Ajwain Seeds: ಓಂ ಕಾಳಿನಲ್ಲಿರುವ ಔಷಧೀಯ ಗುಣಗಳು ಮುಟ್ಟಿನ ನೋವನ್ನು ಕ್ಷಣದಲ್ಲಿ ನಿವಾರಣೆ ಮಾಡುತ್ತೆ

ಸಣ್ಣ ಕಾಯಿಲೆ ಬಂದರೂ ವೈದ್ಯರ ಬಳಿಗೆ ಓಡುವ ನಾವು, ಹೊಟ್ಟೆ ನೋವು, ತಲೆನೋವು ಮತ್ತು ಶೀತದಂತಹ ಸಣ್ಣ ಕಾಯಿಲೆಗಳನ್ನು ಮನೆಯಲ್ಲಿ ಪರಿಹರಿಸಿಕೊಳ್ಳುವುದಿಲ್ಲ. ನಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂಬುದನ್ನು, ನಾವು ಮರೆಯಬಾರದು. ಹಾಗಾದರೆ ಸಣ್ಣ ಪುಟ್ಟ ಕಾಯಿಲೆಗಳನ್ನು ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವುದು ಹೇಗೆ? ಪ್ರಾಥಮಿಕ ಹಂತದಲ್ಲಿ ನೋವು ನಿವಾರಣೆ ಮಾಡಿಕೊಳ್ಳಬಹುದೇ? ಇಲ್ಲಿದೆ ಮಾಹಿತಿ.

Ajwain Seeds: ಓಂ ಕಾಳಿನಲ್ಲಿರುವ ಔಷಧೀಯ ಗುಣಗಳು ಮುಟ್ಟಿನ ನೋವನ್ನು ಕ್ಷಣದಲ್ಲಿ ನಿವಾರಣೆ ಮಾಡುತ್ತೆ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 06, 2024 | 12:40 PM

ಆಧುನಿಕ ಯುಗದಲ್ಲಿ, ಪ್ರತಿಯೊಬ್ಬರೂ ತಮ್ಮ ತಮ್ಮ ಕೆಲಸಗಳಲ್ಲಿ ಮಗ್ನರಾಗಿರುವುದರಿಂದ, ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಅಜಾಗರೂಕತೆ ತೋರುತ್ತಿದ್ದಾರೆ. ಹೊಟ್ಟೆ ತುಂಬಿಸಿಕೊಳ್ಳುವ ಭರದಲ್ಲಿ, ಯಾವುದು ದೇಹಕ್ಕೆ ಒಳ್ಳೆಯದು ಎಂಬುದನ್ನು ಕೂಡ ಯೋಚಿಸದಿರುವುದು ಹಲವಾರು ರೀತಿಯ ಕಾಯಿಲೆಗಳನ್ನು ನಾವೇ ಬರಮಾಡಿಕೊಂಡಂತಾಗಿದೆ. ಈ ರೀತಿಯ ಕೆಟ್ಟ ಅಭ್ಯಾಸಗಳು ದೇಹದ ಶಕ್ತಿಯನ್ನು ಕುಂಟಿಸುವುದರ ಜೊತೆಗೆ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ರೋಗಗಳನ್ನು ಹೆಚ್ಚಿಸುತ್ತಿದೆ. ಸಣ್ಣ ಕಾಯಿಲೆ ಬಂದರೂ ವೈದ್ಯರ ಬಳಿಗೆ ಓಡುವ ನಾವು, ಹೊಟ್ಟೆ ನೋವು, ತಲೆನೋವು ಮತ್ತು ಶೀತದಂತಹ ಸಣ್ಣ ಕಾಯಿಲೆಗಳನ್ನು ಮನೆಯಲ್ಲಿ ಪರಿಹರಿಸಿಕೊಳ್ಳುವುದಿಲ್ಲ. ನಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂಬುದನ್ನು, ನಾವು ಮರೆಯಬಾರದು. ಹಾಗಾದರೆ ಸಣ್ಣ ಪುಟ್ಟ ಕಾಯಿಲೆಗಳನ್ನು ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವುದು ಹೇಗೆ? ಪ್ರಾಥಮಿಕ ಹಂತದಲ್ಲಿ ನೋವು ನಿವಾರಣೆ ಮಾಡಿಕೊಳ್ಳಬಹುದೇ? ಇಲ್ಲಿದೆ ಮಾಹಿತಿ.

ಸಾಮಾನ್ಯವಾಗಿ ಮಹಿಳೆಯರು ಮುಟ್ಟಿನ ನೋವು, ಸೆಳೆತವನ್ನು ಪರಿಹರಿಸಿಕೊಳ್ಳಲು ಮಾತ್ರೆಯ ಮೊರೆ ಹೋಗುತ್ತಾರೆ. ಆದರೆ ಇದರಿಂದ ಅನೇಕ ರೀತಿಯ ಅಡ್ಡಪರಿಣಾಮಗಳು ಉಂಟಾಗಬಹುದು. ಹಾಗಾಗಿ ಮಹಿಳೆಯರು ಈ ಬಗ್ಗೆ ಜಾಗರೂಕರಾಗಿರಬೇಕು. ಈ ಹಂತದಲ್ಲಿ ಓಂ ಕಾಳು ನಿಮಗೆ ಉತ್ತಮ ಆಯುರ್ವೇದ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಒಂದು ಲೋಟ ನೀರಿಗೆ ಅರ್ಧ ಚಮಚ ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ, ನಿಧಾನವಾಗಿ ಕುಡಿದರೆ ಹೊಟ್ಟೆ ನೋವು ಮಾಯವಾಗುತ್ತದೆ. ಇದಲ್ಲದೆ, ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

ಇದನ್ನೂ ಓದಿ: ಮಧುಮೇಹಿಗಳು ಬ್ರೊಕೋಲಿ ಸೇವನೆ ಮಾಡಬಹುದೇ?

ಮಲಬದ್ಧತೆ ಸಮಸ್ಯೆಗೆ ದಿವ್ಯಔಷಧ!

ವಿಶೇಷವಾಗಿ ಓಂ ಕಾಳು ಸೇವಿಸುವುದರಿಂದ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಪಡೆಯಬಹುದು ಜೊತೆಗೆ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರಿಗೆ ಇದು ಅತ್ಯುತ್ತಮ ಔಷಧಿಯಾಗಿದೆ. ಅಲ್ಲದೆ ಮಲಬದ್ಧತೆ ಸಮಸ್ಯೆಯನ್ನು ಸಹ ನಿವಾರಿಸುತ್ತದೆ. ಅತಿಯಾಗಿ ಹೊಟ್ಟೆ ಉಬ್ಬಿದ ಅನುಭವವಾಗುತ್ತಿದ್ದರೆ ಇದರ ನೀರನ್ನು ಕುಡಿಯಿರಿ. ಅಥವಾ ಒಂದು ಚಿಟಿಕೆ ಓಂ ಕಾಳನ್ನು ಬಾಯಿಗೆ ಹಾಕಿಕೊಂಡು ಅದರ ರಸವನ್ನು ಜಗಿದು ನುಂಗುವುದರಿಂದ ಅಜೀರ್ಣತೆಯನ್ನು ಕಡಿಮೆ ಮಾಡುತ್ತದೆ. ಈ ರೀತಿಯಲ್ಲಿ ನೈಸರ್ಗಿಕವಾಗಿ ನಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ