ದಿನಕ್ಕೆ 6 ಗಂಟೆಗಿಂತ ಕಡಿಮೆ ನಿದ್ರೆ ಮಾಡ್ತೀರಾ?; ಹೃದಯದ ಬಗ್ಗೆ ಇರಲಿ ಎಚ್ಚರ

Sleeping Health Benefits: ನಿಯಮಿತ ನಿದ್ರೆಯ ಕೊರತೆಯು ರಕ್ತದೊತ್ತಡದ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಹೃದಯ ವೈಫಲ್ಯ ಮತ್ತು ಮೂತ್ರಪಿಂಡದ ಕಾಯಿಲೆಗೆ ಕಾರಣವಾಗುತ್ತದೆ. ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ವಯಸ್ಕರಿಗೆ ಪ್ರತಿ ರಾತ್ರಿ 7ರಿಂದ 9 ಗಂಟೆಗಳ ನಿದ್ರೆಯನ್ನು ಶಿಫಾರಸು ಮಾಡಿದೆ.

ದಿನಕ್ಕೆ 6 ಗಂಟೆಗಿಂತ ಕಡಿಮೆ ನಿದ್ರೆ ಮಾಡ್ತೀರಾ?; ಹೃದಯದ ಬಗ್ಗೆ ಇರಲಿ ಎಚ್ಚರ
ನಿದ್ರೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Sep 26, 2023 | 12:07 PM

ನಿದ್ರಾಹೀನತೆಯು ಹೃದಯದ ಆರೋಗ್ಯದ ಮೇಲೆ ತೀವ್ರ ಪರಿಣಾಮಗಳನ್ನು ಬೀರಬಲ್ಲದು. ಅಧಿಕ ರಕ್ತದೊತ್ತಡ, ಸ್ಥೂಲಕಾಯತೆ (obesity), ಹೃದ್ರೋಗ (Heart Problem) ಮತ್ತು ಪಾರ್ಶ್ವವಾಯು ಸೇರಿದಂತೆ ಹೃದಯರಕ್ತನಾಳದ ಕಾಯಿಲೆಗಳಿಗೆ ನಿದ್ರೆಯ ಕೊರತೆಯು ಕೂಡ ಒಂದು ಮುಖ್ಯ ಕಾರಣ ಎಂದು ಸಂಶೋಧನೆ ತಿಳಿಸಿದೆ. 2021ರಲ್ಲಿ ನಡೆಸಿದ ಅಧ್ಯಯನವು ನಿದ್ರಾಹೀನತೆಯು ಹೃದಯಕ್ಕೆ ಹಾನಿಯಾಗುವ ಅನಾರೋಗ್ಯಕರ ಅಭ್ಯಾಸಗಳಿಗೆ ಕಾರಣವಾಗಬಹುದು ಎಂದು ಹೇಳಿದೆ.

ಪ್ರತಿ ರಾತ್ರಿ 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವ ವಯಸ್ಕರಲ್ಲಿ ಹೃದಯಾಘಾತ ಮತ್ತು ಖಿನ್ನತೆ ಸೇರಿದಂತೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಇದು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.

ಇದಲ್ಲದೆ, ನಿಯಮಿತ ನಿದ್ರೆಯ ಕೊರತೆಯು ರಕ್ತದೊತ್ತಡದ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಹೃದಯ ವೈಫಲ್ಯ ಮತ್ತು ಮೂತ್ರಪಿಂಡದ ಕಾಯಿಲೆಗೆ ಕಾರಣವಾಗುತ್ತದೆ. ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ಹೆಚ್ಚಿನ ವಯಸ್ಕರಿಗೆ ಪ್ರತಿ ರಾತ್ರಿ 7ರಿಂದ 9 ಗಂಟೆಗಳ ನಿದ್ರೆಯನ್ನು ಶಿಫಾರಸು ಮಾಡಿದೆ.

ಇದನ್ನೂ ಓದಿ: ಲಿಫ್ಟ್​ ಬದಲು ಮೆಟ್ಟಿಲು ಹತ್ತುವುದರಿಂದ ಏನೆಲ್ಲ ಪ್ರಯೋಜನವಿದೆ ಗೊತ್ತಾ?

ದೆಹಲಿಯ ಓಖ್ಲಾದಲ್ಲಿರುವ ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆಯ ಕನ್ಸಲ್ಟೆಂಟ್ ನಾನ್-ಇನ್ವೇಸಿವ್ ಕಾರ್ಡಿಯಾಲಜಿಸ್ಟ್ ಡಾ. ಮೋಹಿತ್ ಟಂಡನ್, ನಿದ್ರೆಯ ಸಮಯದಲ್ಲಿ ನಿಮ್ಮ ದೇಹವು ತನ್ನನ್ನು ತಾನೇ ರಿಪೇರಿ ಮಾಡುತ್ತದೆ. ನಿಮ್ಮ ರಕ್ತದೊತ್ತಡ, ಹೃದಯ ಬಡಿತ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟಗಳು ಸೇರಿದಂತೆ ವಿವಿಧ ಕಾರ್ಯಗಳನ್ನು ನಿಯಂತ್ರಿಸುತ್ತದೆ ಎಂದು ಹೇಳಿದ್ದಾರೆ.

“ನೀವು ಸಾಕಷ್ಟು ನಿದ್ರೆ ಪಡೆಯದಿದ್ದರೆ ನಿಮ್ಮ ದೇಹವು ಹೆಚ್ಚು ಒತ್ತಡದ ಹಾರ್ಮೋನ್‌ಗಳನ್ನು ಉತ್ಪಾದಿಸುತ್ತದೆ. ಅದು ನಿಮ್ಮ ರಕ್ತನಾಳಗಳನ್ನು ನಿರ್ಬಂಧಿಸುತ್ತದೆ. ಆಗ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತದೆ” ಎಂದು ಡಾ. ಮೋಹಿತ್ ಟಂಡನ್ ಇಂಡಿಯಾ ಟುಡೇಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನೀವು ಸಾಕಷ್ಟು ನಿದ್ರೆ ಮಾಡದಿದ್ದಾಗ ಅಥವಾ ಕಳಪೆ ಗುಣಮಟ್ಟದ ನಿದ್ರೆಯನ್ನು ಮಾಡುವಾಗ ನಿಮ್ಮ ಹೃದಯ ಮತ್ತು ರಕ್ತನಾಳಗಳು ವಿಶ್ರಾಂತಿ ಪಡೆಯಲು ಅವಕಾಶ ಸಿಗುವುದಿಲ್ಲ. ಇದು ದೀರ್ಘಕಾಲದ ಉರಿಯೂತ, ಆಕ್ಸಿಡೇಟಿವ್ ಒತ್ತಡ ಮತ್ತು ಹಾರ್ಮೋನ್ ಅಸಮತೋಲನಕ್ಕೆ ಕಾರಣವಾಗಬಹುದು. ಇದು ನಿಮ್ಮ ಹೃದಯರಕ್ತನಾಳದ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ.

ಇದನ್ನೂ ಓದಿ: ಮೆದುಳಿನ ಆರೋಗ್ಯಕ್ಕೆ ಚೀಸ್ ತಿನ್ನಿ; ತಜ್ಞರು ಹೇಳೋದೇನು?

ನಿದ್ರಾಹೀನತೆಯಿಂದ ತೂಕ ಹೆಚ್ಚಾಗುವುದರ ಜೊತೆಗೆ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹಾರ್ಮೋನುಗಳ ಮೇಲೆ ಕೂಡ ಪರಿಣಾಮ ಬೀರುತ್ತದೆ.

ಉತ್ತಮ ಗುಣಮಟ್ಟದ ನಿದ್ರೆ ಮಾಡುವುದು ಹೇಗೆ?:

– ದಿನವೂ ಒಂದೇ ಸಮಯಕ್ಕೆ ನಿದ್ರೆ ಮಾಡುವ ಅಭ್ಯಾಸ ರೂಢಿಸಿಕೊಳ್ಳಿ.

– ವೀಕೆಂಡ್​ನಲ್ಲಿ ಅಥವಾ ರಜಾ ದಿನಗಳಲ್ಲಿ ಕೂಡ ಒಂದೇ ಸಮಯಕ್ಕೆ ಮಲಗಿ, ಏಳುವ ಅಭ್ಯಾಸ ಮಾಡಿಕೊಳ್ಳಿ.

– ಮಲಗುವ ಸಮಯದಲ್ಲಿ ಕೆಫೀನ್, ಆಲ್ಕೋಹಾಲ್, ನಿಕೋಟಿನ್ ಮತ್ತು ಹೆಚ್ಚು ಊಟ ಮಾಡುವುದನ್ನು ಅವಾಯ್ಡ್ ಮಾಡಿ.

– ಆರಾಮದಾಯಕ ಮಲಗುವ ವಾತಾವರಣವನ್ನು ರೂಪಿಸಿಕೊಳ್ಳಿ. ನಿಮ್ಮ ಮಲಗುವ ಕೋಣೆ ಕತ್ತಲೆಯಿಂದ ಕೂಡಿರಲಿ, ಶಾಂತವಾಗಿರಲಿ, ತಂಪಾಗಿರಲಿ ಮತ್ತು ಆರಾಮದಾಯಕವಾಗಿರಲಿ.

– ಮಲಗುವ ಮುನ್ನ ಪರದೆಗಳನ್ನು ಹಾಕಿ. ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಆಫ್ ಮಾಡಿ. ಟಿವಿಗಳು, ಕಂಪ್ಯೂಟರ್‌ಗಳು, ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳಂತಹ ಸಾಧನಗಳು ಹೊರಸೂಸುವ ನೀಲಿ ಬೆಳಕು ನಿಮ್ಮ ನಿದ್ರೆಯ ಸೈಕಲ್ ಅನ್ನು ನಿಯಂತ್ರಿಸುವ ಹಾರ್ಮೋನ್ ಮೆಲಟೋನಿನ್ ಉತ್ಪಾದನೆಯನ್ನು ನಿಗ್ರಹಿಸುತ್ತದೆ.

– ಮಲಗುವುದಕ್ಕೂ ಒಂದೆರಡು ಗಂಟೆ ಮೊದಲು ನಿಯಮಿತವಾಗಿ ವ್ಯಾಯಾಮ ಮಾಡಿ. ದೈಹಿಕ ಚಟುವಟಿಕೆಯು ಒತ್ತಡವನ್ನು ಕಡಿಮೆ ಮಾಡುವ ಮೂಲಕ, ನಿಮ್ಮ ಮನಸ್ಥಿತಿಯನ್ನು ಸುಧಾರಿಸುವ ಮತ್ತು ದೈಹಿಕ ಆರೋಗ್ಯವನ್ನು ಉತ್ತೇಜಿಸುವ ಮೂಲಕ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.

– ಹಗಲಿನಲ್ಲಿ ನಿದ್ರೆ ಮಾಡಬೇಡಿ. ಇದರಿಂದ ರಾತ್ರಿ ಚೆನ್ನಾಗಿ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ