ಬೂದಿಕುಂಬಳಕಾಯಿ ಜ್ಯೂಸ್​ ಕುಡಿದರೆ ಬೊಜ್ಜು ಕರಗುವುದರಲ್ಲಿ ಅನುಮಾನವೇ ಇಲ್ಲ!

ಪ್ರಾಚೀನ ವೈದ್ಯಕೀಯ ಪದ್ಧತಿಗಳಲ್ಲಿ, ಸಂಸ್ಕೃತದಲ್ಲಿ 'ಕೂಷ್ಮಾಂಡ' ಎಂದು ಕರೆಯಲ್ಪಡುವ ಬೂದಿ ಕುಂಬಳಕಾಯಿ ಔಷಧೀಯ ಗುಣಗಳನ್ನು ಹೊಂದಿದೆ. ಬೂದಿ ಕುಂಬಳಕಾಯಿ ಜ್ಯೂಸ್ ಕುಡಿಯುವುದರಿಂದ ಹೊಟ್ಟೆಯಲ್ಲಿ ಉತ್ತಮ ಬ್ಯಾಕ್ಟೀರಿಯಾ ಉತ್ಪಾದನೆಯಾಗುತ್ತದೆ.

ಬೂದಿಕುಂಬಳಕಾಯಿ ಜ್ಯೂಸ್​ ಕುಡಿದರೆ ಬೊಜ್ಜು ಕರಗುವುದರಲ್ಲಿ ಅನುಮಾನವೇ ಇಲ್ಲ!
ಬೂದಿ ಕುಂಬಳಕಾಯಿ ಜ್ಯೂಸ್ Image Credit source: iStock
Follow us
ಸುಷ್ಮಾ ಚಕ್ರೆ
|

Updated on: Sep 27, 2023 | 8:30 PM

ಬೂದಿ ಕುಂಬಳಕಾಯಿ ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ಬಹಳ ಉಪಯುಕ್ತವಾದ ತರಕಾರಿಯಾಗಿದೆ. ಇದನ್ನು ಮುಖ್ಯವಾಗಿ ಮಳೆಗಾಲದಲ್ಲಿ ಬೆಳೆಯಲಾಗುತ್ತದೆ. ಜನರು ಇದನ್ನು ಚಳಿಗಾಲದ ಕಲ್ಲಂಗಡಿ ಎಂದೂ ಕರೆಯುತ್ತಾರೆ. ಪ್ರಾಚೀನ ವೈದ್ಯಕೀಯ ಪದ್ಧತಿಗಳಲ್ಲಿ, ಸಂಸ್ಕೃತದಲ್ಲಿ ‘ಕೂಷ್ಮಾಂಡ’ ಎಂದು ಕರೆಯಲ್ಪಡುವ ಬೂದಿ ಕುಂಬಳಕಾಯಿ ಔಷಧೀಯ ಗುಣಗಳನ್ನು ಹೊಂದಿದೆ. ಈ ಕುಂಬಳಕಾಯಿಯ ಹಲ್ವಾ, ಆಗ್ರಾ ಪೇಟ ಬಹಳ ರುಚಿಕರವಾದ ಸಿಹಿತಿಂಡಿಯಾಗಿದೆ. ಈ ಬೂದುಗುಂಬಳಕಾಯಿಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಬೂದಿ ಕುಂಬಳಕಾಯಿಯಲ್ಲಿ ಪೋಷಕಾಂಶಗಳು ಪ್ರೋಟೀನ್‌ಗಳು, ಫ್ಲೇವನಾಯ್ಡ್‌ಗಳು, ಕ್ಯಾರೋಟಿನ್‌ಗಳು, ವಿಟಮಿನ್‌ಗಳು, ಖನಿಜಗಳು ಇವೆ. ಇದು ಮುಖ್ಯವಾಗಿ ಶೇ. 96ರಷ್ಟು ನೀರಿನಿಂದ ಕೂಡಿರುವ ತರಕಾರಿಯಾಗಿದೆ. ಬೂದಿ ಕುಂಬಳಕಾಯಿಯು ಆಲ್ಝೈಮರ್ ಕಾಯಿಲೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ತ್ವಚೆಯ ಸೌಂದರ್ಯ, ಆರೋಗ್ಯಕ್ಕೆ ಮುಲ್ತಾನಿ ಮಿಟ್ಟಿಯಿಂದ ಉಪಯೋಗವೇನು?

ಬೂದಿ ಕುಂಬಳಕಾಯಿ ಜ್ಯೂಸ್ ಕುಡಿಯುವುದರಿಂದ ಹೊಟ್ಟೆಯಲ್ಲಿ ಉತ್ತಮ ಬ್ಯಾಕ್ಟೀರಿಯಾ ಉತ್ಪಾದನೆಯಾಗುತ್ತದೆ. ಇದು ಆಂಟಾಸಿಡ್ ಆಗಿ ಕಾರ್ಯನಿರ್ವಹಿಸುತ್ತದೆ. ಹಾಗೇ, ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಬೂದಿ ಕುಂಬಳಕಾಯಿ ಜ್ಯೂಸ್ ಜ್ವರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಆಂಜಿಯೋಲೈಟಿಕ್ ಪರಿಣಾಮವನ್ನು ಹೊಂದಿದೆ.

ಬೂದಿ ಕುಂಬಳಕಾಯಿ ಜ್ಯೂಸ್ ಖಿನ್ನತೆ ನಿವಾರಣೆಗೆ ಸಹಾಯಕವಾಗಿದೆ. ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ರಕ್ತದಲ್ಲಿನ ಗ್ಲೂಕೋಸ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದ ಲಿಪಿಡ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬೂದಿ ಕುಂಬಳಕಾಯಿ ಜ್ಯೂಸ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಇದು ಕೊಬ್ಬಿನ ಅಂಶವನ್ನು ಹೊಂದಿರುವುದಿಲ್ಲ. ಹೀಗಾಗಿ, ಮಧುಮೇಹ ಹೊಂದಿರುವ ರೋಗಿಗಳಿಗೆ ಇದು ಉತ್ತಮ ಆಯ್ಕೆಯಾಗಿದೆ. ಬೂದಿ ಕುಂಬಳಕಾಯಿ ಜ್ಯೂಸ್ ತೂಕ ಇಳಿಸಿಕೊಳ್ಳಲು ಸಹಾಯ ಮಾಡಬಹುದು. ಇದರಲ್ಲಿರುವ ಫೈಬರ್ ಅಂಶವು ದೇಹದ ಕೊಬ್ಬನ್ನು ಕರಗಿಸಿ, ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಹದ ತೂಕವನ್ನು ಕಡಿಮೆ ಮಾಡಲು ಇಲ್ಲಿವೆ ಸರಳ ಸಲಹೆಗಳು

ಬೂದಿ ಕುಂಬಳಕಾಯಿ ಜ್ಯೂಸ್ ಜೀರ್ಣಾಂಗ ಮತ್ತು ಹೊಟ್ಟೆಗೆ ಸಂಬಂಧಿಸಿದ ಹುಣ್ಣಿನಿಂದ ಬಳಲುತ್ತಿರುವ ಜನರ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರುತ್ತದೆ. ಬೂದಿ ಕುಂಬಳಕಾಯಿ ಜ್ಯೂಸ್ ಅನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ ಹುಣ್ಣುಗಳು ವಾಸಿಯಾಗುತ್ತವೆ. ಇದನ್ನು ಕುಡಿದ ನಂತರ 3 ಗಂಟೆಯ ಬಳಿಕವೇ ಆಹಾರ ಸೇವಿಸಬೇಕು.

ಬೂದಿ ಕುಂಬಳಕಾಯಿ ಜ್ಯೂಸ್ ಕುಡಿಯುವುದರಿಂದ ಫುಡ್ ಪಾಯ್ಸನಿಂಗ್ ಆಗಿದ್ದರೆ ಅದು ಗುಣವಾಗುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ