Aloe Vera Juice: ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿಯುತ್ತೀರಾ, ಈ ವಿಷಯಗಳನ್ನು ಮರೆಯಬೇಡಿ

ಅಲೋವೆರಾದ ರಸದಲ್ಲಿ ವಿಟಮಿನ್ ಎ, ಸಿ, ಇ, ಬಿ 1, ಬಿ 2, ಬಿ 3, ಬಿ 6, ಬಿ 12 ಸಮೃದ್ಧವಾಗಿದೆ. ಅದರಲ್ಲಿಯೂ ಅಲೋವೆರಾ ಜ್ಯೂಸ್ ಅನ್ನು ಮಾಡಿ ಕುಡಿಯುವುದರಿಂದ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳಿವೆ. ಈ ಪಾನೀಯವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೊತೆಗೆ ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲೋವೆರಾ ರಸದಲ್ಲಿ ಕ್ಯಾಲೊರಿಗಳು ಕಡಿಮೆಯಿದ್ದು, ತೂಕ ಇಳಿಕೆಗೂ ಸಹಕಾರಿಯಾಗಿದೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

Aloe Vera Juice: ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿಯುತ್ತೀರಾ, ಈ ವಿಷಯಗಳನ್ನು ಮರೆಯಬೇಡಿ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 31, 2024 | 5:58 PM

ಅಲೋವೆರಾ ಒಂದು ಅದ್ಭುತ ಗಿಡಮೂಲಿಕೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದು ಒಂದು ರೀತಿಯಲ್ಲಿ ಮಾನವನ ಅಡಿಯಿಂದ ಮುಡಿಯ ವರೆಗೂ ಎಲ್ಲಾ ರೀತಿಯಲ್ಲಿಯೂ ಉಪಯೋಗಕ್ಕೆ ಬರುವಂತಹ ಔಷಧೀಯ ಗುಣಗಳನ್ನು ಹೊಂದಿದೆ. ಈ ಅಲೋವೆರಾದ ರಸದಲ್ಲಿ ವಿಟಮಿನ್ ಎ, ಸಿ, ಇ, ಬಿ 1, ಬಿ 2, ಬಿ 3, ಬಿ 6, ಬಿ 12 ಸಮೃದ್ಧವಾಗಿದೆ. ಅದರಲ್ಲಿಯೂ ಅಲೋವೆರಾ ಜ್ಯೂಸ್ ಅನ್ನು ಮಾಡಿ ಕುಡಿಯುವುದರಿಂದ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳಿವೆ. ಈ ಪಾನೀಯವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೊತೆಗೆ ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲೋವೆರಾ ರಸದಲ್ಲಿ ಕ್ಯಾಲೊರಿಗಳು ಕಡಿಮೆಯಿದ್ದು, ತೂಕ ಇಳಿಕೆಗೂ ಸಹಕಾರಿಯಾಗಿದೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

  • ಅಲೋವೆರಾದಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಜೊತೆಗೆ ಶೀತ ಮತ್ತು ಜ್ವರದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
  • ಅಲೋವೆರಾದಲ್ಲಿರುವ ರಸವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ರಸವನ್ನು ಕುಡಿಯುವುದು ಉತ್ತಮ. ಅಲೋವೆರಾ ಮಧುಮೇಹ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ, ಇದು ನೈಸರ್ಗಿಕವಾಗಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ರಸವನ್ನು ಕುಡಿಯುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಏಕೆಂದರೆ ಇದರಿಂದ ಕೆಲವು ಅಡ್ಡಪರಿಣಾಮಗಳು ಉಂಟಾಗಬಹುದು.
  • ಅಲೋವೆರಾದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ತೇವಗೊಳಿಸುತ್ತವೆ ಮತ್ತು ಮೊಡವೆ ಮತ್ತು ಕಲೆಗಳಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತವೆ. ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ರಸವನ್ನು ಕುಡಿಯುವುದರಿಂದ ನಿಮ್ಮ ಚರ್ಮ ಮೃದುವಾಗಿರುವುದಲ್ಲದೆ ತಾಜಾತನದಿಂದ ಕೂಡಿರುತ್ತದೆ ಜೊತೆಗೆ ಮುಖಕ್ಕೆ ಹೊಳಪನ್ನು ನೀಡುತ್ತದೆ.
  • ಕೆಲವರಿಗೆ ಅಲೋವೆರಾ ರಸವು ಎದೆಯುರಿ ಮತ್ತು ಅತಿಸಾರದಂತಹ ಜೀರ್ಣಕಾರಿ ಸಮಸ್ಯೆಗಳನ್ನು ಉಂಟು ಮಾಡಬಹುದು. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರು ಅಲೋವೆರಾ ರಸವನ್ನು ಕುಡಿಯುವ ಮೊದಲು ತಪ್ಪದೆ ವೈದ್ಯರನ್ನು ಸಂಪರ್ಕಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ