AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Pollution: ಹೊಗೆ, ಧೂಳು, ಮಾಲಿನ್ಯಗಳು ನಿಮ್ಮ ಹೃದ್ರೋಗಗಳ ಹೆಚ್ಚಿನ ಅಪಾಯಕ್ಕೆ ಕಾರಣವಾಗಬಹುದು ಎಚ್ಚರ

ಪ್ರತಿ ದಿನ ನೀವು ಧೂಳು ಮಾಲಿನ್ಯಗಳಿಗೆ ಒಡ್ಡಿಕೊಂಡಿದ್ದರೆ ಇದು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ ಕಾರಣವಾಗಬಹುದು ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ.

Air Pollution: ಹೊಗೆ, ಧೂಳು, ಮಾಲಿನ್ಯಗಳು ನಿಮ್ಮ ಹೃದ್ರೋಗಗಳ ಹೆಚ್ಚಿನ ಅಪಾಯಕ್ಕೆ ಕಾರಣವಾಗಬಹುದು ಎಚ್ಚರ
Air Pollution Image Credit source: Daily Express
TV9 Web
| Updated By: ಅಕ್ಷತಾ ವರ್ಕಾಡಿ|

Updated on: Nov 10, 2022 | 12:16 PM

Share

ನಗರಗಳನ್ನು ಕೇಂದ್ರೀಕರಿಸಿದ ಅಭಿವೃದ್ಧಿಯತ್ತ ಇಂದು ಜಗತ್ತು ಸಾಗುತ್ತಿದ್ದಂತೆ ಧೂಳು, ಹೊಗೆ , ಜನದಟ್ಟನೆ ಹೀಗೆ ಸಾಕಷ್ಟು ಮಾಲಿನ್ಯಕಾರಕಗಳು ಹೆಚ್ಚಾಗುತ್ತಾ ಹೋಗುತ್ತವೆ. ಇದು ನಿಮ್ಮ ಆರೋಗ್ಯದ ಮೇಲೆ ಕಂಟಕವಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಬೆಂಗಳೂರಿನಂತಹ ನಗರಗಳಲ್ಲಿ ಒತ್ತಡದ ಜೀವನ ನಡೆಸುತ್ತಿರುವವರು ನಿಮ್ಮ ಆರೋಗ್ಯದ ಕಡೆ ಗಮನಹರಿಸುವುದು ಅತ್ಯಂತ ಅಗತ್ಯವಾಗಿದೆ.

ಪ್ರತಿ ದಿನ ನೀವು ಧೂಳು ಮಾಲಿನ್ಯಗಳಿಗೆ ಒಡ್ಡಿಕೊಂಡಿದ್ದರೆ ಇದು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ ಕಾರಣವಾಗಬಹುದು ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ.

ಒಂದು ಅಧ್ಯಯನದ ಪ್ರಕಾರ, ವಾಯು ಮಾಲಿನ್ಯಕ್ಕೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಈಗಾಗಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಹೃದಯರಕ್ತನಾಳದ ಅಸ್ವಸ್ಥತೆಗಳು ಹೆಚ್ಚಾಗುವ ಸಾಧ್ಯತೆಗಳಿವೆ ಇದು ನಿಮ್ಮ ಪ್ರಾಣಕ್ಕೆ ಹಾನಿಯಾಗುತ್ತದೆ ಎಂದು ತಿಳಿದು ಬಂದಿದೆ.

ಧೂಳು ಮಾಲಿನ್ಯಗಳ ನಡುವೆ ಜೀವನ ನಡೆಸುತ್ತಿರುವವರಲ್ಲಿ ಹೃದಯದ ರಕ್ತನಾಳಗಳು ಹಾಗೂ ರಕ್ತ ಪರಿಚಲನೆಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ. ಇದು ಹೃದಯ ಸಂಬಂಧಿ ಕಾಯಿಲೆ ಕಾರಣವಾಗುತ್ತದೆ ಎಂದು ಅಮೆರಿಕಾದ ಕಾಲೇಜ್ ಆಫ್ ಕಾರ್ಡಿಯಾಲಜಿ ಜರ್ನಲ್‌ನಲ್ಲಿ ಇತ್ತೀಚೆಗೆ ಪ್ರಕಟವಾದ ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಇದನ್ನು ಓದಿ: ನಿಮಗೆ ಬೆನ್ನು ನೋವಿನ ಸಮಸ್ಯೆಯೇ? ಹಾಗಾದ್ರೆ ನೋವು ದೂರ ಮಾಡುವ ವಿಧಾನಗಳ ಬಗ್ಗೆ ತಿಳಿಯಲೇಬೇಕು

ಈ ಅಧ್ಯಯನವು 62 ವರ್ಷಗಳ ವಯಸ್ಸಿನ 287 ರೋಗಿಗಳನ್ನು ಒಳಗೊಂಡು ಮಾಡಲಾಗಿದೆ. ಇದರಲ್ಲಿ ಭಾಗವಹಿಸಿದವರಲ್ಲಿ 149 ಪುರುಷರು. ಒಟ್ಟು 287 ರೋಗಿಗಳಲ್ಲಿ 161 ಹೃದಯ ಸ್ನಾಯುವಿನ ರಕ್ತಕೊರತೆಯ ಸಮಸ್ಯೆ ಹಾಗೂ ತಡೆರಹಿತ ಪರಿಧಮನಿಯ ಅಥವಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸುತ್ತದೆ.

ಇಂಗ್ಲೀಷ್ ನಲ್ಲಿ ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ:

ಆದ್ದರಿಂದ ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ಎಂಬ ಮಾತಿನಂತೆ ನಿಮ್ಮ ಆರೋಗ್ಯದ ಕುರಿತು ನೀವೇ ಗಮನಹರಿಸಬೇಕಿದೆ. ಆದಷ್ಟು ನಗರ ಪ್ರದೇಶಗಳಲ್ಲಿ ವಾಸಿಸುವವರು ಕಡ್ಡಾಯವಾಗಿ  ಮಾಸ್ಕ್ ಧರಿಸಿ ಹೊರಗಡೆ ಹೋಗುವುದು ಅಗತ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್