ಅಧಿಕ ರಕ್ತದೊತ್ತಡದ ಸಮಸ್ಯೆಯೇ?; ಈ ಆಹಾರಗಳನ್ನು ದೂರವಿಡಿ

High Blood Pressure: ನಾವು ಸೇವಿಸುವ ಎಲ್ಲ ಆಹಾರಗಳೂ ಒಂದಲ್ಲ ಒಂದು ರೀತಿಯಿಂದ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕಾಂಶಗಳನ್ನು ನೀಡುತ್ತವೆ. ಆದರೆ, ಅವುಗಳಲ್ಲಿ ಕೆಲವು ಆಹಾರಗಳು ಕೆಲವು ರೀತಿಯ ಆರೋಗ್ಯ ಸಮಸ್ಯೆ ಇರುವವರಿಗೆ ತೊಂದರೆ ಉಂಟುಮಾಡುತ್ತವೆ. ನೀವೇನಾದರೂ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಕೆಲವು ಆಹಾರಗಳ ಸೇವನೆಯನ್ನು ಬಿಟ್ಟುಬಿಡಿ. ಆ ಆಹಾರಗಳು ಯಾವುವು? ಎಂಬ ಮಾಹಿತಿ ಇಲ್ಲಿದೆ.

ಅಧಿಕ ರಕ್ತದೊತ್ತಡದ ಸಮಸ್ಯೆಯೇ?; ಈ ಆಹಾರಗಳನ್ನು ದೂರವಿಡಿ
ಸಾಂದರ್ಭಿಕ ಚಿತ್ರ Image Credit source: iStock
Follow us
ಸುಷ್ಮಾ ಚಕ್ರೆ
|

Updated on: Feb 09, 2024 | 3:43 PM

ನಿಮ್ಮ ರಕ್ತದೊತ್ತಡದ ಮಟ್ಟದ ಮೇಲೆ ಆಹಾರವು ದೊಡ್ಡ ಪರಿಣಾಮವನ್ನು ಬೀರುತ್ತದೆ. ಜಾಗತಿಕವಾಗಿ, ಶೇ. 59ರಷ್ಟು ಮಹಿಳೆಯರು ಮತ್ತು ಶೇ. 49ರಷ್ಟು ಪುರುಷರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಮಾರಣಾಂತಿಕ ಹೃದಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ಪ್ರಕಾರ, ನೀವು ಸೇವಿಸುವ ಕೆಲವು ಆಹಾರಗಳು ಮತ್ತು ಪದಾರ್ಥಗಳು ನಿಮ್ಮ ರಕ್ತದೊತ್ತಡವನ್ನು ಹೆಚ್ಚಿಸಬಹುದು. ಹೀಗಾಗಿ, ಆಹಾರದ ಆಯ್ಕೆಯಲ್ಲಿ ಎಚ್ಚರ ವಹಿಸಬೇಕಾದುದು ಅಗತ್ಯ.

ಈ ಆಹಾರಗಳ ಸೇವನೆಯನ್ನು ಮಿತಿಗೊಳಿಸುವುದು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಉಪ್ಪು ಮತ್ತು ಸೋಡಿಯಂ:

ನಿಮ್ಮ ರಕ್ತದೊತ್ತಡದ ಮಟ್ಟದಲ್ಲಿ ಗಮನಾರ್ಹ ಏರಿಕೆಗೆ ಉಪ್ಪು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಅಧ್ಯಯನಗಳ ಪ್ರಕಾರ, ಉಪ್ಪು ರಕ್ತದಲ್ಲಿನ ದ್ರವ ಸಮತೋಲನದ ಮೇಲೆ ಪರಿಣಾಮ ಬೀರುತ್ತದೆ. ಉಪ್ಪು ಆರೋಗ್ಯಕ್ಕೆ ಮುಖ್ಯವಾದುದಾದರೂ ಅತಿಯಾಗಿ ತಿನ್ನುವುದು ತೀವ್ರವಾದ ಪರಿಣಾಮಗಳನ್ನು ಉಂಟುಮಾಡುತ್ತದೆ. ಹೆಚ್ಚಿನ ಉಪ್ಪು ಜಂಕ್ ಮತ್ತು ಸಂಸ್ಕರಿಸಿದ ಆಹಾರಗಳಿಂದ ದೇಹಕ್ಕೆ ಸೇರುತ್ತದೆ. ಉದಾಹರಣೆಗೆ, ಬ್ರೆಡ್, ಪಿಜ್ಜಾ, ಸ್ಯಾಂಡ್​ವಿಚ್, ಕೋಲ್ಡ್ ಕಟ್ ಮಾಂಸ, ಸೂಪ್, ಟ್ಯಾಕೋಗಳು, ಸಕ್ಕರೆ ಪದಾರ್ಥಗಳನ್ನು ಅವಾಯ್ಡ್ ಮಾಡಬೇಕು.

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ಕಂಟ್ರೋಲ್ ಮಾಡಲು ಕಾಳು ಮೆಣಸು ಸೇವಿಸಿ

ಆಲ್ಕೋಹಾಲ್:

ಹೆಚ್ಚು ಆಲ್ಕೋಹಾಲ್ ಕುಡಿಯುವುದರಿಂದ ನಿಮ್ಮ ರಕ್ತದೊತ್ತಡವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ದಿನಕ್ಕೆ 2 ಗ್ಲಾಸ್‌ಗಳಿಗಿಂತ ಹೆಚ್ಚು ಕುಡಿಯುವ ಜನರಲ್ಲಿ ಕಡಿಮೆ ಮದ್ಯಪಾನ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುವ ನಡುವೆ ಸಂಬಂಧವಿದೆ ಎಂದು ಅಧ್ಯಯನಗಳು ಹೇಳುತ್ತವೆ. ವೈದ್ಯರ ಪ್ರಕಾರ, ಆಲ್ಕೊಹಾಲ್​ಯುಕ್ತ ಪಾನೀಯಗಳು ಸಕ್ಕರೆ ಮತ್ತು ಕ್ಯಾಲೋರಿಗಳಿಂದ ತುಂಬಿರುವುದರಿಂದ ಅವು ಅಧಿಕ ತೂಕ ಮತ್ತು ಸ್ಥೂಲಕಾಯತೆಗೆ ಪ್ರಮುಖವಾಗಿ ಕೊಡುಗೆ ನೀಡುತ್ತವೆ. ಇದು ಅಧಿಕ ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸುತ್ತದೆ.

ಧೂಮಪಾನ:

ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾದ ದೊಡ್ಡ ಅಭ್ಯಾಸವೆಂದರೆ ಧೂಮಪಾನ. ಧೂಮಪಾನವು ರಕ್ತದೊತ್ತಡದಲ್ಲಿ ತಾತ್ಕಾಲಿಕ ಏರಿಕೆಗೆ ಕಾರಣವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಧೂಮಪಾನವು ನಿಮ್ಮ ಅಪಧಮನಿಯೊಳಗೆ ಪ್ಲೇಕ್ ಎಂದು ಕರೆಯಲ್ಪಡುವ ಕೊಬ್ಬಿನ ಪದಾರ್ಥಗಳ ರಚನೆಯ ಅಪಾಯವನ್ನು ಹೆಚ್ಚಿಸುತ್ತದೆ. ಇದು ಅಪಧಮನಿಕಾಠಿಣ್ಯ ಎಂದು ಕರೆಯಲ್ಪಡುವ ಸ್ಥಿತಿಗೆ ಕಾರಣವಾಗುತ್ತದೆ. ಇದು ಚಿಕಿತ್ಸೆ ನೀಡದೆ ಬಿಟ್ಟರೆ ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಆಲ್ಕೋಹಾಲ್ ಸೇವಿಸಿದ ಬಳಿಕ ಹ್ಯಾಂಗೋವರ್ ಉಂಟಾಗುವುದೇಕೆ?

ಅಧಿಕ ರಕ್ತದೊತ್ತಡದ ಲಕ್ಷಣಗಳು:

ಅಧಿಕ ರಕ್ತದೊತ್ತಡ ಹೊಂದಿರುವ ಅನೇಕ ಜನರಿಗೆ ಯಾವುದೇ ರೋಗಲಕ್ಷಣಗಳು ಕಂಡುಬರುವುದಿಲ್ಲ. ಸೈಲೆಂಟ್ ಆಗಿಯೇ ಇದು ದೇಹದ ಮೇಲೆ ಪರಿಣಾಮ ಬೀರುತ್ತದೆ. ಮುಖ್ಯವಾಗಿ, ತಲೆತಿರುಗುವಿಕೆ, ತಲೆನೋವು, ಮೂಗಿನಲ್ಲಿ ರಕ್ತ ಬರುವುದು, ಗೊಂದಲ, ಅಸ್ಪಷ್ಟ ದೃಷ್ಟಿ, ಉಸಿರಾಟದ ತೊಂದರೆ, ಅನಿಯಮಿತ ಹೃದಯ ಬಡಿತ, ಕೆಂಪು ಅಥವಾ ಗುಲಾಬಿ ಬಣ್ಣದ ಮೂತ್ರ ವಿಸರ್ಜನೆ ಲಕ್ಷಣಗಳು ಕಂಡುಬರುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ