ದೇಹಕ್ಕೆ ಸಂಜೀವಿನಿಯಾಗಿರುವ ಅಮೃತ ಬಳ್ಳಿಯ ಉಪಯೋಗಗಳು ಇಲ್ಲಿವೆ

ಅಮೃತಬಳ್ಳಿಯ ಎಲೆ, ಕಾಂಡ, ಬೇರು ಎಲ್ಲವೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಎಲೆಯನ್ನು ನೀರಿನಲ್ಲಿ ಬೇಯಿಸಿ ಕುಡಿದರೆ ದೇಹಾರೋಗ್ಯಕ್ಕೆ ಬಹಳ ಉತ್ತಮ.

ದೇಹಕ್ಕೆ ಸಂಜೀವಿನಿಯಾಗಿರುವ ಅಮೃತ ಬಳ್ಳಿಯ ಉಪಯೋಗಗಳು ಇಲ್ಲಿವೆ
ಅಮೃತ ಬಳ್ಳಿImage Credit source: NDTV
Follow us
TV9 Web
| Updated By: ವಿವೇಕ ಬಿರಾದಾರ

Updated on: May 28, 2022 | 7:30 AM

ಅಮೃತ ಬಳ್ಳಿ ಹೆಸರಿನ ತಕ್ಕ ಹಾಗೇ ಇದು ಅಮೃತ. ಮಾನವರಿಗೆ ಈ ಅಮೃತ ಬಳ್ಳಿ (Amrutha balli) ಅಮೃತ ಸಮಾನ. ಒಂHealthದು ರೀತಿ ಸಂಜೀವಿನಿ ಇದ್ದ ಹಾಗೆ. ನಮ್ಮ ದೇಹದಲ್ಲಿನ ಸರ್ವ ರೋಗಕ್ಕು ರಾಮಬಾಣ ಅಮೃತ ಬಳ್ಳಿ ಅನ್ನಬಹುದು. ಇದಕ್ಕೆ ಮತ್ತೊಂದು ಹೆಸರು ಗಿಲೋಯಿ (Giloy). ಇದಕ್ಕೆ ನಮ್ಮ ದೇಹದಲ್ಲಿನ ಸರ್ವ ರೋಗಗಳನ್ನು ಗುಣಮುಖ ಮಾಡುವ ಶಕ್ತಿ ಇದೆ. ಇಷ್ಟು ದಿನಗಳ ಕಾಲ ಅಷ್ಟೊಂದು ಪರಿಚಯವಿರದ ಈ ಬಳ್ಳಿ ಈ ಕರೊನಾ ಸಾಂಕ್ರಾಮಿಕ ರೋಗ ವಕ್ಕರಿಸಿದ ನಂತರ ಸರ್ವರಿಗು ಪರಿಚಯವಾಯಿತು. ಇದು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ‘

ಅಮೃತಬಳ್ಳಿಯ ಎಲೆ, ಕಾಂಡ, ಬೇರು ಎಲ್ಲವೂ ಆರೋಗ್ಯಕ್ಕೆ (Health) ಬಹಳ ಒಳ್ಳೆಯದು. ಇದರ ಎಲೆಯನ್ನು ನೀರಿನಲ್ಲಿ ಬೇಯಿಸಿ ಕುಡಿದರೆ ದೇಹಾರೋಗ್ಯಕ್ಕೆ ಬಹಳ ಉತ್ತಮ. ನೀರಿನಲ್ಲಿ ಬೇಯಿಸಿ ಜ್ಯೂಸ್ (Juice) ರೀತಿ ಮಾಡಿ ಕುಡಿಯಬಹುದು. ಮಾಡೋದು ತುಂಬಾ ಸಿಂಪಲ್. ಇದು ಇಮ್ಯೂನಿಟಿ (Immunity) ಬೂಸ್ಟರ್ ಕೂಡಾ. ಕೆಲವರು ಇದರ ಎಲೆಯನ್ನು ಬೇರೆ ಹಣ್ಣಿನ (fruits) ಜೊತೆ ಸೇರಿಸಿ ತಿನ್ನುತ್ತಾರೆ.

ಈ ಅಮೃತ ಹೇಗೆ ನಮ್ಮ ದೇಹದಲ್ಲಿನ ರೋಗಗಳನ್ನು ಗುಣಮುಖ ಮಾಡುತ್ತದೆ ತಿಳಿದುಕೊಳ್ಳೊಣ ಬನ್ನಿ

  1. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅಮೃತ ಬಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಶಕ್ತಿಯ ಕೇಂದ್ರವಾಗಿದ್ದು, ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತದೆ. ನಿಮ್ಮ ಕೋಶಗಳನ್ನು ಆರೋಗ್ಯಕರವಾಗಿರಿಸಿ ರೋಗಗಳನ್ನು ತೊಡೆದು ಹಾಕುತ್ತದೆ. ಇದು ರಕ್ತವನ್ನು ಶುದ್ಧೀಕರಿಸಿ, ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ. ಅಮೃತ ಬಳ್ಳಿಯು ಅಪಾಯಕಾರಿ ಜ್ವರಗಳಾದ ಡೆಂಗ್ಯೂ, ಹಂದಿ ಜ್ವರ, ಮಲೇರಿಯಾದಂತಹ ಹಲವಾರು ಮಾರಣಾಂತಿಕ ಪರಿಸ್ಥಿತಿಗಳ ಚಿಹ್ನೆ ಮತ್ತು ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
  2. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಸಾಕಷ್ಟು ಮಂದಿ ಜೀರ್ಣಕ್ರಿಯೆಯ ಸಮಸ್ಯೆಯನ್ನು ಹೊಂದಿರುತ್ತಾರೆ. ಅಂತವರು ಅಮೃತಬಳ್ಳಿಯನ್ನು ಆಗಾಗ್ಗೆ ಸೇವನೆ ಮಾಡಿದರೇ ಜೀರ್ಣಕ್ರಿಯೆಯನ್ನು ಸುಧಾರಿ ಮತ್ತು ಕರುಳಿಗೆ ಸಂಬಂಧಿತ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತದೆ. ಯಾರೆಲ್ಲಾ ಮಲಬದ್ಧತೆಯಿಂದ ಬಳಲುತ್ತಿರುತ್ತಾರೆಯೋ ಅಂತವರು ಔಷಧಿಗಳ ಬದಲಾಗಿ ಅಮೃತ ಬಳ್ಳಿಯನ್ನು ಸೇವನೆ ಮಾಡಿ. ಅಮೃತ ಬಳ್ಳಿಯ ಎಲೆಗಳನ್ನು ಬೆಲ್ಲದ ಜೊತೆ ಸೇರಿಸಿ ಸೇವನೆ ಮಾಡಿ. ಹೀಗೆ ಮಾಡುವುದರಿಂದ ಮಲಬದ್ಧತೆಯ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು.
  3. ಮಧುಮೇಹಕ್ಕೆ ಅಮೃತ ಬಳ್ಳಿ ಅಮೃತ ಬಳ್ಳಿಯು ಮಧುಮೇಹಕ್ಕೆ ಅತ್ಯುತ್ತಮವಾಗಿ ಚಿಕಿತ್ಸೆ ನೀಡುತ್ತದೆ. ಇದರಲ್ಲಿರುವ ಗುಣಗಳು ಹೆಚ್ಚಿನ ಮಟ್ಟದ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಮಧುಮೇಹ ಹೊಂದಿರುವವರು ಆಗಾಗ್ಗೆ ಅಮೃತ ಬಳ್ಳಿಯನ್ನು ಸೇವನೆ ಮಾಡುವುದು ಅಥವಾ ಜ್ಯೂಸ್‌ ಆಗಿ ಸೇವನೆ ಮಾಡುವುದು ಒಳ್ಳೆಯದು. ವಾಸ್ತವವಾಗಿ, ಮಧುಮೇಹವನ್ನು ಉತ್ತಮವಾಗಿ ನಿರ್ವಹಿಸಲು ಸಹಾಯ ಮಾಡುವ ದೀರ್ಘಾವಧಿಯ ಸೆಲ್ಯುಲಾರ್‌ ಇನ್ಸುಲಿನ್‌ ಸೂಕ್ಷ್ಮತೆಯನ್ನು ಅಮೃತ ಬಳ್ಳಿಯಲ್ಲಿರುವ ಅಂಶಗಳು ಸುಧಾರಿಸುತ್ತದೆ.
  4. ಯಕೃತ್ ಸಮಸ್ಯೆ ನಿವಾರಣೆ ಯಕೃತ್ತಿಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಅಮೃತ ಬಳ್ಳಿ ಗುಣಪಡಿಸುವುದು. ಹೊಟ್ಟೆ ಉಬ್ಬರ, ಹೊಟ್ಟೆ ಕಿವುಚಿದಂತಾಗುವುದು, ಹೊಟ್ಟೆ ಉರಿಯಂತಹ ಸಮಸ್ಯೆಗಳನ್ನು ಬಹುಬೇಗ ನಿವಾರಣೆ ಮಾಡುವುದು.
  5. ದೃಷ್ಟಿ ದೋಷ ನಿವಾರಣೆ ದೃಷ್ಟಿ ದೋಷ ಅಥವಾ ದೃಷ್ಟಿ ಮಾಂದ್ಯ ಸಮಸ್ಯೆಗಳಿಗೆ ಅಮೃತ ಬಳ್ಳಿ ಅತ್ಯುತ್ತಮ ಚಿಕಿತ್ಸೆ ನೀಡುವುದು. ಚಿಕ್ಕ ಮಕ್ಕಳಲ್ಲಿ ದೃಷ್ಟಿ ದೋಷ ಇರುವವರು ಈ ಔಷಧವನ್ನು ಸೇವಿಸುವುದಿಂದ ದೃಷ್ಟಿ ದೋಷ ಬಹುಬೇಗ ನಿವಾರಣೆಯಾಗುವುದು.
  6. ಕೂದಲಿನ ಆರೋಗ್ಯಕ್ಕೆ ಅಮೃತ ಬಳ್ಳಿಯ ಚಪ್ಪರದ ಕೆಳಗೆ ನಿತ್ಯವೂ ಸ್ವಲ್ಪ ಹೊತ್ತು ಕುಳಿತುಕೊಂಡರೂ ಸಾಕು ತಲೆಕೂದಲಿಗೆ ಸಂಬಂಧಿಸಿದ ಸಮಸ್ಯೆ ನಿವಾರಣೆಯಾಗುವುದು. ಜೊತೆಗೆ ಕೂದಲು ಸೊಂಪಾಗಿ ಬೆಳೆಯುವುದು. ಅಮೃತ ಬಳ್ಳಿಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ಕೂದಲ ಸಮಸ್ಯೆ ನಿವಾರಿಸಿಕೊಳ್ಳಬಹುದು.
  7. ತೂಕ ಕಡಿಮೆ ಮಾಡಿಕೊಳ್ಳಲು ಅಮೃತ ಬಳ್ಳಿ ಕೇವಲ ಆರೋಗ್ಯದ ಸಮಸ್ಯೆ ನಿವಾರಣೆಗೆ ಮಾತ್ರವಲ್ಲ ತೂಕ ಇಳಿಕೆ ಮಾಡಿಕೊಳ್ಳಬೇಕೆ ಎಂದು ಬಯಸುವವರಿಗೆ ಅಮೃತಬಳ್ಳಿ ಸಾಕಷ್ಟು ರೀತಿಯಲ್ಲಿ ಪ್ರಯೋಜನಕಾರಿ.
  8. ಹೃದಯದ ಆರೋಗ್ಯಕ್ಕೆ ಸಹಕಾರಿ ಹೃದಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಅಮೃತ ಬಳ್ಳಿ ನಿವಾರಿಸುವುದು. ಅನಿರೀಕ್ಷಿತವಾಗಿ ಹೆಚ್ಚುವ ಹೃದಯ ಬಡಿತ ಹಾಗೂ ಅನಿರೀಕ್ಷಿತವಾಗಿ ಕಡಿಮೆಯಾಗುವ ಹೃದಯ ಬಡಿತದ ಸಮಸ್ಯೆಗಳಿಗೆ ಸೂಕ್ತ ಆರೈಕೆ ಮಾಡುವುದು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ