ಮೌತ್ ವಾಶ್ ಬಳಸುತ್ತೀರಾ? ಕ್ಯಾನ್ಸರ್ ಬರಬಹುದು ಎಚ್ಚರ

ಹಲ್ಲುಗಳನ್ನು ಸ್ವಚ್ಛಗೊಳಿಸಲು ಜೊತೆಗೆ ಬಾಯಿಯ ದುರ್ವಾಸನೆಯಿಂದ ಮುಕ್ತಿ ಪಡೆಯಲು ಮೌತ್ ವಾಶ್ ಬಳಸುತ್ತಾರೆ. ಇದು ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂಬುದು ನಮ್ಮ ನಂಬಿಕೆ. ಅದನ್ನೇ ನಾವು ನಂಬಿ ಬಳಸುತ್ತಿದ್ದೇವೆ. ಆದರೆ ಇದು ಒಳ್ಳೆಯದೋ ಅಥವಾ ಕೆಟ್ಟದ್ದೋ? ನೀವು ಎಂದಾದರೂ ಯೋಚಿಸಿದ್ದೀರಾ? ಈ ಬಗ್ಗೆ ತಜ್ಞರು ಹೇಳುವುದೇನು? ಸಂಪೂರ್ಣ ಮಾಹಿತಿ ಇಲ್ಲಿದೆ.

ಮೌತ್ ವಾಶ್ ಬಳಸುತ್ತೀರಾ? ಕ್ಯಾನ್ಸರ್ ಬರಬಹುದು ಎಚ್ಚರ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 13, 2025 | 5:10 PM

ಮೌತ್ ವಾಶ್ ಬಗ್ಗೆ ಎಲ್ಲರಿಗೂ ತಿಳಿದಿರುತ್ತದೆ. ಅನೇಕರು ಇದನ್ನು ದಿನನಿತ್ಯ ಬಳಕೆ ಮಾಡಿದರೆ, ಇನ್ನು ಕೆಲವರು ಇದನ್ನು ಕೆಲವು ಸಂದರ್ಭಗಳಲ್ಲಿ ಮಾತ್ರ ಬಳಸುತ್ತಾರೆ. ಅದರಲ್ಲಿಯೂ ಒಂದು ಕಡೆಯಿಂದ ಇನ್ನೊಂದು ಕಡೆಗೆ ಪ್ರಯಾಣ ಮಾಡುವ ಸಮಯದಲ್ಲಿ ಹಲ್ಲುಗಳನ್ನು ಸ್ವಚ್ಛಗೊಳಿಸಲು ಜೊತೆಗೆ ಬಾಯಿಯ ದುರ್ವಾಸನೆಯಿಂದ ಮುಕ್ತಿ ಪಡೆಯಲು ಇದು ಸುಲಭವಾಗಿದೆ. ಜೊತೆಗೆ ಮೌತ್ ವಾಶ್ ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂಬುದು ನಮ್ಮ ನಂಬಿಕೆ. ಅದನ್ನೇ ನಾವು ನಂಬಿ ಬಳಸುತ್ತಿದ್ದೇವೆ. ಆದರೆ ಇದು ಒಳ್ಳೆಯದೋ ಅಥವಾ ಕೆಟ್ಟದ್ದೋ? ನೀವು ಎಂದಾದರೂ ಯೋಚಿಸಿದ್ದೀರಾ? ಈ ಬಗ್ಗೆ ತಜ್ಞರು ಹೇಳುವುದೇನು? ಸಂಪೂರ್ಣ ಮಾಹಿತಿ ಇಲ್ಲಿದೆ.

ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು

ಇದು ನಮಗೆ ತಿಳಿದಂತೆ ಹಲ್ಲುಗಳಿಗೆ ಒಳ್ಳೆಯದಾದರೂ, ಪ್ರತಿದಿನ ಮೌತ್ ವಾಶ್ ಬಳಸುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾಗಿ ಮೌತ್ ವಾಶ್ ಬಳಕೆಯನ್ನು ಮಿತಿಗೊಳಿಸಿ, ಅಂದರೆ ಪ್ರತಿದಿನ ಬಳಸುವುದನ್ನು ತಪ್ಪಿಸಿ ಎಂದು ಎಚ್ಚರಿಕೆ ನೀಡುತ್ತಾರೆ. ಏಕೆಂದರೆ ಮೌತ್ ವಾಶ್ ನಲ್ಲಿ ಆಲ್ಕೋಹಾಲ್ ಅಂಶವಿರುತ್ತದೆ. ಇದು ನಿಮ್ಮ ಬಾಯಿಯನ್ನು ಒಣಗಿಸುತ್ತದೆ. ಅದಲ್ಲದೆ ದಿನನಿತ್ಯದ ಬಳಕೆಯು ದೇಹದಲ್ಲಿ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಕೆಲವು ಅಧ್ಯಯನಗಳ ಪ್ರಕಾರ, ಮೌತ್ ವಾಶ್ ನ ಬಳಕೆಯು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ದಿನಕ್ಕೆ ಎರಡು ಬಾರಿ ಮೌತ್ ವಾಶ್ ಬಳಸುವವರಲ್ಲಿ ಹತ್ತನೇ ಒಂದು ಭಾಗದಷ್ಟು ಜನರಲ್ಲಿ ಈ ಸಾಧ್ಯತೆ ಕಂಡು ಬಂದಿದೆ.

ಇದನ್ನೂ ಓದಿ: ರೀಲ್ಸ್​ಗೆ ಅಡಿಕ್ಟ್​ ಆಗಿದ್ದೀರಾ? ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು

ಕ್ಯಾನ್ಸರ್ ಗೆ ಕಾರಣವಾಗಬಹುದು

ಮೌತ್ ವಾಶ್ ಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಅದಲ್ಲದೆ ಇದು ಅನೇಕ ರೀತಿಯ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ ಎಂದು ಅಧ್ಯಯನಗಳು ತೋರಿಸಿವೆ. ಪ್ರತಿದಿನ ಅಥವಾ ಅತಿಯಾಗಿ ಮೌತ್ ವಾಶ್ ಬಳಸುವ ಜನರಿಗೆ ಕ್ಯಾನ್ಸರ್ ಅಪಾಯ ಹೆಚ್ಚು ಎಂದು ಕೆಲವು ಅಧ್ಯಯನಗಳಿಂದ ಸಾಬೀತಾಗಿದೆ. ಇದರಲ್ಲಿ ಬಳಕೆಯಾಗುವ ವಸ್ತುಗಳು ಕ್ಯಾನ್ಸರ್ ಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಹಾಗಾಗಿ ಸಾಧ್ಯವಾದಷ್ಟು ಇದನ್ನು ಕಡಿಮೆ ಬಳಸಿ, ಆರೋಗ್ಯವಾಗಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ಶಿವಕುಮಾರ್ ಸ್ಥಿತಿ ನೋಡಿದರೆ ನನ್ನಲ್ಲಿ ಕರುಣೆ ಹುಟ್ಟುತ್ತದೆ: ಆರ್ ಅಶೋಕ
ಶಿವಕುಮಾರ್ ಸ್ಥಿತಿ ನೋಡಿದರೆ ನನ್ನಲ್ಲಿ ಕರುಣೆ ಹುಟ್ಟುತ್ತದೆ: ಆರ್ ಅಶೋಕ
ಸುರ್ಜೆವಾಲಾ ಭೇಟಿ ನಾಯಕರ ಆಂತರಿಕ ಕಾದಾಟವನ್ನು ತಹಬದಿಗೆ ತರುವುದೆ?‘
ಸುರ್ಜೆವಾಲಾ ಭೇಟಿ ನಾಯಕರ ಆಂತರಿಕ ಕಾದಾಟವನ್ನು ತಹಬದಿಗೆ ತರುವುದೆ?‘
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೊಂದಿಗೂ ನನ್ನ ತಿಕ್ಕಾಟವಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೊಂದಿಗೂ ನನ್ನ ತಿಕ್ಕಾಟವಿಲ್ಲ: ಜಾರಕಿಹೊಳಿ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ