AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಪ್ಪಳ ತಿನ್ನುವುದರಿಂದ ನಿಮ್ಮ ಆರೋಗ್ಯ ಚೆನ್ನಾಗಿರುತ್ತೆ

ಹಪ್ಪಳದಲ್ಲಿಯೂ ಹಲವು ರೀತಿಯ ಆರೋಗ್ಯ ಪ್ರಯೋಜನಗಳಿವೆ. ಇದನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಅನೇಕ ರೀತಿಯ ಲಾಭಗಳಿವೆ. ಇದರಲ್ಲಿ ಫೈಬರ್ ಅಂಶ ಅಧಿಕವಾಗಿರುತ್ತದೆ. ಜೊತೆಗೆ ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಹಪ್ಪಳಗಳಲ್ಲಿ ಕಾರ್ಬೋಹೈಡ್ರೇಟ್ ಗಳು ಸಮೃದ್ಧವಾಗಿದ್ದು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತವೆ. ಆರೋಗ್ಯ ತಜ್ಞರ ಪ್ರಕಾರ, ಹಪ್ಪಳಗಳಲ್ಲಿ ಪ್ರೋಟೀನ್ಗಳು, ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ ಹಾಗಾಗಿ ಇದನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

Health Tips: ಹಪ್ಪಳ ತಿನ್ನುವುದರಿಂದ ನಿಮ್ಮ ಆರೋಗ್ಯ ಚೆನ್ನಾಗಿರುತ್ತೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 25, 2024 | 3:41 PM

Share

ಊಟಕ್ಕೆ ಉಪ್ಪಿನಕಾಯಿ ಹೇಗೋ ಅದೇ ರೀತಿ ಹಪ್ಪಳವೂ ಹಾಗೆಯೇ. ಇದನ್ನು ಪ್ರತಿಯೊಬ್ಬರೂ ತಿನ್ನಲು ಇಷ್ಟಪಡುತ್ತಾರೆ. ಆದರೆ ನಿಮಗೆ ಗೊತ್ತೆ ಹಪ್ಪಳದಲ್ಲಿಯೂ ಹಲವು ರೀತಿಯ ಆರೋಗ್ಯ ಪ್ರಯೋಜನಗಳಿವೆ. ಇದನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಅನೇಕ ರೀತಿಯ ಲಾಭಗಳಿವೆ. ಇದರಲ್ಲಿ ಫೈಬರ್ ಅಂಶ ಅಧಿಕವಾಗಿರುತ್ತದೆ. ಜೊತೆಗೆ ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಹಪ್ಪಳಗಳಲ್ಲಿ ಕಾರ್ಬೋಹೈಡ್ರೇಟ್ ಗಳು ಸಮೃದ್ಧವಾಗಿದ್ದು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತವೆ. ಆರೋಗ್ಯ ತಜ್ಞರ ಪ್ರಕಾರ, ಹಪ್ಪಳಗಳಲ್ಲಿ ಪ್ರೋಟೀನ್ಗಳು, ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ ಹಾಗಾಗಿ ಇದನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

ಪೌಷ್ಟಿಕತಜ್ಞರ ಪ್ರಕಾರ ಇದರಲ್ಲಿ ಸಾಕಷ್ಟು ಫೈಬರ್ ಅಂಶವಿದೆ. ಊಟದ ಜೊತೆಗೆ ಈ ಆಹಾರಗಳನ್ನು ಸೇವಿಸುವುದರಿಂದ ದೇಹದಲ್ಲಿ ಪ್ರಯೋಜನಕಾರಿ ಬ್ಯಾಕ್ಟೀರಿಯಾಗಳ ಸಂಖ್ಯೆ ಹೆಚ್ಚಾಗುತ್ತದೆ. ಇದು ಸಂಪೂರ್ಣವಾಗಿ ಗ್ಲುಟೆನ್ ಮುಕ್ತವಾಗಿದೆ. ಹಪ್ಪಳಗಳು ಕಾರ್ಬೋಹೈಡ್ರೇಟ್ ಗಳು, ಮೆಗ್ನೀಸಿಯಮ್, ಸೋಡಿಯಂ, ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಅದರಲ್ಲಿಯೂ ಹಪ್ಪಳಗಳಲ್ಲಿ ಕ್ಯಾಲೊರಿಗಳು ಕಡಿಮೆ ಇರುತ್ತವೆ. ಆದ್ದರಿಂದ, ತೂಕ ಇಳಿಸಿಕೊಳ್ಳಲು ಬಯಸುವವರು ತಮ್ಮ ಆಹಾರದಲ್ಲಿ ಹಪ್ಪಳವನ್ನು ಸಹ ಸೇರಿಸಬಹುದು. ಅದಲ್ಲದೆ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಸುಗಮಗೊಳಿಸುವ ಮೂಲಕ ಜೀರ್ಣಕಾರಿ ಕಿಣ್ವಗಳನ್ನು ಉತ್ಪಾದಿಸುತ್ತದೆ. ಪ್ರೋಟೀನ್ ಕೂಡ ಅಧಿಕವಾಗಿರುತ್ತದೆ. ಅಲರ್ಜಿಯ ಹೊರತಾಗಿ ಹಪ್ಪಳ ಸೇವನೆ ಮಾಡುವುದು ಬಹಳ ಸುರಕ್ಷಿತವಾಗಿದೆ. ಎಲ್ಲಾ ವಯಸ್ಸಿನವರು ಕೂಡ ಜೊತೆಗೆ ಮಧುಮೇಹ ಇರುವವರು ಕೂಡ ವೈದ್ಯರ ಸಲಹೆಯನುಸಾರ ಸೇವನೆ ಮಾಡಬಹುದು.

ಇದನ್ನೂ ಓದಿ: ಚಲನಚಿತ್ರಗಳಲ್ಲಿನ ಸೆಂಟಿಮೆಂಟ್ ದೃಶ್ಯಗಳನ್ನು ನೋಡಿ ಅಳುವವರಿಗೆ ಸಾವು ಖಂಡಿತ

ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಹಪ್ಪಳದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದು ಕಣ್ಣಿಗೆ ಸಂಬಂಧಿಸಿದ ಆರೋಗ್ಯ ಅಸ್ವಸ್ಥತೆಗಳು ಮತ್ತು ಕಿವಿಗೆ ಸಂಬಂಧಿತ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ವಿಶೇಷವಾಗಿ, ಇದು ಕಬ್ಬಿಣ ಮತ್ತು ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ಹಪ್ಪಳ ಸೇವನೆ ಮಾಡುವುದು ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ವಿಶೇಷವಾಗಿ ಜ್ವರ ಬಂದ ಸಮಯದಲ್ಲಿ ನಿಮಗೆ ಏನನ್ನೂ ತಿನ್ನಲು ಮನಸ್ಸಾಗುವುದಿಲ್ಲ, ಹಸಿವು ಆಗುವುದಿಲ್ಲ. ಅಂತಹ ಸಂದರ್ಭದಲ್ಲಿ, ಹುರಿದ ಕಡಲೆ ಬೇಳೆ ಹಪ್ಪಳವನ್ನು ತಿನ್ನುವುದು ಹಸಿವನ್ನು ಹೆಚ್ಚಿಸುತ್ತದೆ. ತಿನ್ನುವ ಬಯಕೆ ಹೆಚ್ಚಾಗುತ್ತದೆ. ಹಾಗಾಗಿ ಇದು ಆರೋಗ್ಯಕ್ಕೂ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!