Anaemia in Men: ಪುರುಷರಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಲು ಕಾರಣವೇನು? ಇಲ್ಲಿದೆ ಸರಳ ಸಲಹೆ

ರಕ್ತಹೀನತೆ ಇದ್ದಾಗ ಹಲವಾರು ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ರಕ್ತ ಸಮತೋಲನದಲ್ಲಿ ಇದ್ದಾಗ ಮಾತ್ರ ಪ್ರತಿರೋಧಕ ಶಕ್ತಿಯು ಸರಿಯಾಗಿ ಕೆಲಸ ಮಾಡುವುದು. ಈ ಸಮಸ್ಯೆ ಮಹಿಳೆಯರು ಹಾಗೂ ಮಕ್ಕಳಲ್ಲಿ ಮಾತ್ರವಲ್ಲ ಪುರುಷರಲ್ಲಿಯೂ ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿವಾರಣೆ ಮಾಡಲು ಹಲವಾರು ರೀತಿಯ ಔಷಧಿ, ಮಾತ್ರೆಗಳು ಲಭ್ಯವಿದ್ದರೂ ಪುರುಷರಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಕೆಲವು ಪರಿಣಾಮಕಾರಿ ಸಲಹೆಗಳು ಇಲ್ಲಿವೆ.

Anaemia in Men: ಪುರುಷರಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಲು ಕಾರಣವೇನು? ಇಲ್ಲಿದೆ ಸರಳ ಸಲಹೆ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 27, 2024 | 3:57 PM

ದೇಹದಲ್ಲಿ ರಕ್ತಹೀನತೆ ಇದ್ದಾಗ ಹಲವಾರು ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ರಕ್ತ ಸಮತೋಲನದಲ್ಲಿ ಇದ್ದಾಗ ಮಾತ್ರ ಪ್ರತಿರೋಧಕ ಶಕ್ತಿಯು ಸರಿಯಾಗಿ ಕೆಲಸ ಮಾಡುವುದು. ಈ ಸಮಸ್ಯೆ ಮಹಿಳೆಯರು ಹಾಗೂ ಮಕ್ಕಳಲ್ಲಿ ಮಾತ್ರವಲ್ಲ ಪುರುಷರಲ್ಲಿಯೂ ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿವಾರಣೆ ಮಾಡಲು ಹಲವಾರು ರೀತಿಯ ಔಷಧಿ, ಮಾತ್ರೆಗಳು ಲಭ್ಯವಿದ್ದರೂ ಪುರುಷರಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಕೆಲವು ಪರಿಣಾಮಕಾರಿ ಸಲಹೆಗಳು ಇಲ್ಲಿವೆ.

ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವುದು ಹೇಗೆ?

ಹಿಮೋಗ್ಲೋಬಿನ್ ಅಂಶ ಕಡಿಮೆ ಇರುವವರು, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕಬ್ಬಿಣಾಂಶ ಹಾಗೂ ವಿಟಮಿನ್ಸ್ ಅಂಶ ಹೇರಳವಾಗಿ ಕಂಡು ಬರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಕಡಿಮೆ ಹಿಮೋಗ್ಲೋಬಿನ್ ಮಟ್ಟವು ಆಯಾಸ, ಉಸಿರಾಟದ ತೊಂದರೆ ಮತ್ತು ತಲೆತಿರುಗುವಿಕೆಯಂತಹ ರೋಗಲಕ್ಷಣಗಳಿಗೆ ಕಾರಣವಾಗಬಹುದು. ರಕ್ತಹೀನತೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ಹಿಮೋಗ್ಲೋಬಿನ್ ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ. ಇದಕ್ಕೆ ಪೂರಕವಾಗಿ ಡಾ. ಸಿಲ್ಕಿ ಜೈನ್ ಅವರು ಪುರುಷರಲ್ಲಿ ರಕ್ತಹೀನತೆ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಕೆಲವು ಮಾರ್ಗಗಳನ್ನು ಹಂಚಿಕೊಂಡಿದ್ದಾರೆ.

ಆಹಾರ ಬದಲಾವಣೆಗಳು

ಹಿಮೋಗ್ಲೋಬಿನ್ ಮಟ್ಟವನ್ನು ಸಾಮಾನ್ಯ ಸ್ಥಿತಿಗೆ ತರಲು ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿವೆ.

ಕಬ್ಬಿಣಾಂಶ ಭರಿತ ಆಹಾರಗಳು: ಕಬ್ಬಿಣದ ಕೊರತೆಯು ಪುರುಷರಲ್ಲಿ ರಕ್ತಹೀನತೆಗೆ ಪ್ರಮುಖ ಕಾರಣವಾಗಿದ್ದು, ಕೆಂಪು ಮಾಂಸ ಮತ್ತು ಕೋಳಿ, ಮೀನು, ಸೊಪ್ಪು, ದ್ವಿದಳ ಧಾನ್ಯಗಳು, ಕುಂಬಳಕಾಯಿ ಮತ್ತು ಸೂರ್ಯಕಾಂತಿ ಬೀಜಗಳು, ಬಾದಾಮಿಗಳು ಯೋಗ್ಯ ಪ್ರಮಾಣದಲ್ಲಿ ಕಬ್ಬಿಣಾಂಶಗಳನ್ನು ಒದಗಿಸುತ್ತವೆ.

ವಿಟಮಿನ್ ಸಿ ಸಮೃದ್ಧ ಆಹಾರಗಳು: ರಕ್ತಹೀನತೆ ಹೊಂದಿರುವ ವ್ಯಕ್ತಿಗೆ ವಿಟಮಿನ್ ಸಿ ಯ ಅವಶ್ಯಕತೆ ಇರುತ್ತದೆ ಇದು ಕಬ್ಬಿಣಾಂಶವನ್ನು ಹೀರಿಕೊಳ್ಳುವುದನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗಾಗಿ, ಸಿಟ್ರಸ್ ಹಣ್ಣುಗಳು, ಬೆರ್ರಿಗಳು, ತರಕಾರಿ, ಮೊಳಕೆ ಕಾಳುಗಳು ವಿಟಮಿನ್ ಸಿ ಯ ಅತ್ಯುತ್ತಮ ಮೂಲಗಳಾಗಿವೆ.

ಫೋಲೇಟ್ ಮತ್ತು ವಿಟಮಿನ್ ಬಿ 12: ವಿಟಮಿನ್ ಬಿ 9 ಎಂದೂ ಕರೆಯಲ್ಪಡುವ ಫೋಲೇಟ್, ಆರೋಗ್ಯಕರ ಕೆಂಪು ರಕ್ತ ಕಣಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ, ಇದು ಹಿಮೋಗ್ಲೋಬಿನ್ ಮಟ್ಟವನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ. ಹಾಗಾಗಿ, ಮೊಟ್ಟೆ ಮತ್ತು ಡೈರಿ ಉತ್ಪನ್ನಗಳಾದ ಹಾಲು, ಚೀಸ್ ಮತ್ತು ಮೊಸರು ವಿಟಮಿನ್ ಬಿ 12 ಅನ್ನು ಒದಗಿಸುತ್ತವೆ. ಧಾನ್ಯಗಳು, ಹಾಲಿನ ಪರ್ಯಾಯಗಳು ಹೆಚ್ಚಾಗಿ ವಿಟಮಿನ್ ಬಿ 12 ಮತ್ತು ಫೋಲೇಟ್ ಅನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: ಮಲಗಿದ್ದಲೇ ನಿಮಗೆ ಗೊತ್ತಿಲ್ಲದೆ ಮೂತ್ರ ವಿಸರ್ಜನೆ ಮಾಡುವ ಅಭ್ಯಾಸ ಇದ್ಯಾ? ಈ ಸಮಸ್ಯೆಯಾಗಿರಬಹುದು

ಆಹಾರದ ಜೊತೆಗೆ ಜೀವನಶೈಲಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡರೆ ಪುರುಷರಲ್ಲಿ ಕಂಡುಬರುವ ರಕ್ತಹೀನತೆಯನ್ನು ಸಮಸ್ಯೆಯನ್ನು ನಿವಾರಿಸಬಹುದು.

ನಿಯಮಿತ ವ್ಯಾಯಾಮ: ವ್ಯಾಯಾಮವು ರಕ್ತಪರಿಚಲನೆ ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ವಾಕಿಂಗ್, ಜಾಗಿಂಗ್, ಈಜು ಮತ್ತು ಸೈಕ್ಲಿಂಗ್ ನಂತಹ ಚಟುವಟಿಕೆಗಳು ಪ್ರಯೋಜನಕಾರಿಯಾಗಿದೆ.

ಮದ್ಯಪಾನ ಮತ್ತು ಧೂಮಪಾನವನ್ನು ತಪ್ಪಿಸಿ: ಅತಿಯಾದ ಆಲ್ಕೋಹಾಲ್ ಸೇವನೆಯು ಪೋಷಕಾಂಶಗಳನ್ನು ಹೀರಿಕೊಳ್ಳುವ ಮತ್ತು ಹಿಮೋಗ್ಲೋಬಿನ್ ಉತ್ಪಾದಿಸುವ ದೇಹದ ಸಾಮರ್ಥ್ಯಕ್ಕೆ ಅಡ್ಡಿಪಡಿಸುತ್ತದೆ. ರಕ್ತಹೀನತೆಯ ರೋಗಲಕ್ಷಣಗಳನ್ನು ಹೆಚ್ಚಿಸುತ್ತದೆ.

ರಕ್ತಹೀನತೆಯನ್ನು ತಡೆಗಟ್ಟಲು ಪುರುಷರಿಗೆ ಆರೋಗ್ಯಕರ ಹಿಮೋಗ್ಲೋಬಿನ್ ಮಟ್ಟವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಕಬ್ಬಿಣಾಂಶ ಭರಿತ ಆಹಾರಗಳು, ವಿಟಮಿನ್ ಸಿ ಮತ್ತು ಇತರ ಅಗತ್ಯ ಪೋಷಕಾಂಶಗಳನ್ನು ತಮ್ಮ ಆಹಾರದಲ್ಲಿ ಸೇರಿಸುವ ಮೂಲಕ, ಪುರುಷರು ತಮ್ಮ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು. ನಿಯಮಿತ ವ್ಯಾಯಾಮ, ಹಾನಿಕಾರಕ ಅಭ್ಯಾಸಗಳನ್ನು ತಪ್ಪಿಸುವುದು ಸಹ ನಿರ್ಣಾಯಕವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು