ಅಂಜೂರ ಹಣ್ಣು (ಸಂಗ್ರಹ ಚಿತ್ರ)
ಅಂಜೂರ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಈ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ನೀವು ಕೂಡ ಪ್ರತಿದಿನ ಅಂಜೂರದ ಹಣ್ಣುಗಳನ್ನು ಸೇವಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಹಸಿ ಅಂಜೂರದ (Anjeer) ಜೊತೆಗೆ ಒಣಗಿದ ಅಂಜೂರದ ಹಣ್ಣುಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೂಕ ಇಳಿಸಿಕೊಳ್ಳುವುದರಿಂದ ಇತರೆ ಹಲವು ಸಮಸ್ಯೆಗಳಿಗೆ ಅಂಜೂರವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಆಗುವ ಲಾಭಗಳೇನು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ವೈದ್ಯಕೀಯ ತಜ್ಞರ ಪ್ರಕಾರ ಅಂಜೂರದಲ್ಲಿ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಅಂಜೂರದಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಯೋಜನಕಾರಿ ಖನಿಜಗಳಿವೆ. ಅಂಜೂರವು ಫೈಬರ್, ಪ್ರೋಟೀನ್, ಆಂಟಿ-ಆಕ್ಸಿಡೆಂಟ್ ಮತ್ತು ವಿಟಮಿನ್‌ಗಳ ಉತ್ತಮ ಮೂಲವಾಗಿದೆ.
ಪ್ರಯೋಜನಗಳು:
- ಅಂಜೂರದಲ್ಲಿ ಕೊಲೆಸ್ಟ್ರಾಲ್ನ್ನು ನಿಯಂತ್ರಿಸಲು ಉಪಯುಕ್ತವಾಗಿವೆ. ಅಂಜೂರದಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
- ಅಂಜೂರದಲ್ಲಿ ಕ್ಯಾಲ್ಸಿಯಂ ಕೂಡ ಸಮೃದ್ಧವಾಗಿದೆ. ನಿಮ್ಮಲ್ಲಿ ಕ್ಯಾಲ್ಸಿಯಂ ಕೊರತೆಯಿದ್ದರೆ ಅಥವಾ ದುರ್ಬಲ ಮೂಳೆಗಳನ್ನು ಹೊಂದಿದ್ದರೆ, ಅಂಜೂರದ ಹಣ್ಣನ್ನು ಹಾಲಿನೊಂದಿಗೆ ಪ್ರತಿದಿನ ಸೇವಿಸಿ.
- ಅಂಜೂರದಲ್ಲಿ ಕಬ್ಬಿಣಾಂಶ ಹೇರಳವಾಗಿದೆ. ಇದನ್ನು ತಿನ್ನುವುದರಿಂದ ದೇಹದಲ್ಲಿ ಕಬ್ಬಿಣಾಂಶದ ಕೊರತೆ ನಿವಾರಣೆಯಾಗುತ್ತದೆ. ಕಬ್ಬಿಣದ ಅಂಶವು ಸಮೃದ್ಧವಾಗಿರುವುದರಿಂದ ರಕ್ತಹೀನತೆಯಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
- ಇದರಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಷಿಯಂನಂತಹ ಖನಿಜಗಳು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯವನ್ನು ಬಲಪಡಿಸುತ್ತದೆ.
- ಇದು ಒಮೆಗಾ -3 ಕೊಬ್ಬಿನಾಮ್ಲಗಳನ್ನು ಸಹ ಒಳಗೊಂಡಿದೆ. ಇದು ಪರಿಧಮನಿಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ.
- ಅಂಜೂರವು ದೇಹದಲ್ಲಿನ ಆಮ್ಲವನ್ನು ನಿಯಂತ್ರಿಸುತ್ತದೆ. ಇದರ ಸೇವಿಸುವುದರಿಂದ ಗ್ಯಾಸ್, ಅಸಿಡಿಟಿ ಮತ್ತು ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳು ಗುಣವಾಗುತ್ತದೆ.
ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.