ನೀವು ಪ್ರತಿನಿತ್ಯ ಬಾದಾಮಿ ಸೇವಿಸುತ್ತಿದ್ದೀರಾ? ದಿನಕ್ಕೆ ಎಷ್ಟು ಬಾದಮಿ ತಿಂದರೆ ಉತ್ತಮ? 

ಬಾದಾಮಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳಿದ್ದು, ಅದು ನಮಗೆ ಶಕ್ತಿಯನ್ನು ತುಂಬುತ್ತದೆ. ಆರೋಗ್ಯಕರ ಕೊಬ್ಬು, ಫೈಬರ್, ಪ್ರೋಟಿನ್, ಮೆಗ್ನೇಸಿಯಂ ಇತ್ಯಾದಿ ಅಂಶಗಳು ಇದರಲ್ಲಿರುವ ಕಾರಣ ಬಾದಮಿಯ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ ಅದರ ಅತಿಯಾದ ಸೇವನೆಯು ಆರೋಗ್ಯಕ್ಕೆ ಅಷ್ಟೇನು ಒಳ್ಳೆಯದಲ್ಲ. ಹಾಗಿರುವಾಗ ದಿನಕ್ಕೆ ಎಷ್ಟು ಬಾದಮಿ ತಿನ್ನಬೇಕು ಎಂಬುದನ್ನು ತಿಳಿಯಿರಿ. 

ನೀವು ಪ್ರತಿನಿತ್ಯ ಬಾದಾಮಿ ಸೇವಿಸುತ್ತಿದ್ದೀರಾ? ದಿನಕ್ಕೆ ಎಷ್ಟು ಬಾದಮಿ ತಿಂದರೆ ಉತ್ತಮ? 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 04, 2023 | 6:25 PM

ಬಾದಾಮಿಯನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.  ಪೋಷಕಾಂಶಗಳ ಖಜಾನೆಯಾಗಿರುವ ಬಾದಮಿಯನ್ನು ಅನೇಕ ಜನರು ಪ್ರತಿದಿನ  ಸೇವನೆ ಮಾಡುತ್ತಾರೆ.  ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಬಾದಮಿಯನ್ನು  ಪ್ರತಿನಿತ್ಯ ತಿನ್ನುವುದರಿಂದ ಹೃದಯವನ್ನು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು, ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಕಾರಿಯಾಗಿದೆ  ಮತ್ತು ಇದು ರೋಗ ನಿರೋಧಕಶಕ್ತಿಯನ್ನು ಬಲಪಡಿಸುವ ಮೂಲಕ ದೇಹವನ್ನು ವಿವಿಧ ರೋಗಗಳಿಂದ ರಕ್ಷಿಸುತ್ತದೆ. ಮಕ್ಕಳ ಮೆದುಳಿನ ಬೆಳವಣಿಗೆಗೂ ಬಾದಮಿ ಸಹಕಾರಿ.  ಹೀಗಿದ್ದರೂ ಬಾದಮಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಅಭ್ಯಾಸವು ಆರೋಗ್ಯಕ್ಕೆ ಅಷ್ಟೇನು ಒಳ್ಳೆಯದಲ್ಲ.  ಹಾಗಾದರೆ ದಿನಕ್ಕೆ ಎಷ್ಟು ಪ್ರಮಾಣದ ಬಾದಾಮಿ ತಿಂದರೆ ಸೂಕ್ತ ಎಂಬುದನ್ನು ನೋಡೋಣ.

ಒಂದು ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

ತಜ್ಞರ ಪ್ರಕಾರ ಒಬ್ಬ ವ್ಯಕ್ತಿಯು  ದಿನಕ್ಕೆ 30 ರಿಂದ 50 ಗ್ರಾಂ  ಬಾದಮಿ ತಿಂದರೆ ಸಾಕಾಗುತ್ತದೆ. ಅಂದರೆ ಒಂದು ಮುಷ್ಟಿ ಅಥವಾ 8 ರಿಂದ 10 ಬಾದಾಮಿಗಳನ್ನು ತಿಂದರೆ ಸಾಕಾಗುತ್ತದೆ.  4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ದಿನಕ್ಕೆ 3 ರಿಂದ 4 ಬಾದಾಮಿ ತಿನ್ನಿಸಬಹುದು. ಅದರಲ್ಲೂ ನೆನೆಸಿದ ಬಾದಮಿ ತಿಂದರೆ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು.   50 ಗ್ರಾಂ ಬಾದಾಮಿಯಲ್ಲಿ ಸುಮಾರು 300 ಗ್ರಾಂ ಕ್ಯಾಲೋರಿಗಳಿವೆ. ಮತ್ತು ಇದು 150 ಗ್ರಾಂ ಕಾರ್ಬೋಹೈಡ್ರೇಟ್, 12 ಗ್ರಾಂ ಆರೋಗ್ಯಕರ ಕೊಬ್ಬು ಮತ್ತು 6 ಗ್ರಾಂ ಪ್ರೋಟೀನ್ಗಳನ್ನು ಹೊಂದಿದೆ.

ಬಾದಾಮಿ ತಿನ್ನಲು ಸರಿಯಾದ ಸಮಯ:

ನೀವು ಯಾವಾಗ ಬೇಕಾದರೂ ಬಾದಮಿ ತಿನ್ನಬಹುದು. ಆದರೆ ಅದರ ಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಲು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾದಮಿ ತಿನ್ನಲು ಸಲಹೆ ನೀಡಲಾಗುತ್ತದೆ. ಬಾದಾಮಿಯು ಸ್ವಲ್ಪ ಬಿಸಿ ಸ್ವಭಾವವನ್ನು ಹೊಂದಿರುವುದರಿಂದ, ಅದನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಟ್ಟು ಮರುದಿನ ಬೆಳಗ್ಗೆ ತಿನ್ನುವುದು ಹೆಚ್ಚು ಸೂಕ್ತವಾಗಿದೆ.

ಇದನ್ನೂ ಓದಿ: ತೂಕ ಇಳಿಸುವ ಪ್ರಯತ್ನದಲ್ಲಿದ್ದರೆ ಬಾದಾಮಿ ತಿನ್ನಿ

ಅತಿಯಾದ ಬಾದಾಮಿ ಸೇವನೆಯಿಂದ ಉಂಟಾಗುವ ಅಡ್ಡ ಪರಿಣಾಮಗಳು:

ಮೂತ್ರಪಿಂಡದ ಕಲ್ಲು: ಬಾದಾಮಿಯಲ್ಲಿ ಪ್ರೋಟೀನ್, ಆರೋಗ್ಯಕರ ಕೊಬ್ಬು, ಫೈಬರ್, ವಿಟಮಿನ್ ಇತ್ಯಾದಿ ಪೋಷಕಾಂಶಗಳು ಸಮೃದ್ಧವಾಗಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾದೆ. ಜೊತೆಗೆ ಬಾದಾಮಿಯಲ್ಲಿ ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಹೆಚ್ಚಿಸುವ ಆಕ್ಸೇಟ್ ಎಂಬ ಸಂಯುಕ್ತವಿದೆ. ಈ ಕಾರಣ ಬಾದಾಮಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ದೇಹದಲ್ಲಿ ಆಕ್ಸಲೇಟ್ ಪ್ರಮಾಣದ ಹೆಚ್ಚಾಗುತ್ತದೆ. ಇದು ಮೂತ್ರಪಿಂಡಗಳಲ್ಲಿ ಸಂಗ್ರಹಗೊಂಡು ಕಿಡ್ನಿ ಸ್ಟೋನ್ ಉಂಂಟಾಗಲು ಕಾರಣವಾಗುತ್ತದೆ.

ಜೀರ್ಣಕ್ರಿಯೆ ಸಂಬಂಧಿ ಸಮಸ್ಯೆಗಳು: ಬಾದಾಮಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ. ಆದರೆ ಅವುಗಳ ಅತಿಯಾದ ಸೇವನೆ ಜೀರ್ಣಾಂಗ ವ್ಯವಸ್ಥೆಗೆ ಹಾನಿಕಾರಕವಾಗಿದೆ. ಬಾದಾಮಿಯಲ್ಲಿ ನಾರಿನಂಶ ಹೆಚ್ಚಿದ್ದು, ಅಧಿಕ ಪ್ರಮಾಣದಲ್ಲಿ ನಾರಿನಂಶವನ್ನು ಸೇವಿಸುವುದರಿಂದ ಗ್ಯಾಸ್, ಹೊಟ್ಟೆ ನೋವು, ಅಜೀರ್ಣದಂತಹ ಹೊಟ್ಟೆ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲದೆ ಬಾದಾಮಿಯಲ್ಲಿರುವ ಆಕ್ಸಲೇಟ್ ಅಂಶವು ಜೀರ್ಣಾಂಗ ವ್ಯವಸ್ಥೆಯ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರಬಹುದು.

ಬೊಜ್ಜು ಹೆಚ್ಚಾಗಲು ಕಾರಣವಾಗಬಹುದು: ಬಾದಾಮಿಯಲ್ಲಿ ಹೆಚ್ಚಿನ ಕೊಬ್ಬು ಮತ್ತು ಕ್ಯಾಲೋರಿಗಳಿವೆ. ಆದ ಕಾರಣ ಬಾದಾಮಿಯನ್ನು ಹೆಚ್ಚು ಸೇವಿಸಿದಾಗ, ಕ್ಯಾಲೋರಿ ಸೇವನೆಯು ಗಮನಾರ್ಹವಾಗಿ ಹೆಚ್ಚಾಗುತ್ತದೆ, ಕ್ಯಾಲೋರಿ ಸೇವನೆಯು ಹೆಚ್ಚಾದಾಗ, ದೇಹ ತೂಕ ಕೂಡಾ ಹೆಚ್ಚಾಗುತ್ತದೆ. ಹಾಗಾಗಿ ಬಾದಾಮಿಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ