ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡಬಹುದೇ? ತಜ್ಞರು ಹೇಳುವುದೇನು?

ಇತ್ತೀಚಿನ ದಿನಗಳಲ್ಲಿ, ಆಂಟಿಬಯೋಟಿಕ್ ಔಷಧಿಗಳ ಬಳಕೆ ತುಂಬಾ ಹೆಚ್ಚಾಗಿದೆ. ಆದರೆ ಅನೇಕರು ಅವುಗಳನ್ನು ಅಗತ್ಯವಿಲ್ಲದೆ ಅಥವಾ ವೈದ್ಯರ ಸಲಹೆಯಿಲ್ಲದೆ ತೆಗೆದುಕೊಳ್ಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಆಂಟಿಬಯೋಟಿಕ್ ಅತಿಯಾದ ಬಳಕೆಯು ಕರುಳಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಆಂಟಿಬಯೋಟಿಕ್‌ಗಳು ಕರುಳಿನ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ, ಈ ರೀತಿ ಸಮಸ್ಯೆಗಳನ್ನು ತಡೆಯಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡಬಹುದೇ? ತಜ್ಞರು ಹೇಳುವುದೇನು?
Antibiotics And Gut Health
Image Credit source: Getty Images

Updated on: Jun 05, 2026 | 9:06 PM

ಇತ್ತೀಚಿನ ದಿನಗಳಲ್ಲಿ ಆಂಟಿಬಯೋಟಿಕ್ ಔಷಧಿಗಳ ಬಳಕೆ ಬಹಳ ಹೆಚ್ಚಾಗಿದೆ. ಜ್ವರ, ಗಂಟಲು ನೋವು, ಸೋಂಕುಗಳಂತಹ ಸಣ್ಣ ಸಮಸ್ಯೆಗಳಿಗೂ ಕೆಲವರು ವೈದ್ಯರ ಸಲಹೆಯಿಲ್ಲದೆ ಆಂಟಿಬಯೋಟಿಕ್ (Antibiotics) ತೆಗೆದುಕೊಳ್ಳುತ್ತಾರೆ. ಆದರೆ, ಈ ಔಷಧಿಗಳನ್ನು ಅತಿಯಾಗಿ ಅಥವಾ ಸರಿಯಾದ ರೀತಿಯಲ್ಲಿ ಬಳಸದಿರುವುದು ಕರುಳಿನ ಆರೋಗ್ಯದ (Gut Health) ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆಂಟಿಬಯೋಟಿಕ್‌ಗಳು ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕುಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಸರಿಯಾದ ರೀತಿಯಲ್ಲಿ ವೈದ್ಯರ ಸಲಹೆಯಂತೆ ಬಳಸಿದರೆ ಅವು ಪರಿಣಾಮಕಾರಿ ಔಷಧಿಗಳಾಗಿವೆ. ಆದರೆ, ಅಗತ್ಯವಿಲ್ಲದೇ ಅಥವಾ ನಿರಂತರವಾಗಿ ಆಂಟಿಬಯೋಟಿಕ್ ಸೇವಿಸುವುದರಿಂದ ದೇಹದಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳ ಮೇಲೂ ಪರಿಣಾಮ ಬೀಳಬಹುದು. ಹಾಗಾದರೆ ಆಂಟಿಬಯೋಟಿಕ್‌ಗಳು ಕರುಳಿನ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ, ಈ ರೀತಿ ಸಮಸ್ಯೆಗಳನ್ನು ತಡೆಯಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಮ್ಮ ಕರುಳಿನಲ್ಲಿ ಲಕ್ಷಾಂತರ ಒಳ್ಳೆಯ ಮತ್ತು ಕೆಟ್ಟ ಬ್ಯಾಕ್ಟೀರಿಯಾಗಳು ಇರುತ್ತವೆ. ಇವು ಆಹಾರ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಮತ್ತು ದೇಹದ ಸಾಮಾನ್ಯ ಕಾರ್ಯಗಳಿಗೆ ಸಹಾಯ ಮಾಡುತ್ತವೆ. ಆಂಟಿಬಯೋಟಿಕ್‌ಗಳ ಅತಿಯಾದ ಬಳಕೆ ಈ ಬ್ಯಾಕ್ಟೀರಿಯಾಗಳ ಸಮತೋಲನವನ್ನು ಹಾಳುಮಾಡಬಹುದು. ಇದನ್ನು “ಇಂಟೆಸ್ಟೈನಲ್ ಡಿಸ್ಬಯೋಸಿಸ್” ಎಂದು ಕರೆಯಲಾಗುತ್ತದೆ.

ಆಂಟಿಬಯೋಟಿಕ್‌ಗಳು ಕರುಳಿನ ಮೇಲೆ ಹೇಗೆ ಪರಿಣಾಮ ಬೀರುತ್ತವೆ?

ತಜ್ಞರ ಪ್ರಕಾರ, ಆಂಟಿಬಯೋಟಿಕ್‌ಗಳ ಕೆಲಸ ಸೋಂಕು ಉಂಟುಮಾಡುವ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವುದಾಗಿದೆ. ಆದರೆ ಕೆಲವು ಸಂದರ್ಭಗಳಲ್ಲಿ ಇವು ಒಳ್ಳೆಯ ಬ್ಯಾಕ್ಟೀರಿಯಾಗಳನ್ನೂ ಹಾನಿಗೊಳಿಸಬಹುದು. ಇದರಿಂದ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗಿ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್, ಅತಿಸಾರ, ಮಲಬದ್ಧತೆ ಮತ್ತು ಹೊಟ್ಟೆ ಅಸಹಜತೆ ಕಾಣಿಸಬಹುದು. ಪ್ರತಿ ವ್ಯಕ್ತಿಯ ದೇಹದ ಪ್ರತಿಕ್ರಿಯೆ ವಿಭಿನ್ನವಾಗಿರುತ್ತದೆ. ಕೆಲವರಿಗೆ ಸಣ್ಣ ಪ್ರಮಾಣದಲ್ಲಿಯೇ ಸಮಸ್ಯೆಗಳು ಕಾಣಿಸಬಹುದು. ಆದ್ದರಿಂದ ವೈದ್ಯರ ಸಲಹೆಯಿಲ್ಲದೆ ಆಂಟಿಬಯೋಟಿಕ್ ಸೇವನೆ ಮಾಡಬಾರದು ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: ಕೆಂಪು ಅಥವಾ ಹಸಿರು ಸೇಬು ಕರುಳಿನ ಆರೋಗ್ಯಕ್ಕೆ ಯಾವುದು ಒಳ್ಳೆಯದು?

ಯಾವ ಲಕ್ಷಣಗಳು ಕಾಣಿಸಬಹುದು?

  • ಹೊಟ್ಟೆ ಉಬ್ಬರ
  • ಗ್ಯಾಸ್ಟ್ರಿಕ್ ಸಮಸ್ಯೆ
  • ಅತಿಸಾರ ಅಥವಾ ಮಲಬದ್ಧತೆ
  • ಹೊಟ್ಟೆ ನೋವು
  • ಆಹಾರ ಜೀರ್ಣವಾಗದಿರುವುದು

ಈ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಯಾವ ರೀತಿ ಮುನ್ನೆಚ್ಚರಿಕೆ ಅಗತ್ಯ?

ಆಂಟಿಬಯೋಟಿಕ್ ಔಷಧಿಗಳನ್ನು ವೈದ್ಯರ ಸಲಹೆಯಂತೆ ಮಾತ್ರ ತೆಗೆದುಕೊಳ್ಳಬೇಕು. ಔಷಧಿಯ ಪೂರ್ಣ ಕೋರ್ಸ್ ಅನ್ನು ಮಧ್ಯದಲ್ಲಿ ನಿಲ್ಲಿಸಬಾರದು. ಜೊತೆಗೆ ಸಮತೋಲನ ಆಹಾರ ಸೇವನೆ, ಹೆಚ್ಚು ನೀರು ಕುಡಿಯುವುದು ಮತ್ತು ಜೀರ್ಣಕ್ರಿಯೆಗೆ ಸಹಾಯಕವಾಗುವ ಆಹಾರಗಳನ್ನು ಸೇವಿಸುವುದು ಉತ್ತಮ. ಯಾವುದೇ ಅಸಾಮಾನ್ಯ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಆರೋಗ್ಯದ ದೃಷ್ಟಿಯಿಂದ ಅಗತ್ಯವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us