಮೇಲೂ ವಾಯು ಮಾಲಿನ್ಯ ಅಪಾಯಕಾರಿ ಪರಿಣಾಮವನ್ನು ಬೀರುತ್ತದೆ!
Air PollutionImage Credit source: NIEHS
Follow us
ಅಕ್ಷತಾ ವರ್ಕಾಡಿ
|

Updated on: Nov 08, 2023 | 3:35 PM

ಬೆಂಗಳೂರಿನಂತಹ ಅಧಿಕ ಜನದಟ್ಟನೆಯಿಂದ ಕೂಡಿದ ಪ್ರದೇಶಗಳಲ್ಲಿ ವಾಯು ಮಾಲಿನ್ಯವೂ ಕೂಡ ಅಪಾಯಕಾರಿ ಮಟ್ಟದಲ್ಲಿಯೇ ಇದೆ. ಹೆಚ್ಚುತ್ತಿರುವ ಈ ಮಾಲಿನ್ಯದಿಂದ ಅಸ್ತಮಾ, ಸಿಒಪಿಡಿ ಮತ್ತು ಹೃದ್ರೋಗಗಳ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿದೆ. ಇದಲ್ಲದೇ ಹೆಚ್ಚುತ್ತಿರುವ ವಾಯು ಮಾಲಿನ್ಯವು ಗರ್ಭಿಣಿ ಮತ್ತು ಗರ್ಭದಲ್ಲಿರುವ ಭ್ರೂಣದ ಆರೋಗ್ಯದ ಮೇಲೂ ಸಾಕಷ್ಟು ಅಪಾಯಕಾರಿಯಾಗಿದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ದೆಹಲಿನ ಡಾ.ವಂದನಾ ಮಿಶ್ರಾ ಎಚ್ಚರಿಸುತ್ತಾರೆ.

ಮಾಲಿನ್ಯದಿಂದ ಗರ್ಭದಲ್ಲಿರುವ ಭ್ರೂಣಕ್ಕೆ ಅಪಾಯ ಹೇಗೆ?

‘ಗರ್ಭಿಣಿಯರು ಮಾಲಿನ್ಯದಿಂದ ಕೂಡಿದ ಗಾಳಿಯನ್ನು ಉಸಿರಾಡಿದಾಗ ಈ ಗಾಳಿಯು ಗರ್ಭದಲ್ಲಿರುವ ಮಗುವಿನ ಸಂಪರ್ಕಕ್ಕೂ ಬರುತ್ತದೆ. ಈ ಕಾರಣದಿಂದಾಗಿ, ಮಗುವಿನ ಶ್ವಾಸಕೋಶದಲ್ಲಿ ಸಮಸ್ಯೆಗಳು ಉಂಟಾಗುವ ಅಪಾಯವಿದೆ. ಇದಲ್ಲದೇ ಮಾಲಿನ್ಯದಿಂದಾಗಿ ಮಗುವಿನ ಬೆಳವಣಿಗೆ ಹಾಗೂ ಉಸಿರಾಟದ ಮೇಲೂ ಪರಿಣಾಮ ಬೀರಬಹುದು. ಇಂತಹ ಸಮಸ್ಯೆಗಳು ಹೆಚ್ಚಾಗಿ ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಮತ್ತು ಗರ್ಭಾವಸ್ಥೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಮಹಿಳೆಯರು ಈ ಸಮಸ್ಯೆಯನ್ನು ಎದುರಿಸುವ ಅಪಾಯ ಹೆಚ್ಚು’ ಎಂದು ತಜ್ಞರಾದ ಡಾ.ವಂದನಾ ಮಿಶ್ರಾ ಸಲಹೆ ನೀಡುತ್ತಾರೆ.

ಆದ್ದರಿಂದ ದೆಹಲಿ, ಬೆಂಗಳೂರಿನಂತಹ ಮಾಲಿನ್ಯ ಹೆಚ್ಚಾಗಿರುವ ಪ್ರದೇಶಗಳಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯವಾಗಿದೆ. ಈಗಾಗಲೇ ಅಸ್ತಮಾ ಅಥವಾ ಇತರ ಉಸಿರಾಟದ ಕಾಯಿಲೆಗಳನ್ನು ಹೊಂದಿದ್ದರೆ, ಗರ್ಭಾವಸ್ಥೆಯಲ್ಲಿ ವೈದ್ಯರೊಂದಿಗೆ ಸಂಪರ್ಕದಲ್ಲಿರುವುದು ಅತ್ಯಂತ ಅಗತ್ಯ. ನಿರ್ಲಕ್ಷ್ಯ ತೋರಿದರೆ ನಿಮ್ಮೊಂದಿಗೆ ನಿಮ್ಮ ಹುಟ್ಟಲಿರುವ ಮಗುವಿನ ಆರೋಗ್ಯಕ್ಕೂ ಅಪಾಯ.

ಇದನ್ನೂ ಓದಿ:  ಉಳಿದಿರುವ ಆಹಾರವನ್ನು ಮತ್ತೆ ಬಿಸಿ ಮಾಡಿ ತಿನ್ನುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಮಾರಣಾಂತಿಕ ‘ಫ್ರೈಡ್ ರೈಸ್ ಸಿಂಡ್ರೋಮ್’ ಬಗ್ಗೆ ತಿಳಿದುಕೊಳ್ಳಿ

ಮಾಲಿನ್ಯದಿಂದ ರಕ್ಷಣೆ ಹೇಗೆ?

  • ಗರ್ಭಿಣಿಯರು ಮನೆಯಿಂದ ಹೊರಬರುವುದನ್ನು ತಪ್ಪಿಸಬೇಕು.
  • ಹೊರಗೆ ಹೋಗುವುದು ಬಹಳ ಮುಖ್ಯವಾದರೆ ಮಾಸ್ಕ್ ಧರಿಸಿ.
  • ಸರಿಯಾದ ಸಮಯಕ್ಕೆ ಪೌಷ್ಟಿಕ ಆಹಾರವನ್ನು ಸೇವಿಸಿ.
  • ದೇಹದಲ್ಲಿ ನೀರಿನ ಕೊರತೆ ಇರಬಾರದು. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ.
  • ಮನೆಯೊಳಗೆ ಧೂಳಿದ್ದರೆ ಇತರರ ಸಹಾಯ ಪಡೆದು ಸ್ವಚ್ಛಗೊಳಿಸಿ.
  • ಮನೆಯಲ್ಲಿ ಯಾರಾದರೂ ಧೂಮಪಾನ ಮಾಡುತ್ತಿದ್ದರೆ, ಅವರ ಸಂಪರ್ಕದಿಂದ ದೂರವಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ