ಬೆಂಗಳೂರಿನಂತಹ ಅಧಿಕ ಜನದಟ್ಟನೆಯಿಂದ ಕೂಡಿದ ಪ್ರದೇಶಗಳಲ್ಲಿ ವಾಯು ಮಾಲಿನ್ಯವೂ ಕೂಡ ಅಪಾಯಕಾರಿ ಮಟ್ಟದಲ್ಲಿಯೇ ಇದೆ. ಹೆಚ್ಚುತ್ತಿರುವ ಈ ಮಾಲಿನ್ಯದಿಂದ ಅಸ್ತಮಾ, ಸಿಒಪಿಡಿ ಮತ್ತು ಹೃದ್ರೋಗಗಳ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿದೆ. ಇದಲ್ಲದೇ ಹೆಚ್ಚುತ್ತಿರುವ ವಾಯು ಮಾಲಿನ್ಯವು ಗರ್ಭಿಣಿ ಮತ್ತು ಗರ್ಭದಲ್ಲಿರುವ ಭ್ರೂಣದ ಆರೋಗ್ಯದ ಮೇಲೂ ಸಾಕಷ್ಟು ಅಪಾಯಕಾರಿಯಾಗಿದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ದೆಹಲಿನ ಡಾ.ವಂದನಾ ಮಿಶ್ರಾ ಎಚ್ಚರಿಸುತ್ತಾರೆ.
‘ಗರ್ಭಿಣಿಯರು ಮಾಲಿನ್ಯದಿಂದ ಕೂಡಿದ ಗಾಳಿಯನ್ನು ಉಸಿರಾಡಿದಾಗ ಈ ಗಾಳಿಯು ಗರ್ಭದಲ್ಲಿರುವ ಮಗುವಿನ ಸಂಪರ್ಕಕ್ಕೂ ಬರುತ್ತದೆ. ಈ ಕಾರಣದಿಂದಾಗಿ, ಮಗುವಿನ ಶ್ವಾಸಕೋಶದಲ್ಲಿ ಸಮಸ್ಯೆಗಳು ಉಂಟಾಗುವ ಅಪಾಯವಿದೆ. ಇದಲ್ಲದೇ ಮಾಲಿನ್ಯದಿಂದಾಗಿ ಮಗುವಿನ ಬೆಳವಣಿಗೆ ಹಾಗೂ ಉಸಿರಾಟದ ಮೇಲೂ ಪರಿಣಾಮ ಬೀರಬಹುದು. ಇಂತಹ ಸಮಸ್ಯೆಗಳು ಹೆಚ್ಚಾಗಿ ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಮತ್ತು ಗರ್ಭಾವಸ್ಥೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಮಹಿಳೆಯರು ಈ ಸಮಸ್ಯೆಯನ್ನು ಎದುರಿಸುವ ಅಪಾಯ ಹೆಚ್ಚು’ ಎಂದು ತಜ್ಞರಾದ ಡಾ.ವಂದನಾ ಮಿಶ್ರಾ ಸಲಹೆ ನೀಡುತ್ತಾರೆ.
ಆದ್ದರಿಂದ ದೆಹಲಿ, ಬೆಂಗಳೂರಿನಂತಹ ಮಾಲಿನ್ಯ ಹೆಚ್ಚಾಗಿರುವ ಪ್ರದೇಶಗಳಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯವಾಗಿದೆ. ಈಗಾಗಲೇ ಅಸ್ತಮಾ ಅಥವಾ ಇತರ ಉಸಿರಾಟದ ಕಾಯಿಲೆಗಳನ್ನು ಹೊಂದಿದ್ದರೆ, ಗರ್ಭಾವಸ್ಥೆಯಲ್ಲಿ ವೈದ್ಯರೊಂದಿಗೆ ಸಂಪರ್ಕದಲ್ಲಿರುವುದು ಅತ್ಯಂತ ಅಗತ್ಯ. ನಿರ್ಲಕ್ಷ್ಯ ತೋರಿದರೆ ನಿಮ್ಮೊಂದಿಗೆ ನಿಮ್ಮ ಹುಟ್ಟಲಿರುವ ಮಗುವಿನ ಆರೋಗ್ಯಕ್ಕೂ ಅಪಾಯ.
ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: