AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗಿನ ತಿಂಡಿಯಲ್ಲಿ ಆವಕಾಡೊ ಸೇರಿಸಿ ನೋಡಿ! ಒಳ್ಳೆಯ ಫಲಿತಾಂಶ ವಾರದಲ್ಲಿಯೇ ಸಿಗುತ್ತೆ

ಆವಕಾಡೊಗಳು ವಿವಿಧ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಇದೊಂದು ದುಬಾರಿ ಹಣ್ಣಾಗಿದ್ದರೂ ಕೂಡ ಇದರ ಸೇವನೆಯಿಂದ ನಾನಾ ರೀತಿಯ ಉಪಯೋಗವಿದೆ. ಇದು ಹೃದಯ ಮತ್ತು ಕಣ್ಣುಗಳನ್ನು ಆರೋಗ್ಯವಾಗಿರಿಸುತ್ತದೆ. ದೇಹದ ಒಟ್ಟಾರೆ ಬೆಳವಣಿಗೆಗೆ ತುಂಬಾ ಸಹಕಾರಿ. ಹಾಗಾದರೆ ಬೆಳಿಗ್ಗೆ ತಿಂಡಿಯ ಜೊತೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಳಗ್ಗಿನ ತಿಂಡಿಯಲ್ಲಿ ಆವಕಾಡೊ ಸೇರಿಸಿ ನೋಡಿ! ಒಳ್ಳೆಯ ಫಲಿತಾಂಶ ವಾರದಲ್ಲಿಯೇ ಸಿಗುತ್ತೆ
ಆವಕಾಡೊ ಹಣ್ಣಿನ ಪ್ರಯೋಜನImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 28, 2025 | 6:00 PM

Share

ವೈದ್ಯರು ಬೆಳಿಗ್ಗೆ ಸಮತೋಲಿತ ಆಹಾರ (Balanced diet) ಸೇವನೆ ಮಾಡಿ ಎನ್ನುತ್ತಾರೆ. ಅದಕ್ಕೆ ಬೆಸ್ಟ್ ಆಯ್ಕೆ ಆವಕಾಡೊ ಹಣ್ಣು (Avocado) ಇದನ್ನು ಬಟರ್ ಪಿಯರ್ ಎಂದೂ ಕರೆಯುತ್ತಾರೆ ಅಲ್ಲದೆ ಇದು ಮೆಕ್ಸಿಕೊದಲ್ಲಿ ಕಂಡು ಬರುವ ಸ್ಥಳೀಯ ಹಣ್ಣು. ಆದರೆ ನಮ್ಮಲ್ಲಿ ಇದನ್ನು ಜನ ಹೆಚ್ಚು ಹೆಚ್ಚು ತಿನ್ನಲು ಇಷ್ಟಪಡುವುದಿಲ್ಲ, ಅದರಲ್ಲಿಯೂ ಕೆಲವರಿಗೆ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದೇ ತಿಳಿದಿಲ್ಲ. ನಿಮಗೆ ಗೊತ್ತಾ? ನೀವು ಊಹಿಸಲು ಸಾಧ್ಯವಾಗದ ಪ್ರಯೋಜನಗಳು ಇದರಲ್ಲಿದೆ. ಅದಕ್ಕಾಗಿಯೇ ಇವುಗಳನ್ನು ಬೆಳಗ್ಗಿನ ಉಪಾಹಾರದಲ್ಲಿ ಸೇವನೆ ಮಾಡಿ ಎಂದು ವೈದ್ಯರು ಕೂಡ ಹೇಳುತ್ತಾರೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಆರೋಗ್ಯಕರ ಕೊಬ್ಬುಗಳು, ಫೈಬರ್, ವಿಟಮಿನ್ಗಳು ಮತ್ತು ಖನಿಜಗಳನ್ನು ಒಳಗೊಂಡಿದೆ. ಹಾಗಾದರೆ ಬೆಳಿಗ್ಗೆ ತಿಂಡಿಯ ಜೊತೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಿ.

ಆವಕಾಡೊ ಹಣ್ಣಿನ ಪ್ರಯೋಜನಗಳು:

ಹೃದಯದ ಆರೋಗ್ಯ:

ಆವಕಾಡೊದಲ್ಲಿರುವ ಆರೋಗ್ಯಕರ ಕೊಬ್ಬುಗಳು, ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನಗೊಳಿಸಲು ಇದು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ:

ಆವಕಾಡೊದಲ್ಲಿರುವ ನಾರಿನಾಂಶ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.

ಇದನ್ನೂ ಓದಿ
Image
ಅಬ್ಸ್ಟ್ರಕ್ಟಿವ್ ಸ್ಲೀಪ್ ಅಪ್ನಿಯಾ ಲಕ್ಷಣಗಳು ಹೇಗಿರುತ್ತೆ ಗೊತ್ತಾ?
Image
ಎಸಿಯಲ್ಲಿ ಗಂಟೆಗಟ್ಟಲೆ ಸಮಯ ಕಳೆಯುವವರಿಗೆ ಈ ಸಮಸ್ಯೆ ತಪ್ಪಿದ್ದಲ್ಲ
Image
ರಾತ್ರಿ ಈ ರೀತಿ ಲಕ್ಷಣ ಕಂಡು ಬರುವುದು ಕಿಡ್ನಿ ಫೇಲ್ಯೂರ್ ಆಗುವ ಮುನ್ಸೂಚನೆ

ತೂಕ ನಿಯಂತ್ರಣ:

ಆವಕಾಡೊದಲ್ಲಿನ ಫೈಬರ್ ಮತ್ತು ಕೊಬ್ಬುಗಳು ನಿಮಗೆ ಹೆಚ್ಚು ಹೊತ್ತು ಹೊಟ್ಟೆ ತುಂಬಿರುವಂತೆ ಮಾಡುತ್ತದೆ, ಇದರಿಂದಾಗಿ ತೂಕ ನಿಯಂತ್ರಿಸಲು ಸಹಾಯವಾಗುತ್ತದೆ. ಹಾಗಾಗಿ ಪ್ರತಿನಿತ್ಯ ಈ ಹಣ್ಣನ್ನು ಸೇವನೆ ಮಾಡುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದು.

ಉರಿಯೂತದ ವಿರುದ್ಧ ರಕ್ಷಣೆ:

ಆವಕಾಡೊ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯ ಕಾಪಾಡುತ್ತದೆ:

ಈ ಹಣ್ಣಿನಲ್ಲಿ ವಿಟಮಿನ್ ಇ ಮತ್ತು ಸಿ ಸಮೃದ್ಧವಾಗಿದ್ದು ಇದು ಚರ್ಮವನ್ನು ಆರೋಗ್ಯವಾಗಿ ಇಡುವುದಕ್ಕೆ ಸಹಾಯ ಮಾಡುತ್ತದೆ. ಅಲ್ಲದೆ ವಿಟಮಿನ್ ಸಿ ಕಾಲಜನ್ ಉತ್ಪಾದನೆಯನ್ನು ಬೆಂಬಲಿಸುತ್ತದೆ.

ಇದನ್ನೂ ಓದಿ: ಪಾಲಕ್ ಎಲೆ, ಕಿತ್ತಳೆ, ಆವಕಾಡೊ ಚರ್ಮದ ಆರೋಗ್ಯಕ್ಕೆ ಪ್ರತಿದಿನ ಸೇವಿಸಿ

ಪೋಷಕಾಂಶಗಳು:

ಆವಕಾಡೊ ವಿಟಮಿನ್ ಕೆ, ವಿಟಮಿನ್ ಇ, ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಆವಕಾಡೊವನ್ನು ಬೆಳಗಿನ ಉಪಾಹಾರ, ಸಲಾಡ್, ಸ್ಯಾಂಡ್‌ವಿಚ್‌ಗಳು ಮತ್ತು ಇತರ ಭಕ್ಷ್ಯಗಳಲ್ಲಿ ಬಳಕೆ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ