AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ

ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಪ್ರತಿನಿತ್ಯ ನಿಯಮಿತವಾದ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ಜೊತೆಗೆ ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳು ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ
ಸಂಗ್ರಹ ಚಿತ್ರ
TV9 Web
| Edited By: |

Updated on: Nov 19, 2021 | 10:05 AM

Share

ಚಳಿಗಾಲದಲ್ಲಿ ಆರೋಗ್ಯ ಶೀತ, ನೆಗಡಿ, ಜ್ವರದಂತಹ ಕಾಯಿಲೆಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಹೀಗಿರುವಾಗ ನೀವು ನಿಮ್ಮ ಆರೋಗ್ಯದ ಬಗ್ಗೆ ಗಮನವಹಿಸಿ. ಅದರಲ್ಲಿಯೂ ಮುಖ್ಯವಾಗಿ ಅಸ್ತಮಾ ರೋಗಿಗಳು ಈ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯವಿರಬೇಕು. ಜೊತೆಗೆ ನೀವು ಸೇವಿಸುವ ಆಹಾರದ ಬಗ್ಗೆ ಗಮನವಿರಲಿ. ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ಶ್ವಾಸಕೋಶದಲ್ಲಿ ಕಟ್ಟುವ ಕಫ ಉಸಿರಾಟಕ್ಕೆ ಅಡ್ಡಿಯುಂಟು ಮಾಡುತ್ತದೆ. ಅದು ಚಳಿಗಾಲದ ಶೀತದ ಸಮಯದಲ್ಲಿ ಹೆಚ್ಚಾಗುವುದರಿಂದ ಮೈ ಬೆಚ್ಚಗಿರುವಂತೆ ನೋಡಿಕೊಳ್ಳಿ. ಯಾವಾಗಲೂ ನಿಮಗೆ ವೈದ್ಯರು ಸೂಚಿಸಿರುವ ಔಷಧವನ್ನು ಮತ್ತು ಇನ್ಹೇಲರ್ ಬಳಸಿ.

ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ಬದಲಾಗುತ್ತಿರುವ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಯ ಮೂಲಕ ಆರೋಗ್ಯ ಹದಗೆಟ್ಟಿರಬಹುದು. ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಪ್ರತಿನಿತ್ಯ ನಿಯಮಿತವಾದ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ನೀವು ಸದೃಢರಾಗಿರಲು ವ್ಯಾಯಾಮ ಅವಶ್ಯಕವಾದರೆ ನೀವು ಸೇವಿಸುವ ಪೌಷ್ಟಿಕ ಆಹಾರದ ಮೂಲಕ ನಿಮ್ಮಲ್ಲಿ ಶಕ್ತಿ ಹೆಚ್ಚಾಗುತ್ತದೆ. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಆಸ್ತಮಾ ರೋಗಿಗಳು ಅನುಸಬೇಕಾದ ಕೆಲವು ಮಾರ್ಗಗಳು ಈ ಕೆಳಗಿನಂತಿದೆ;

*ತೀವ್ರ ಹೊಗೆಯಿಂದ ದೂರವಿರಿ *ಬೆಚ್ಚಗಿನ ಬಟ್ಟೆ ಧರಿಸಿ *ತೀವ್ರ ಚಳಿಯಿದ್ದಾಗ ಹೊರಗಡೆ ತಿರುಗಾಡುವುದನ್ನು ತಪ್ಪಿಸಿ *ಸೂರ್ಯ ಉದಯಿಸಿದ ಬಳಿಕ ಮನೆಯಿಂದ ಹೊರಡಿ, ಸೂರ್ಯ ಮುಳುಗುವ ಒಳಗೆ ನೀವು ಮನೆ ಸೇರಿ *ತುಂಬಾ ಕಠಿಣ ವ್ಯಾಯಾಮ ಬೇಡ. ನಿಯಮಿತ ವ್ಯಾಯಾಮದಲ್ಲಿ ತೊಡಗಿಕೊಳ್ಳಿ *ಇನ್ಹೇಲರ್​ಅನ್ನು ಯಾವಾಗಲೂ ನಿಮ್ಮ ಜೊತೆಯೇ ಇಟ್ಟುಕೊಳ್ಳಿ *ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ನಿಮ್ಮ ವೈದ್ಯರಲ್ಲಿ ಸಲಹೆ ಪಡೆಯಿರಿ

ಇದನ್ನೂ ಓದಿ:

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು

Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ